ಸಂಗ್ರಹ ಚಿತ್ರ 
ರಾಜಕೀಯ

ಏಪ್ರಿಲ್ 3ಕ್ಕೆ ದೆಹಲಿಗೆ ಸಿಎಂ ಸಿದ್ದರಾಮಯ್ಯ: ರಾಹುಲ್ ಗಾಂಧಿ ಭೇಟಿ; ಹೆಚ್ಚುವರಿ DCM ಹುದ್ದೆ ಸೃಷ್ಟಿಗೆ ಮನವಿ?

ರಾಹುಲ್ ಗಾಂಧಿಯವರೊಂದಿಗೆ ಸುಮಾರು ಅರ್ಧ ಗಂಟೆಗಳ ಕಾಲ ಮುಖಾಮುಖಿ ಸಭೆ ನಡೆಸಲಿದ್ದು, ಈ ಸಮಯದಲ್ಲಿ ಎರಡೂವರೆ ವರ್ಷಗಳ ಅಧಿಕಾರಾವಧಿಯ ನಂತರವೂ ತಾವೇ ಸಿಎಂ ಆಗಿ ಮುಂದುವರಿಯುವ ವಿಚಾರದ ಕುರಿತು ಮಾತುಕತೆ ನಡೆಸಲಿದ್ದಾರೆ.

ಬೆಂಗಳೂರು: ಏಪ್ರಿಲ್.3ರಂದು ರಾಷ್ಟ್ರ ರಾಜಧಾನಿ ನವದೆಹಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡುತ್ತಿದ್ದು, ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಹೆಚ್ಚುವರಿ ಉಪಮುಖ್ಯಂತ್ರಿ ಹುದ್ದೆ ಸೃಷ್ಟಿ ವಿಚಾರವನ್ನು ಪ್ರಸ್ತಾಪಿಸುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್ ಅವರು ಎಐಸಿಸಿ ಕಚೇರಿಯಲ್ಲಿ ರಾಹುಲ್ ಅವರೊಂದಿಗೆ ಸಭೆ ನಡೆಸುವುದನ್ನು ಖಚಿತಪಡಿಸಿದ್ದಾರೆಂದು ಸಿಎಂ ಆಪ್ತ ಮೂಲಗಳು ಮಾಹಿತಿ ನೀಡಿವೆ.

ದೆಹಲಿ ಭೇಟಿ ವೇಳೆ ಸಿದ್ದರಾಮಯ್ಯ ಅವರು, ರಾಹುಲ್ ಗಾಂಧಿಯವರೊಂದಿಗೆ ಸುಮಾರು ಅರ್ಧ ಗಂಟೆಗಳ ಕಾಲ ಮುಖಾಮುಖಿ ಸಭೆ ನಡೆಸಲಿದ್ದು, ಈ ಸಮಯದಲ್ಲಿ ಎರಡೂವರೆ ವರ್ಷಗಳ ಅಧಿಕಾರಾವಧಿಯ ನಂತರವೂ ತಾವೇ ಸಿಎಂ ಆಗಿ ಮುಂದುವರಿಯುವ ವಿಚಾರದ ಕುರಿತು ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿರುವವರೆಗೆ ಡಿ ಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಲು ಸಾಧ್ಯವಿಲ್ಲ ಎಂಬುದು ಅವರಿಗೆ (ಸಿದ್ದರಾಮಯ್ಯ) ತಿಳಿದಿದೆ. ಹೀಗಾಗಿ ಪಕ್ಷದ ಹಿತದೃಷ್ಟಿಯಿಂದ ಜಿಲ್ಲಾ ಪಂಚಾಯತ್/ತಾಪಂ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗೆ ಮುನ್ನ ಹೆಚ್ಚಿನ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ವಿಚಾರವನ್ನು ರಾಹುಲ್ ಮುಂದೆ ಪ್ರಸ್ತಾಪಿಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.

ಶಿವಕುಮಾರ್ ಅವರು ಡಿಸಿಎಂ ಆಗಿರುವುದರ ಜೊತೆಗೆ ಪ್ರಮುಖ (ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ) ಖಾತೆಗಳನ್ನು ಹೊಂದಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹತ್ತಿರ ಬರುತ್ತಿದ್ದು, ಪಕ್ಷದ ಹಿತದೃಷ್ಟಿಯಿಂದ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮುಂದುವರಿಸಲು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮತ್ತು ಎಐಸಿಸಿ ಅಧ್ಯಕ್ಷರಾಗಿರುವ ಖರ್ಗೆ ಅವರು ಬೆಂಬಲ ವ್ಯಕ್ತಪಡಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಲ್ಲಿ ಮುಂದುವರಿಕೆಯು ರಾಹುಲ್ ಅವರ ನಿರ್ಧಾರವನ್ನು ಅವಲಂಬಿಸಿರುತ್ತದೆ. ಶುಕ್ರವಾರ ವೇಣುಗೋಪಾಲ್ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆಂದು ಮತ್ತೊಬ್ಬ ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದ್ದಾರೆ.

ಹೈಕಮಾಂಡ್ ಭೇಟಿ ವೇಳೆ ಸಿದ್ದರಾಮಯ್ಯ ಅವರು ಮತ್ತಷ್ಟು ಡಿಸಿಎಂ ಹುದ್ದೆಗಳನ್ನು ರಚಿಸುವುದರಿಂದಾಗುವ ಅನುಕೂಲಗಳನ್ನೂ ರಾಹುಲ್ ಅವರಿಗೆ ಸಿದ್ದರಾಮಯ್ಯ ಅವರು ವಿವರಿಸಲಿದ್ದಾರೆಂದು ಮೂಲಗಳು ತಿಳಿಸಿವೆ.

ಹೆಚ್ಚುವರಿ ಡಿಸಿಎಂ ಹುದ್ದೆಯನ್ನು ರಚಿಸಿ, ಹುದ್ದೆಯನ್ನು ವೀರಶೈವ-ಲಿಂಗಾಯತ ಸಮುದಾಯದ ಸದಸ್ಯರಿಗೆ ಮತ್ತು ಎಸ್‌ಸಿಗೆ ನೀಡಿದರೆ ಅದರಿಂದಾಗುವ ಅನುಕೂಲಗಳನ್ನು ಸಿದ್ದರಾಮಯ್ಯ ಅವರು ವಿವರಿಸಲಿದ್ದಾರೆ.

ಜೊತೆಗೆ ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನೀಡಿದ್ದು ಹಾಗೂ ಪಕ್ಷಕ್ಕೆ ಮುಜುಗರವಾಗಿದ ವಿಚಾರವನ್ನೂ ಪ್ರಸ್ತಾಪಿಸಿ, ಲಾಭ ಪಡೆಯುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಹನಿಟ್ರ್ಯಾಪ್ ಪ್ರಕರಣ ಹಾಗೂ ಎಂಎಲ್‌ಸಿ ರಾಜೇಂದ್ರ ಸುಪಾರಿ ಹತ್ಯೆ ಸಂಚು ಪ್ರಕರಣ ಸದ್ದು ಮಾಡುತ್ತಿದ್ದು, ಈ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT