ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ 
ರಾಜಕೀಯ

ಯುಗಾದಿ ಹೊಸ ತೊಡಕು ದಿನವೇ ಹೊಸ ಹೊಸ ದರ ವಿಧಿಸಿ ದರ ಬೀಜಾಸುರ ಸರ್ಕಾರ ವಿಜೃಂಭಿಸಿದೆ: HDK

ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ. ಮಹಮ್ಮದ್ ಘಜ್ನಿ, ಮಹಮ್ಮದ್ ಘೋರಿ ಕೂಡ ನಾಚುವಂತೆ ಕನ್ನಡಿಗರ ಮೇಲೆ ದರ ಏರಿಕೆ ದಂಡಯಾತ್ರೆ ನಡೆಸುತ್ತಿದೆ.

ಬೆಂಗಳೂರು: ರಾಜ್ಯದಲ್ಲಿ 'ದರಬೀಜಾಸುರ' ಸರ್ಕಾರ ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಡೀಸೆಲ್ ದರ ಲೀಟರಿಗೆ ರೂ.2 ಏರಿಕೆಯಾಗಿದೆ. ದಿನಕ್ಕೊಂದು ಸುಳ್ಳು, ತಿಂಗಳಿಗೊಂದು ದರ ಏರಿಕೆಯಾಗುತ್ತಿದೆ. ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರಕಾರದ ಆಡಳಿತದ ವೈಖರಿ ಇದು ಎಂದು ಕಿಡಿಕಾರಿದ್ದಾರೆ.

ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ. ಮಹಮ್ಮದ್ ಘಜ್ನಿ, ಮಹಮ್ಮದ್ ಘೋರಿ ಕೂಡ ನಾಚುವಂತೆ ಕನ್ನಡಿಗರ ಮೇಲೆ ದರ ಏರಿಕೆ ದಂಡಯಾತ್ರೆ ನಡೆಸುತ್ತಿದೆ. ದುರಾಡಳಿತದಿಂದ ಸಮೃದ್ಧ ಕರ್ನಾಟಕವನ್ನು ಬರ್ಬಾದ್ ಮಾಡಿರುವ ಕಾಂಗ್ರೆಸ್ ಕಂಪನಿ ಸರಕಾರ ದರಬೀಜಾಸುರ ರೂಪ ತಳೆದು ಜನರ ರಕ್ತ ಹೀರುತ್ತಿದೆ.

ನೀರು, ಮೆಟ್ರೋ ರೈಲು, KSRTC ಬಸ್ ಟಿಕೆಟ್, ಹಾಲು (3 ಸಲ ದರ ಏರಿಕೆ), ಮೊಸರು, ವಿದ್ಯುತ್, ಮುದ್ರಾಂಕ, ಮಾರ್ಗದರ್ಶಿ ಮೌಲ್ಯ, ಅಬ್ಕಾರಿ ಸುಂಕ, ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಗಳ ಶುಲ್ಕ, ಶವದ ಮರಣೋತ್ತರ ಪರೀಕ್ಷೆ ಶುಲ್ಕ, ವೈದ್ಯಕೀಯ ಪ್ರಮಾಣ ಪತ್ರದ ದರ, ಲ್ಯಾಬ್ ನಲ್ಲಿ ಪರೀಕ್ಷೆ ಶುಲ್ಕ, ವೃತ್ತಿಪರ ತೆರಿಗೆ, ಬಿತ್ತನೆ ಬೀಜಗಳ ದರವನ್ನು ಸರ್ಕಾರ ಏರಿಕೆ ಮಾಡಿದೆ. ಇಷ್ಟು ಸಾಲದೆಂಬಂತೆ ಜನರ ಮೇಲೆ ಇಂದಿನಿಂದ (ಏಪ್ರಿಲ್ 1ರಿಂದ) ಕಸದ ಸೆಸ್ ಹೇರುತ್ತಿದೆ ದರ ಬೀಜಾಸುರ ಸರಕಾರ. ಕಸ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಮಾಡಲು ಹೊರಟಿದೆ ಎಂದು ಆರೋಪಿಸಿದ್ದಾರೆ.

ಕಳೆದ ಹತ್ತು ತಿಂಗಳಲ್ಲಿ ಡಿಸೇಲ್ ಪ್ರತಿ ಲೀಟರಿಗೆ ರೂ.5 ಏರಿಕೆ ಭಾಗ್ಯವನ್ನು ಸರ್ಕಾರ ಕೊಟ್ಟಿದೆ. ಯುಗಾದಿ ಹೊಸ ತೊಡಕು ದಿನವೇ ಹೊಸ ಹೊಸ ದರ ವಿಧಿಸಿ ದರ ಬೀಜಾಸುರ ಸರಕಾರ ವಿಜೃಂಭಿಸಿದೆ. ಬೆಳಗ್ಗೆ ನಿದ್ರೆಯಿಂದ ಜನರೆದ್ದರೆ ಸುಲಿಗೆ ಬರೆ ಹಾಕುತ್ತಿದೆ ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ. ಕೈ ಕಂಪನಿ ಸರಕಾರಕ್ಕೆ ಕಣ್ಣಿಲ್ಲ, ಕರುಣೆಯೂ ಇಲ್ಲ. ಕಿತ್ತು ತಿನ್ನುವ ವಿಕೃತಿಯನ್ನು ಹತ್ತಿಕ್ಕಲು ಜನರು ಬೀದಿಗಿಳಿದು ದಂಗೆ ಎಳದೇ ವಿಧಿ ಇಲ್ಲ ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ದುಬೈ ಏರ್‌ಪೋರ್ಟ್‌ ಬಳಿ ಡ್ರೋನ್‌ ದಾಳಿ; ಭಾರೀ ಬೆಂಕಿ, ವಿಮಾನ ಸಂಚಾರ ತಾತ್ಕಾಲಿಕ ಸ್ಥಗಿತ

ಹಾರ್ಮುಜ್ ನಿಂದ ದೇಶಕ್ಕೆ ತೈಲ ಹಡಗುಗಳ ಸುಗಮ ಸಂಚಾರ: ಇರಾನ್ ನ ಭಾರತ ಒಪ್ಪಿಸಿದ್ದು ಹೇಗೆ?: ಜೈಶಂಕರ್ ಬಿಚ್ಚಿಟ್ಟ ಮಾಹಿತಿ ಇದು...

ಒಡಿಶಾದ SCB ವೈದ್ಯಕೀಯ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ: ಕನಿಷ್ಠ 10 ಮಂದಿ ಸಾವು, ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

ಗಡುವು ಮೀರಿ 5 ತಿಂಗಳಾದರೂ ಮುಕ್ತಾಯಗೊಳ್ಳದ ಯಶವಂತಪುರ, ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳ ನವೀಕರಣ ಕಾಮಗಾರಿ!

ರಾಜ್ಯಸಭೆಗೆ 26 ಮಂದಿ ಅವಿರೋಧ ಆಯ್ಕೆ: 3ರಾಜ್ಯಗಳಲ್ಲಿ ಬಿಗ್ ಫೈಟ್; ಮೇಲ್ಮನೆಯಲ್ಲಿ ಬಿಜೆಪಿಗೆ ಮತ್ತಷ್ಟು ಬಲ!

SCROLL FOR NEXT