ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ ವಿನಯ್. 
ರಾಜಕೀಯ

ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣ: ಸರ್ಕಾರದ ವಿರುದ್ಧ BJP ವಾಗ್ದಾಳಿ, ಪಾರದರ್ಶಕ ತನಿಖೆಗೆ ಆಗ್ರಹ

ವಿನಯ್‌ ಸೋಮಯ್ಯ ಅವರ ಕೊಲೆಗೆ ಕಾರಣರಾದ ಎ.ಎಸ್.ಪೊನ್ನಣ್ಣ, ತೆನ್ನಿರಾ ಮೈನಾ, ಮಂಥರ್‌ ಗೌಡ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದೆ.

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದ್ದು, ಶಾಸಕ ಪೊನ್ನಣ್ಣ ಬಂಧನಕ್ಕೆ ಆಗ್ರಹಿಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಅಭಿವೃದ್ಧಿಯ ಬಗ್ಗೆ ಪ್ರಶ್ನಿಸಿದರು ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದೆ ಕೊಲೆಗಡುಕ ಕಾಂಗ್ರೆಸ್ ಸರ್ಕಾರ. ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ, ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ, ಶಾಸಕ ಪೊನ್ನಣ್ಣ ಅವರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರ್ವಜನಿಕವಾಗಿ ಪ್ರಶ್ನಿಸಿದರು ಎಂಬ ಕಾರಣಕ್ಕೆ ಅವರ ಮೇಲೆ ಇಲ್ಲಸಲ್ಲದ ಕೇಸು ಹಾಕಿ, ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಮಾನಸಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿದೆ.

ಅಲ್ಲದೆ, ವಿನಯ್‌ ಸೋಮಯ್ಯ ಅವರ ಕೊಲೆಗೆ ಕಾರಣರಾದ ಎ.ಎಸ್.ಪೊನ್ನಣ್ಣ, ತೆನ್ನಿರಾ ಮೈನಾ, ಮಂಥರ್‌ ಗೌಡ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪೋಸ್ಟ್ ಮಾಡಿ, ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೂಲಂಕುಶವಾಗಿ ಪಾರದರ್ಶಕ ತನಿಖೆ ನಡೆದು ಸತ್ಯ ಹೊರಬರಬೇಕಿದೆ ಎಂದು ಹೇಳಿದ್ದಾರೆ.

ರಾಜಕೀಯ ಕಾರಣಗಳು ಹಾಗೂ ಒತ್ತಡಗಳ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತ ಎಫ್ಐಆರ್ ನಿಂದಾಗಿ ವಿನಯ್ ಆತ್ಮಹತ್ಯೆಗೆ ಶರಣಾಗಿರಬಹುದಾದ ಸಾಧ್ಯತೆ ಮೇಲ್ನೋಟಕ್ಕೆ ಕಂಡು ಬರುತ್ತಿದ್ದು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಕಾರ್ಯಕರ್ತರ ವಿರುದ್ಧ ಅನಗತ್ಯ ಕಿರುಕುಳ, ಒತ್ತಡ, ದೌರ್ಜನ್ಯಗಳು ನಡೆಯುತ್ತಿದೆ. ಈ ನಿಟ್ಟಿನಲ್ಲಿ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಯ ಪ್ರಕರಣದ ತನಿಖೆಯು ಅತ್ಯಂತ ಪಾರದರ್ಶಕವಾಗಿ ನಡೆಯಬೇಕೆಂದು ಆಗ್ರಹಿಸುತ್ತೇನೆ.

ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಮಾನಸಿಕ ಒತ್ತಡ ಉಂಟಾಗಲು ಕಾರಣರಾದವರ ವಿರುದ್ಧ ರಾಜ್ಯ ಸರ್ಕಾರ ಈ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮೃತ ಕಾರ್ಯಕರ್ತ ವಿನಯ್ ಅವರ ನಿಧನದ ನೋವಿನಲ್ಲಿರುವ ಕುಟುಂಬ ವರ್ಗದವರಿಗೆ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ವಿನಯ್ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel