ಎನ್ ಎಸ್ ಬೋಸರಾಜು ಮತ್ತು ಸತೀಶ್ ಜಾರಕಿಹೊಳಿ 
ರಾಜಕೀಯ

ನೀರಾವರಿಯಲ್ಲಿ ಬೋಸರಾಜು ಮಗನ ದರ್ಬಾರ್; ಲೋಕೋಪಯೋಗಿ ಇಲಾಖೆಯಲ್ಲಿ ಸತೀಶ್ ಕುಟುಂಬಸ್ಥರ ಹಸ್ತಕ್ಷೇಪ: ಗುತ್ತಿಗೆದಾರರ ಸಂಘ ಆಕ್ರೋಶ

ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಈಗ ಸಿಡಿದೆದ್ದಿದ್ದು ಹಣ ಬಿಡುಗಡೆಗೆ ಕಾಣದ ಕೈಗಳು, ಮಧ್ಯವರ್ತಿಗಳ ಕಾಟ ಹೆಚ್ಚಾಗಿದೆ ಎಂದು ಕರ್ನಾಟಕ ಸ್ಟೇಟ್‌ ಕಂಟ್ರಾಕ್ಟರ್ಸ್‌ ಅಸೋಸಿಯೇಷನ್‌ ಆರೋಪಿಸಿದೆ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರಿ ಸದ್ದು ಮಾಡಿ, ಅಂದಿನ ವಿರೋಧ ಪಕ್ಷಕ್ಕೆ ಪ್ರಮುಖ ಅಸ್ತ್ರವಾಗಿದ್ದ ಗುತ್ತಿಗೆ ಹಾಗೂ ಬಿಲ್ ಪಾವತಿಗೆ ‘ಕಮಿಷನ್’ ಆರೋಪ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ಮತ್ತೆ ಪ್ರತಿಧ್ವನಿಸಿದೆ.

ಸಿಎಂ ಸಿದ್ದರಾಮಯ್ಯನವರಿಗೆ ಏಪ್ರಿಲ್ 3 ರಂದು ಪತ್ರ ಬರೆದ ಸಂಘ ಲೋಕೋಪಯೋಗಿ ಇಲಾಖೆ, ನಾಲ್ಕು ನೀರಾವರಿ ನಿಗಮ ಮತ್ತು ಸಣ್ಣ ನೀರಾವರಿ ಇಲಾಖೆಯಲ್ಲಿ ಕಾಣದ ಕೈಗಳ ಬಗ್ಗೆ ಚರ್ಚೆ ಮಾಡಿ ಸಣ್ಣ ಗುತ್ತಿಗೆದಾರರಿಗೆ ನ್ಯಾಯ ಒದಗಿಸುವಂತೆ ಪತ್ರ ಬರೆದಿದೆ.

ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಈಗ ಸಿಡಿದೆದ್ದಿದ್ದು ಹಣ ಬಿಡುಗಡೆಗೆ ಕಾಣದ ಕೈಗಳು, ಮಧ್ಯವರ್ತಿಗಳ ಕಾಟ ಹೆಚ್ಚಾಗಿದೆ ಎಂದು ಕರ್ನಾಟಕ ಸ್ಟೇಟ್‌ ಕಂಟ್ರಾಕ್ಟರ್ಸ್‌ ಅಸೋಸಿಯೇಷನ್‌ ಆರೋಪಿಸಿದೆ.

ಸಣ್ಣ ಮತ್ತು ಮಧ್ಯಮ ವರ್ಗದ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಧ್ಯವರ್ತಿಗಳ ಕಾಟ ಕೊಡುತ್ತಿದ್ದಾರೆ. ಜೇಷ್ಠತೆ ಪಾಲಿಸದೇ ಸ್ಪೆಷಲ್ ಎಲ್‌ಓಸಿ ಸೃಷ್ಟಿ ಮಾಡಿ ಹಣ ಬಿಡುಗಡೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಸತೀಶ್ ಜಾರಕಿಹೊಳಿ ಕುಟುಂಬಸ್ಥರು, ನೀರಾವರಿ ಇಲಾಖೆಯಲ್ಲಿ ಬೋಸರಾಜ್‌ ಮಗ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರವನ್ನು ಶೇ 40ರ ಕಮಿಷನ್ ಸರ್ಕಾರ’ ಎಂದು ಜರೆದಿದ್ದ ಕಾಂಗ್ರೆಸ್ ನಾಯಕರು, ರಾಜ್ಯದಾದ್ಯಂತ ಆಂದೋಲನವನ್ನೇ ನಡೆಸಿದ್ದರು. ಇದು, ಆ ಪಕ್ಷಕ್ಕೆ ವಿಧಾನಸಭೆ ಚುನಾವಣೆಯಲ್ಲಿ ವರವಾಗಿ ಪರಿಣಮಿಸಿತ್ತು. ಈಗ ಗುತ್ತಿಗೆದಾರರ ಸಂಘ ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಹಲವು ಆರೋಪಗಳನ್ನು ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್