ಬಸವರಾಜ ಬೊಮ್ಮಾಯಿ 
ರಾಜಕೀಯ

ಕಾಂಗ್ರೆಸ್ ಸರ್ಕಾರದ ಶೇ.60ರಷ್ಟು ಕಮಿಷನ್ ಆರೋಪವನ್ನೂ ಸೇರಿಸಿ SIT ತನಿಖೆ ನಡೆಸಲಿ: ಬೊಮ್ಮಾಯಿ

ಹಿಂದಿನ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಬಗ್ಗೆ ಸುಳ್ಳು ಅಪಪ್ರಚಾರ ಮಾಡಿದ್ದರು. ಅದರ ತನಿಖೆಗಾಗಿ ಆಯೋಗ ರಚನೆ ಮಾಡಿದ್ದರು. ಆ ಕಮಿಷನ್‌ ವರದಿಯಲ್ಲಿ ಏನಿದೆ ಎನ್ನುವುದು ಸಾರ್ವಜನಿಕರಿಗೂ ಗೊತ್ತಾಗಬೇಕು.

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಶೇ.60ರಷ್ಟು ಕಮಿಷನ್ ಆರೋಪ ಕೇಳಿ ಬಂದಿದ್ದು, ಈ ಆರೋಪವನ್ನೂ ಸೇರಿಸಿ ಎಸ್ಐಟಿ ತನಿಖೆ ನಡೆಸಬೇಕೆಂದು ಬಿಜೆಪಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಶೇ 40 ಕಮಿಷನ್‌ ಆರೋಪದ ತನಿಖೆಗೆ ಎಸ್‌ಐಟಿ ರಚಿಸಲು ತೀರ್ಮಾನಿಸಿದೆ. ಹಿಂದಿನ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಬಗ್ಗೆ ಸುಳ್ಳು ಅಪಪ್ರಚಾರ ಮಾಡಿದ್ದರು. ಅದರ ತನಿಖೆಗಾಗಿ ಆಯೋಗ ರಚನೆ ಮಾಡಿದ್ದರು. ಆ ಕಮಿಷನ್‌ ವರದಿಯಲ್ಲಿ ಏನಿದೆ ಎನ್ನುವುದು ಸಾರ್ವಜನಿಕರಿಗೂ ಗೊತ್ತಾಗಬೇಕು. ಹಾಗೆಯೇ, ಎರಡು ವರ್ಷದಲ್ಲಿ ಈ ಸರ್ಕಾರದ ವಿರುದ್ಧ ಲೋಕೋಪಯೋಗಿ, ಅಬಕಾರಿ, ವಿದ್ಯುತ್‌ ಗುತ್ತಿಗೆದಾರರ ಸಂಘ ಮಾಡಿರುವ ಶೇ 60 ಕಮಿಷನ್‌ ಆರೋಪದ ಬಗ್ಗೆಯೂ ಎಸ್‌ಐಟಿ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.

‘ತಮ್ಮ ಸರ್ಕಾರದ ಮೇಲಿನ ಆರೋಪಕ್ಕೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಕಮಿಷನ್‌ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ ಎಂದಿದ್ದಾರೆ. ನಮ್ಮ ಸರ್ಕಾರದ ವಿರುದ್ಧ ಸುಳ್ಳು ಪ್ರಚಾರ ಮಾಡಿದಾಗ ಮುಖ್ಯಮಂತ್ರಿಯಾಗಿದ್ದ ನಾನು ಇದೇ ಮಾತು ಹೇಳಿದ್ದೆ. ಯಾರೂ ದೂರು ಕೊಡಲಿಲ್ಲ. ಅವರ ಬಳಿ ದಾಖಲೆ ಇರಲಿಲ್ಲ ಎಂದು ಹೇಳಿದರು.

ಸರ್ಕಾರದ ಆರ್ಥಿಕ ಸ್ಥಿತಿ ಕುರಿತು ಮಾತನಾಡಿ, ಈ ಸರ್ಕಾರದ ಬಳಿಕ ಪೂರ್ಣಗೊಂಡ ಕಾಮಗಾರಿಗಳಿಗೆ ಪಾವತಿಸಲು ಹಣವಿಲ್ಲ. ಹೀಗಾಗಿ ಟೆಂಡರ್ ನೀಡಿದ್ದರುೂ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಗುತ್ತಿಗೆದಾರರು ಹಿಂಜರಿಯುತ್ತಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT