ಕೆ. ಎಚ್. ಮುನಿಯಪ್ಪ 
ರಾಜಕೀಯ

ಕರ್ನಾಟಕದಲ್ಲಿ ದಲಿತರು ಸಿಎಂ ಆಗುವ ಕಾಲ ಇನ್ನೂ ಬಂದಿಲ್ಲ: ಸಚಿವ ಕೆ.ಎಚ್ ಮುನಿಯಪ್ಪ

ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಎಲ್ಲಾ ಸಮುದಾಯಗಳಿಗೆ ಸಮಾನತೆಯನ್ನು ಒದಗಿಸಲು ಕಾಂಗ್ರೆಸ್ ಯಾವಾಗಲೂ ಬದ್ಧವಾಗಿದೆ" ಎಂದು ದಲಿತ ಸಮುದಾಯದ ಹಿರಿಯ ಕಾಂಗ್ರೆಸ್ ನಾಯಕ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಬೆಂಗಳೂರು: ಕರ್ನಾಟಕದಲ್ಲಿ ದಲಿತರು ಸಿಎಂ ಆಗುವ ಕಾಲ ಇನ್ನೂ ಬಂದಿಲ್ಲ. ಪ್ರಸ್ತುತ ಸಿದ್ದರಾಮಯ್ಯ ಸಿಎಂ ಆಗಿರುವಾಗ ಆ ವಿಚಾರದ ಬಗ್ಗೆ ಮಾತನಾಡುವುದು ಸೂಕ್ತವಲ್ಲಾ. ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಶನಿವಾರ ಹೇಳಿದರು.

ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕ ಸೇರಿದಂತೆ ಇಂತಹ ಎಲ್ಲಾ ವಿಚಾರಗಳ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದ್ದು,ಆ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗುತ್ತಾರೆ. ಸಮಯ ಬಂದಾಗ ಸಿಎಂ ಸ್ಥಾನಕ್ಕೆ ಅವಕಾಶ ನೀಡುವಂತೆ ದಲಿತ ಸಮುದಾಯದ ಮನವಿಯೂ ಇದೆ ಎಂದು ಒಪ್ಪಿಕೊಂಡರು.

ಸದ್ಯ ಸಿದ್ದರಾಮಯ್ಯ ಸಿಎಂ ಆಗಿದ್ದು, ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ. ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಎಲ್ಲಾ ಸಮುದಾಯಗಳಿಗೆ ಸಮಾನತೆಯನ್ನು ಒದಗಿಸಲು ಕಾಂಗ್ರೆಸ್ ಯಾವಾಗಲೂ ಬದ್ಧವಾಗಿದೆ" ಎಂದು ದಲಿತ ಸಮುದಾಯದ ಹಿರಿಯ ಕಾಂಗ್ರೆಸ್ ನಾಯಕ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಧರಂ ಸಿಂಗ್ ಮುಖ್ಯಮಂತ್ರಿಯಾಗಿದ್ದಾಗ ತಮ್ಮ ಉತ್ತರಾಧಿಕಾರಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರಂತಹ ಹಿರಿಯ ನಾಯಕರು ಅಧಿಕಾರ ವಹಿಸಿಕೊಳ್ಳಬೇಕು ಎಂದು ಹೇಳಿದ್ದನ್ನು ಸ್ಮರಿಸಿದ ಮುನಿಯಪ್ಪ, 2013ರಲ್ಲಿ ಸಿದ್ದರಾಮಯ್ಯ ಸಿಎಂ ಆದಾಗ ಚುನಾವಣೆಯಲ್ಲಿ ಸೋತರೂ ಅಂದು ಪಕ್ಷದ ಅಧ್ಯಕ್ಷರಾಗಿದ್ದ ಜಿ.ಪರಮೇಶ್ವರ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕಿತ್ತು ಎಂದರು.

'ದಲಿತ ಸಮುದಾಯದ ಯಾರಿಗಾದರೂ ಸಿಎಂ ಸ್ಥಾನ ನೀಡಬೇಕು ಎಂಬ ಆಸೆ ಇದೆ. ಆದರೆ ಅದಕ್ಕೆ ಇನ್ನೂ ಸಮಯ ಬಂದಿಲ್ಲ ಅನ್ನಿಸುತ್ತಿದೆ. ಪ್ರಸ್ತುತ ಸಿಎಂ ಇರುವಾಗ ಇಂತಹ ವಿಷಯಗಳನ್ನು ಚರ್ಚಿಸಲು ಸಾಧ್ಯವಿಲ್ಲ. ಪಕ್ಷದ ಅಧ್ಯಕ್ಷ ಸ್ಥಾನ ಸೇರಿದಂತೆ ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಮತ್ತು ಇದರಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪಕ್ಷದ ಅಧ್ಯಕ್ಷರಾಗಿ ಉಳಿಯುತ್ತಾರೆ ಮತ್ತು ಅದರ ಬಗ್ಗೆಯೂ ಒಮ್ಮತವಿದೆ. ಬದಲಾವಣೆಯ ಸಮಯ ಬಂದಾಗ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ.ಇದು ನಮ್ಮ ಮಟ್ಟದಲ್ಲಿ ಮಾಡುವ ಕೆಲಸವಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಒಪ್ಪಂದವನ್ನು ಉಲ್ಲೇಖಿಸಿ ಈ ವರ್ಷಾಂತ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಸಾಧ್ಯತೆಯ ಬಗ್ಗೆ ರಾಜಕೀಯ ವಲಯಗಳಲ್ಲಿ, ವಿಶೇಷವಾಗಿ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಊಹಾಪೋಹಗಳಿವೆ. ಆದರೆ ಪಕ್ಷದ ಹೈಕಮಾಂಡ್‌ನ ಸೂಚನೆ ಮೇರೆಗೆ ಇಂತಹ ಚರ್ಚೆಗಳಿಂದ ಹಿಂದೆ ಸರಿದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಪಕ್ಷದ ಕೆಲವರು ಆ ಸ್ಥಾನದ ಬಗ್ಗೆ ಬಹಿರಂಗವಾಗಿ ಆಸಕ್ತಿ ವ್ಯಕ್ತಪಡಿಸುತ್ತಿದ್ದಾರೆ. ಶಿವಕುಮಾರ್ ಎರಡು ಸ್ಥಾನಗಳನ್ನು ಹೊಂದಿರಬಾರದು. ಒಬ್ಬರಿಗೆ ಒಂದು ಹುದ್ದೆ ನೀತಿಗನುಗುಣವಾಗಿ ಶೀಘ್ರದಲ್ಲೇ ಹೊಸ ಅಧ್ಯಕ್ಷರನ್ನು ನೇಮಿಸಬೇಕು ಎಂದು ವಾದಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT