ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್  
ರಾಜಕೀಯ

2028 ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ, ಸ್ಥಳೀಯ ಚುನಾವಣೆಗಳಿಗೆ ಸಿದ್ಧರಾಗಿ: ಕಾರ್ಯಕರ್ತರಿಗೆ DCM ಡಿ.ಕೆ ಶಿವಕುಮಾರ್ ಕರೆ

ದಕ್ಷಿಣ ಕನ್ನಡದಲ್ಲಿ ನಾವು ಕೇವಲ ಎರಡು ಸ್ಥಾನಗಳನ್ನು ಗೆದ್ದಿದ್ದೇವೆ. ರಾಜ್ಯದಲ್ಲಿ ಬಲಿಷ್ಠ ಸರ್ಕಾರವಿದೆ. ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಅದರಲ್ಲಿ ಯಾವುದೇ ಸಂದೇಹವಿಲ್ಲ.

ಬೆಂಗಳೂರು: ದಕ್ಷಿಣ ಕನ್ನಡ ಹಿಂದುತ್ವದ ಕೋಟೆಯಲ್ಲ. ಎಲ್ಲಾ ಧರ್ಮಗಳ ಕೋಟೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಭಾನುವಾರ ಹೇಳಿದರು.

ಬೆಳ್ತಂಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡದಲ್ಲಿ ನಾವು ಕೇವಲ ಎರಡು ಸ್ಥಾನಗಳನ್ನು ಗೆದ್ದಿದ್ದೇವೆ. ರಾಜ್ಯದಲ್ಲಿ ಬಲಿಷ್ಠ ಸರ್ಕಾರವಿದೆ. ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಅದರಲ್ಲಿ ಯಾವುದೇ ಸಂದೇಹವಿಲ್ಲ. ಜನರು ಕಳೆದ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿ ಅವರನ್ನು ಆಯ್ಕೆ ಮಾಡಿದರು. ಆದರೆ ಪ್ರತಿ ಕುಟುಂಬಕ್ಕೂ ಸಹಾಯ ಮಾಡುತ್ತಿರುವುದು ಕಾಂಗ್ರೆಸ್, ಬಿಜೆಪಿಯಲ್ಲ. ನಾವು ಅದನ್ನು ಜನರಿಗೆ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ದಕ್ಷಿಣ ಕನ್ನಡ ಹಿಂದುತ್ವದ ಕೋಟೆ ಎಂದು ಯಾರು ಹೇಳುತ್ತಾರೆ? ದಕ್ಷಿಣ ಕನ್ನಡ ಎಲ್ಲಾ ಧರ್ಮಗಳ ಕೋಟೆ. ಇಲ್ಲಿನ ನೀರು, ದೇವಾಲಯಗಳು, ದರ್ಗಾ, ಪರಿಸರ ಮತ್ತು ವಾತಾವರಣ, ಸಮುದ್ರ - ಅವು ಒಂದು ಜಾತಿ ಅಥವಾ ಧರ್ಮಕ್ಕೆ ಸೇರಿವೆಯೇ? ಇಲ್ಲಿನ ಧಾರ್ಮಿಕ ಕೇಂದ್ರಗಳು ಎಲ್ಲರಿಗೂ ಸೇರಿವೆ. ಬಿಜೆಪಿ 'ಹಿಂದೂ ನಾವು ಒಂದು' ಎಂದು ಹೇಳುತ್ತದೆ ಆದರೆ, ನಾವು ಎಲ್ಲಾ ಹಿಂದೂಗಳು, ಕ್ರಿಶ್ಚಿಯನ್ನರು, ಮುಸ್ಲಿಮರು, ಜೈನರು, ಲಿಂಗಾಯತರು, ಒಕ್ಕಲಿಗರು, ಬಿಲ್ಲವರು ಮತ್ತು ಎಲ್ಲಾ ಸಮುದಾಯಗಳನ್ನು ಒಂದೇ ಎಂದು ಪರಿಗಣಿಸುತ್ತೇವೆ. ನಾವು ಸಮಾಜದ ಪ್ರತಿಯೊಂದು ವರ್ಗವನ್ನು ರಕ್ಷಿಸುತ್ತೇವೆಂದು ತಿಳಿಸಿದರು.

ನಂತರ ಪಕ್ಷದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಗಾಂಧಿ ತತ್ವಗಳು ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸುವ ಅಗತ್ಯವನ್ನು ಒತ್ತಿ ಹೇಳಿದರು.

ಬೆಳಗಾವಿಯಲ್ಲಿ ಕಾಂಗ್ರೆಸ್ 100 ವರ್ಷಗಳನ್ನು ಆಚರಿಸಿತು, ಕಾರ್ಯಕ್ರಮದಲ್ಲಿ ನಮ್ಮ ನಾಯಕರಾದ ರಾಹುಲ್ ಗಾಂಧಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 2025 ಅನ್ನು ಪಕ್ಷ ಸಂಘಟನೆಯ ವರ್ಷವೆಂದು ಘೋಷಿಸಿದರು. ಪಕ್ಷವು ಎಲ್ಲಾ ಧರ್ಮಗಳನ್ನು ಒಟ್ಟಿಗೆ ತೆಗೆದುಕೊಂಡು ಅವರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ಐದು ಗ್ಯಾರಟಿ ಯೋಜನೆಗಳನ್ನು ಘೋಷಿಸಿದಾಗ, ಬಿಜೆಪಿ ಸಾಧ್ಯವಿಲ್ಲ ಎಂದು ಹೇಳಿತ್ತು. ಆದರೆ, ಗೃಹಲಕ್ಷ್ಮಿ ಯೋಜನೆಯಡಿ ಇಂದು ರಾಜ್ಯದ ಮಹಿಳೆಯರು ಪ್ರಯೋಜನ ಪಡೆದಿದ್ದಾರೆ. ಬಿಜೆಪಿಗೆ ಮತ ಹಾಕಿದ ಮಹಿಳೆಯರು ಕಾಂಗ್ರೆಸ್‌ಗೆ ಧನ್ಯವಾದ ಹೇಳಿದ್ದಾರೆ. ಬಿಜೆಪಿ ಗ್ಯಾರಂಟಿ ಯೋಜನೆಗಳನ್ನು ತಡೆಯಲು ಪ್ರಯತ್ನಿಸುತ್ತಿದೆ, ಆದರೆ, ಅವರ ಈ ಪ್ರಯತ್ನ ಯಶಸ್ವಿಯಾಗುವುದಿಲ್ಲ. ಕಮಲದ ಹೂ ಕೊಳದಲ್ಲಿ ಅರಳಬೇಕು ಮತ್ತು ದಾನ ಮಾಡುವ ಕೈ ಅಧಿಕಾರದಲ್ಲಿರಬೇಕೆಂದು ತಿಳಿಸಿದರು.

ನನ್ನ ಸಮೀಕ್ಷೆ ಪ್ರಾರ 2028 ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಪಕ್ಷ 10 ಸ್ಥಾನಗಳನ್ನು ಗೆಲ್ಲಲಿದೆ, ಬೆಳ್ತಂಗಡಿಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಹೇಳಿದರು.

ಕರಾವಳಿ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸಲು ನಮ್ಮಲ್ಲಿ ಉತ್ತಮ ಯೋಜನೆಗಳಿವೆ. 2028 ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ. ಕರಾವಳಿ ಕರ್ನಾಟಕವು ಕಾಂಗ್ರೆಸ್ಸಿನ ಕೋಟೆಯಾಗಿತ್ತು. ಈಗ ಮತ್ತೆ ಈ ಪ್ರದೇಶವನ್ನು ಗೆಲ್ಲುವ ಭರವಸೆಯನ್ನು ಹೊಂದಿದ್ದೇವೆ. ಯಾವುದೇ ಸಮಯದಲ್ಲಿ ಸ್ಥಳೀಯ ಚುನಾವಣೆಗಳು ಘೋಷಣೆಯಾಗುವುದರಿಂದ ಕಾರ್ಯಕರ್ತರು ಸಿದ್ಧರಾಗಿರಬೇಕು.. ರಾಜಕೀಯದಲ್ಲಿ ಯಾರೂ ಶಾಶ್ವತವಲ್ಲ. ನಮ್ಮ ಪಕ್ಷದ ಕಾರ್ಯಕರ್ತರನ್ನು ರಕ್ಷಿಸುವುದು ನಮ್ಮ ಆದ್ಯತೆಯಾಗಿದೆ. ಅವರೇ ನಮ್ಮ ಸಂಪತ್ತು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಗೆ ತೀವ್ರ ಹಿನ್ನಡೆ: ಇರಾನ್ ವಿರುದ್ಧ ಯುದ್ಧ ವಿರೋಧಿಸಿ ಅಮೆರಿಕದ ಭಯೋತ್ಪಾದನಾ ನಿಗ್ರಹ ಮುಖ್ಯಸ್ಥ ರಾಜೀನಾಮೆ!

Iran War: 'ಮಾತುಕತೆ ಪ್ರಶ್ನೆಯೇ ಇಲ್ಲ.. ಅಮೆರಿಕ, ಇಸ್ರೇಲ್ ಶರಣಾಗಲೇಬೇಕು..': Mojtaba Khamenei ಎಚ್ಚರಿಕೆ

KD ಚಿತ್ರ ವಿವಾದ: 'ಅನುವಾದ ಮಾತ್ರ ನನ್ನದು.. ಹಾಡು ಪ್ರೇಮ್ ಅವರದ್ದು..' 'ಇದೊಂದರಿಂದ ಅವಮಾನವಾಗುತ್ತಿದೆ'..: ಗೀತ ರಚನೆಕಾರ ಶಾಕಿಂಗ್ ಹೇಳಿಕೆ

ಯಾರಾಗಲಿದ್ದಾರೆ ಭಾರತದ ಮುಂದಿನ CDS?: ಇಲ್ಲಿದೆ ಮಾಹಿತಿ

ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ?: ಸಂತ್ರಸ್ತೆಯ ಮಗಳ ಮೇಲೂ ಕಣ್ಣು, ಆಡಿಯೋ-ವಿಡಿಯೋ ವೈರಲ್..! ಅಮಾನತು

SCROLL FOR NEXT