ಖರ್ಗೆ, ಸಿದ್ದರಾಮಯ್ಯ 
ರಾಜಕೀಯ

ಸಿಎಂ ಸಿದ್ದರಾಮಯ್ಯ ಸೇರಿದಂತೆ ಕೆಲ ಕಾಂಗ್ರೆಸ್ ನಾಯಕರ ಅಸೂಕ್ಷ್ಮ, ನಾಚಿಕೆಗೇಡಿನ ಹೇಳಿಕೆ: ಖರ್ಗೆ, ರಾಹುಲ್ ಗೆ ಪಕ್ಷದ ಮೇಲೆ ಹಿಡಿತ ಇಲ್ಲವೇ; ಬಿಜೆಪಿ ಪ್ರಶ್ನೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಪಕ್ಷದ ಮೇಲೆ ಹಿಡಿತವಿಲ್ಲವೇ ಎಂದು ಪ್ರಶ್ನಿಸಿದೆ.

ನವದೆಹಲಿ: ಪಾಕಿಸ್ತಾನದೊಂದಿಗೆ ಯುದ್ಧದ ಅಗತ್ಯತೆ ಅನೀವಾರ್ಯವಲ್ಲ ಮತ್ತು ಪಹಲ್ಗಾಮ್ ನಲ್ಲಿ ಹಿಂದೂಗಳನ್ನು ಮಾತ್ರ ಉಗ್ರರು ಗುರಿಯಾಗಿಸಿಕೊಂಡಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಹೇಳಿಕೆ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಪಕ್ಷದ ಮೇಲೆ ಹಿಡಿತವಿಲ್ಲವೇ ಎಂದು ಪ್ರಶ್ನಿಸಿದೆ.

ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ವಿವಾದಾತ್ಮಕ ಹೇಳಿಕೆಗಳಿಗಾಗಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಾರಾಷ್ಟ್ರದ ಹಿರಿಯ ನಾಯಕ ವಿಜಯ್ ವಾಡೆತ್ತಿವಾರ್, ಕರ್ನಾಟಕದ ಸಚಿವ ಆರ್ ಬಿ ತಿಮ್ಮಾಪುರ್ ಮತ್ತು ರಾಹುಲ್ ಗಾಂಧಿ ಅವರ ಸೋದರ ಮಾವ ರಾಬರ್ಟ್ ವಾದ್ರಾ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಹೆಸರಿಸಿದ್ದಾರೆ.

"ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಪಕ್ಷದ ಮೇಲೆ ಹಿಡಿತವಿಲ್ಲವೇ? ಅಥವಾ ಅವರಿಬ್ಬರೂ ಮೇಲ್ನೋಟಕ್ಕೆ ಪಾಕ್ ವಿರುದ್ಧ ಮಾತನಾಡುತ್ತಾ, ಇತರರು ತಮ್ಮಇಚ್ಚೆಯಂತೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆಯೇ ಎಂದು ಪ್ರಶ್ನಿಸಿದ್ದು, ಅವರ ಹೇಳಿಕೆಗಳು ಪಾಕಿಸ್ತಾನದ ಮಾಧ್ಯಮಗಳಲ್ಲಿ ರಾರಾಜಿಸುವ ಮೂಲಕ ಭಾರತಕ್ಕೆ ಅಪಮಾನವಾಗಿದೆ ಎಂದು ಕಿಡಿಕಾರಿದ್ದಾರೆ.

ಭಯೋತ್ಪಾದನಾ ದಾಳಿಯ ನಂತರ ಯುಎಸ್, ಫ್ರಾನ್ಸ್ ಅಥವಾ ಸೌದಿ ಅರೇಬಿಯಾ ಆಗಿರಬಹುದು ಎಲ್ಲಾ ರಾಷ್ಟ್ರಗಳು ಭಾರತದೊಂದಿಗಿರುವಾಗ, ಈ ನಾಯಕರು ಇಂತಹ ನಿರ್ಲಜ್ಜ ಮತ್ತು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಹೇಳಿದರು.

ಇದು ಅಸೂಕ್ಷ್ಮತೆಯ ಪರಮಾವಧಿ ಎಂದ ಅವರು, ಭಯೋತ್ಪಾದಕರು ಗುಂಡು ಹಾರಿಸುವ ಹಿಂದೂಗಳ ಎಂಬುದನ್ನು ಕೇಳಿದ್ದಾರೆ ಎಂಬುದನ್ನು ವಡೆತ್ತಿವಾರ್ ಮತ್ತು ತಿಮ್ಮಾಪುರ ಅವರಂತಹವರು ಪ್ರಶ್ನಿಸಿದ್ದಾರೆ ಎಂದರು.

ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಭಯೋತ್ಪಾದಕ ದಾಳಿಯ ನಂತರದ ಪ್ರತಿತಂತ್ರಗಳ ಕುರಿತು ಸರ್ವಪಕ್ಷಗಳ ಸಭೆಯಲ್ಲಿ ಸರ್ಕಾರಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಇದು ಭಾರತದ ಪ್ರಬುದ್ಧ ಪ್ರಜಾಪ್ರಭುತ್ವದ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ. ದಾಳಿ ಹಿನ್ನೆಲೆಯಲ್ಲಿ ಹಲವು ಕಾಂಗ್ರೆಸ್ ನಾಯಕರು ಆಸೂಕ್ಷ್ಮವಾಗಿ ಹೇಳಿಕೆ ನೀಡುತ್ತಿರುವಾಗ ಅವರ ನಾಯಕರು ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ಹೇಳಿರುವುದು ಆಶ್ಚರ್ಯ ಮೂಡಿಸಿದೆ ಎಂದ ರವಿಶಂಕರ್ ಪ್ರಸಾದ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT