ಆರ್. ಅಶೋಕ್ ಸಾಂದರ್ಭಿಕ ಚಿತ್ರ 
ರಾಜಕೀಯ

ಮೋದಿ ಚಿತ್ರ ವಿರೂಪಗೊಳಿಸಿ ಪೋಸ್ಟ್: ಕಾಂಗ್ರೆಸ್ ವಿರುದ್ಧ BJP ವಾಗ್ದಾಳಿ

ಸಿಎಂ ಸಿದ್ದರಾಮಯ್ಯ, ಸಚಿವ ತಿಮ್ಮಾಪುರ ಅವರ ಹೇಳಿಕೆ ನಮ್ಮ ಹೇಳಿಕೆಯಲ್ಲ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಸ್ಪಷ್ಟವಾಗಿ ಹೇಳಿದ್ದಾರೆ. ಅಂದಮೇಲೆ ಇವರಿಗೆಲ್ಲ ಯಾವ ಮರ್ಯಾದೆ ಉಳಿದಿದೆ?

ಬೆಂಗಳೂರು: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಕರ್ನಾಟಕ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಚಿತ್ರ ವಿರೂಪಗೊಳಿಸಿ ಪೋಸ್ಟ್ ಮಾಡಿದ್ದು, ಕಾಂಗ್ರೆಸ್ ನಡೆಗೆ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಪ್ರಧಾನಿ ಮೋದಿಯವರ ವ್ಯಕ್ತಿತ್ವಕ್ಕೆ ಅಪಮಾನ ಮಾಡುವಂತೆ ಕಾಂಗ್ರೆಸ್‌ ಪೋಸ್ಟ್‌ ಮಾಡಿದೆ. ಸಿಎಂ ಸಿದ್ದರಾಮಯ್ಯ, ಸಚಿವ ತಿಮ್ಮಾಪುರ ಅವರ ಹೇಳಿಕೆ ನಮ್ಮ ಹೇಳಿಕೆಯಲ್ಲ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಸ್ಪಷ್ಟವಾಗಿ ಹೇಳಿದ್ದಾರೆ. ಅಂದಮೇಲೆ ಇವರಿಗೆಲ್ಲ ಯಾವ ಮರ್ಯಾದೆ ಉಳಿದಿದೆ? ಅವರ ಪಕ್ಷದವರೇ ಮರ್ಯಾದೆ ಕೊಡದ ಸ್ಥಿತಿಯಲ್ಲಿರುವ ಇವರು ಪ್ರಧಾನಿಯ ಚಿತ್ರವನ್ನು ಕೆಟ್ಟದಾಗಿ ರೂಪಿಸಿರುವುದು ಅಪರಾಧ ಎಂದು ಕಿಡಿಕಾರಿದರು.

ಕಾಂಗ್ರೆಸ್‌ ನಾಯಕರು ಪಾಕಿಸ್ತಾನಕ್ಕೆ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ. ಅಸಾದುದ್ದೀನ್ ಓವೈಸಿ‌ ಪಾಕಿಸ್ತಾನಕ್ಕೆ ಸವಾಲು ಹಾಕಿದ್ದಾರೆ. ಸಿಎಂ ರೇವಂತ್‌ ರೆಡ್ಡಿ ಕೂಡ ದೇಶಭಕ್ತಿ ಪ್ರದರ್ಶಿಸಿದ್ದಾರೆ. ಇವರೆಲ್ಲರೂ ಅಂಥವರ ಬಳಿ ದೇಶಭಕ್ತಿಯ ಪಾಠ ಹೇಳಿಸಿಕೊಳ್ಳಬೇಕು. ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯೇ ತಪ್ಪು ಒಪ್ಪಿಕೊಂಡಿದ್ದಾರೆ. ಆದರೆ ಇಲ್ಲಿನ ಕಾಂಗ್ರೆಸ್‌ ನಾಯಕರು ಎಲ್ಲಕ್ಕೂ ಪ್ರಧಾನಿ ಮೋದಿಯನ್ನು ಪ್ರಶ್ನಿಸುತ್ತಿದ್ದಾರೆ ಎಂದರು.

ಅತಿ ಕಡಿಮೆ ಮತಗಳಲ್ಲಿ ಗೆದ್ದ ಸಿಎಂ ಸಿದ್ದರಾಮಯ್ಯ ಪಾಕಿಸ್ತಾನದಲ್ಲಿ ಹೀರೋ ಆಗಿದ್ದಾರೆ. ಅವರು ಲಾಹೋರ್‌ಗೆ ಹೋಗಿ ಚುನಾವಣೆಗೆ ನಿಂತರೆ ಒಂದು ಲಕ್ಷ ಮತ ಅಂತರದಲ್ಲಿ ಜಯ ಸಾಧಿಸಬಹುದು. ಮುಂದೆ ಅವರಿಗೆ ಪಾಕಿಸ್ತಾನದ ನಾಗರಿಕ ಪ್ರಶಸ್ತಿಯೂ ಸಿಗಬಹುದು. ಎಲ್ಲರೂ ನಿಮ್ಮ ಜೊತೆಗಿದ್ದೀನಿ ಎಂದು ಹೇಳುವಾಗ ಸಿದ್ದರಾಮಯ್ಯ ನಿಮ್ಮ ಜೊತೆಗಿಲ್ಲ ಎನ್ನುತ್ತಾರೆ.

ಶಾಂತಿಪ್ರಿಯರೆಂದು ಹೇಳಿಕೊಳ್ಳುವ ಇವರು ಪೊಲೀಸ್‌ ಅಧಿಕಾರಿಗೆ ಹೊಡೆಯಲು ಹೋಗಿದ್ದಾರೆ. ಇದು ಇಡೀ ಪೊಲೀಸ್‌ ಇಲಾಖೆಗೆ ಮಾಡಿದ ಅವಮಾನ. ಪೊಲೀಸರನ್ನು ಯಾರು ಬೇಕಾದರೂ ಹೊಡೆಯಬಹುದು ಎಂದು ಮುಖ್ಯಮಂತ್ರಿಯೇ ಸಂದೇಶ ನೀಡಿದ್ದಾರೆ. ಮತ್ತೊಂದು ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗೆ ನೀನ್ಯಾಕೆ ಬಂದೆ ಎಂದು ಪ್ರಶ್ನಿಸುತ್ತಾರೆ. ಇಂತಹ ದುರಂಹಕಾರ ಬಹಳ ದಿನ ನಡೆಯುವುದಿಲ್ಲ. ಕುರ್ಚಿ ಬಿಡಬೇಕಿರುವುದರಿಂದಲೇ ಎಲ್ಲರಿಗೂ ಹೀಗೆ ಬೈಯುತ್ತಿದ್ದಾರೆ ಎಂದರು.

ಕರ್ನಾಟಕ ರೌಡಿಗಳ ರಾಜ್ಯವಾಗಿದೆ. ಇಂತಹ ಸ್ಥಿತಿಯಲ್ಲಿ ಪೊಲೀಸರಿಗೆ ಹೊಡೆಯಲು ಹೋದರೆ ಮುಂದೆ ಜನರು ಕೂಡ ಹೊಡೆಯುತ್ತಾರೆ. ಕಾಂಗ್ರೆಸ್‌ಗೆ ಬಿಜೆಪಿಯನ್ನು ತಡೆಯಲು ಸಾಧ್ಯವಿಲ್ಲ. ಇವರು ಪಾಕಿಸ್ತಾನದ ಪರವಾಗಿ ಮಾತಾಡಿದ್ದಕ್ಕೆ ಹೋರಾಟ ಮಾಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಇವೆಲ್ಲ ಸಾಮಾನ್ಯ. ಅದನ್ನು ಸಹಿಸಲು ಇವರಿಗೆ ಆಗಿಲ್ಲ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT