ಯದುವೀರ್ ಒಡೆಯರ್  
ರಾಜಕೀಯ

KRS​ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್‌: ಇಲ್ಲಸಲ್ಲದ ಮಾತು ಬಿಟ್ಟು ಉತ್ತಮ ಆಡಳಿತ ನೀಡಿ; ಮಹದೇವಪ್ಪಗೆ ಯದುವೀರ್ ತಿರುಗೇಟು

ಕೃಷ್ಣರಾಜ ಸಾಗರ ಜಲಾಶಯಕ್ಕೆ ಟಿಪ್ಪುಸುಲ್ತಾನ್‌ ಮೊದಲ ಅಡಿಗಲ್ಲು ಹಾಕಿದ್ದರು ಎಂಬುದಕ್ಕೆ ಸಾಕ್ಷಿ ಎಲ್ಲಿಯೂ ಇಲ್ಲ. ಸಾಮಾನ್ಯವಾಗಿ ಇತಿಹಾಸದ ಬಗ್ಗೆ ಉಲ್ಲೇಖ ಮಾಡಬೇಕಾದರೆ ಸಾಕ್ಷಿ ಅವಶ್ಯ.

ಮೈಸೂರು: ಕೃಷ್ಣರಾಜ ಸಾಗರ ಜಲಾಶಯಕ್ಕೆ ಟಿಪ್ಪುಸುಲ್ತಾನ್‌ ಮೊದಲ ಅಡಿಗಲ್ಲು ಹಾಕಿದ್ದರು ಎಂಬ ಸಚಿವ ಮಹದೇವಪ್ಪ ಅವರ ಹೇಳಿಕೆ ವಿರುದ್ಧ ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್‌ ಒಡೆಯರ್‌ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್‌ ಅಣೆಕಟ್ಟೆಗೆ ಟಿಪ್ಪುಸುಲ್ತಾನ್‌ ಮೊದಲ ಅಡಿಗಲ್ಲು ಹಾಕಿದ್ದರು ಎಂಬ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಹೇಳಿದರು.

ಕೃಷ್ಣರಾಜ ಸಾಗರ ಜಲಾಶಯಕ್ಕೆ ಟಿಪ್ಪುಸುಲ್ತಾನ್‌ ಮೊದಲ ಅಡಿಗಲ್ಲು ಹಾಕಿದ್ದರು ಎಂಬುದಕ್ಕೆ ಸಾಕ್ಷಿ ಎಲ್ಲಿಯೂ ಇಲ್ಲ. ಸಾಮಾನ್ಯವಾಗಿ ಇತಿಹಾಸದ ಬಗ್ಗೆ ಉಲ್ಲೇಖ ಮಾಡಬೇಕಾದರೆ ಸಾಕ್ಷಿ ಅವಶ್ಯ. ಅಗತ್ಯಕ್ಕೆ ತಕ್ಕಂತೆ ನಿರೂಪಣೆ ಮಾಡಿಕೊಳ್ಳುವುದು ಸರಿಯಲ್ಲ. ಕೆಆರ್‌ಎಸ್‌ ಕಟ್ಟಿದ್ದು ಯಾರು, ಅದಕ್ಕೆ ಅಡಿಗಲ್ಲು ಹಾಕಿದ್ದು ಯಾರೆಂಬುದು ಎಲ್ಲರಿಗೂ ಗೊತ್ತಿದೆ.

ಕನ್ನಂಬಾಡಿ ಅಣೆಕಟ್ಟೆ ಪ್ರಾರಂಭದಿಂದ ಕೊನೆಯವರೆಗೆ ಏನೆಲ್ಲ ಆಯಿತು, ಶ್ರಮವಹಿಸಿದ್ದು ಯಾರು ಎಂಬುದು ಇತಿಹಾಸ ಪುಟಗಳಲ್ಲಿ ದಾಖಲಾಗಿದೆ. ಸಚಿವ ಮಹದೇವಪ್ಪ ಇಲ್ಲದ ಇತಿಹಾಸದ ಬಗ್ಗೆ ಮಾತನಾಡುವ ಬದಲು ರಾಜ್ಯದಲ್ಲಿ ಜನರಿಗೆ ಒಳ್ಳೆಯ ಆಡಳಿತ ನೀಡಲಿ ಎಂದು ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ