ಡಿ.ಕೆ.ಶಿವಕುಮಾರ್ 
ರಾಜಕೀಯ

ರಾಜಣ್ಣ ಉತ್ತಮ ಸ್ನೇಹಿತರು, ನನಗೂ ನೋವಾಗಿದೆ; ಯಾವ ಕಾರಣಕ್ಕೆ ವಜಾ ಮಾಡಿದ್ರೊ ಗೊತ್ತಿಲ್ಲ: ಡಿ.ಕೆ ಶಿವಕುಮಾರ್

ಇದರಿಂದ ನನಗೂ ನೋವಾಗಿದೆ. ರಾಜಣ್ಣ ಅವರು ನನ್ನ ಒಳ್ಳೆಯ ಸ್ನೇಹಿತರು, ಆಪ್ತರು. ಕಳೆದ 25 ವರ್ಷಗಳಿಂದ ಜೊತೆಯಲ್ಲಿ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ.

ಬೆಂಗಳೂರು: ನನಗೆ ತಿಳಿದಿರುವಂತೆ ಸಚಿವ ಸಂಪುಟದಿಂದ ರಾಜಣ್ಣ ಅವರ ವಜಾ ಪಕ್ಷದ ತೀರ್ಮಾನ. ಇದರ ಹೊರತಾಗಿ ಬೇರೆ ವಿಚಾರ ನನಗೆ ತಿಳಿದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಯವರ ಬಳಿ ಕೇಳಿದೆ. ಅವರು ತಮಗೆ ಬಂದ ಮಾಹಿತಿ ನೀಡಿದ್ದಾರೆ. ನನಗೆ ಬೇರೆ ಯಾವುದೇ ವಿಚಾರ ಗೊತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಹೈಕಮಾಂಡ್ ಸೂಚನೆ ಮೇರೆಗೆ ಕೆ.ಎನ್.ರಾಜಣ್ಣ ಅವರನ್ನು ವಜಾ ಮಾಡಲಾಯಿತೇ ಎಂದು ಕೇಳಿದಾಗ,‌"ಇದರಿಂದ ನನಗೂ ನೋವಾಗಿದೆ. ರಾಜಣ್ಣ ಅವರು ನನ್ನ ಒಳ್ಳೆಯ ಸ್ನೇಹಿತರು, ಆಪ್ತರು. ಕಳೆದ 25 ವರ್ಷಗಳಿಂದ ಜೊತೆಯಲ್ಲಿ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ" ಎಂದು ಹೇಳಿದರು.

ಪಕ್ಷದಿಂದ ಉಚ್ಚಾಟಿಸಬೇಕು ಎಂದು ಹೈಕಮಾಂಡ್ ನಿಂದ ಸೂಚನೆ ಏನಾದರೂ ಬಂದಿತ್ತೇ ಎಂದು ಕೇಳಿದಾಗ,‌ "ಶಾಸಕರು ಮತ್ತು ಮಂತ್ರಿಗಳು ನನ್ನ ಕಾರ್ಯವ್ಯಾಪ್ತಿಗೆ ಬರುವುದಿಲ್ಲ. ಶಾಸಕರಾದ ನಂತರ ಪಕ್ಷಕ್ಕೆ ಸಂಬಂಧ ಪಟ್ಟಂತೆ ಅಶಿಸ್ತು ತೋರಿದರೆ ಸಣ್ಣಪುಟ್ಟ ನೋಟಿಸ್ ನೀಡುವ ಕೆಲಸ ಮಾಡಲಾಗುತ್ತದೆ.‌ ಇದರ ಹೊರತಾಗಿ ಸಿಎಲ್ ಪಿ ನಾಯಕರೇ ಮಂತ್ರಿಗಳು ಹಾಗೂ ಶಾಸಕರ ಮೇಲೆ ನಿಯಂತ್ರಣ ಹೊಂದಿರುತ್ತಾರೆ" ಎಂದರು.

ಯಾವ ಕಾರಣಕ್ಕೆ ರಾಜಣ್ಣ ಅವರನ್ನು ವಜಾ ಮಾಡಲಾಯಿತು ಎಂದಾಗ, "ಇದರ ಬಗ್ಗೆ ನನಗೆ ಗೊತ್ತಿಲ್ಲ.‌ ಏನೂ ಮಾಡಲು ಆಗುವುದಿಲ್ಲ. ಇದು ಪಕ್ಷದ ತೀರ್ಮಾನ" ಎಂದರು. ರಾಜೀನಾಮೆ ತೆಗೆದುಕೊಳ್ಳಬಹುದಿತ್ತು, ಆದರೆ ವಜಾ ಮಾಡಿದ್ದು ಅವಮಾನ ಮಾಡಿದಂತೆ ಅಲ್ಲವೇ ಎಂದಾಗ, "ಇದರ ಬಗ್ಗೆ ನನಗೆ ಏನೂ ಗೊತ್ತಿಲ್ಲ" ಎಂದು ಪುನರುಚ್ಚರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT