ಸತೀಶ್ ಜಾರಕಿಹೊಳಿ 
ರಾಜಕೀಯ

ಕಾಂಗ್ರೆಸ್‌ನಲ್ಲಿ 'ಪಿತೂರಿ' ನಡೆಯುತ್ತಿದೆ; ನಾವು ಹುಷಾರಾಗಿರಬೇಕು: ಸತೀಶ್ ಜಾರಕಿಹೊಳಿ

ರಾಜಣ್ಣ ಅವರು "ಪಿತೂರಿ"ಗೆ ಬಲಿಯಾಗಿದ್ದಾರೆ ಮತ್ತು ಅದರ ಹಿಂದೆ ಯಾರಿದ್ದಾರೆಂದು ಅವರಿಗೆ ತಿಳಿದಿದೆ ಎಂದು ಹೇಳಿದರು. ಇದನ್ನ ಸಮುದಾಯಕ್ಕೆ ಮಾಡಿದ ಮೋಸ ಅಂತ ಹೇಳಲಾಗೊಲ್ಲ. ಏನು ಅಂತ ರಾಜಣ್ಣ ಮುಂದೆ ಹೇಳ್ತೀನಿ ಅಂದಿದ್ದಾರೆ.

ಬೆಂಗಳೂರು: ರಾಜಕೀಯದಲ್ಲಿ ಯಾವಾಗಲೂ ಹಗೆ ಇದ್ದೇ ಇರುತ್ತದೆ. ನಾವು ಹುಷಾರಾಗಿ ಮತ್ತು ಬಿಗಿಯಾಗಿ ಇರಬೇಕಾಗುತ್ತದೆ. ನಮ್ಮ ಎಚ್ಚರಿಕೆಯಲ್ಲಿ ನಾವು ಇರಬೇಕು. ರಾಜಕೀಯದಲ್ಲಿ ಯಾವಾಗಲೂ ಹೀಗೇ ಇರುವುದಿಲ್ಲ. ವಾಪಸ್‌ ಆಗಲೂಬಹುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರನ್ನು ವಜಾಗೊಳಿಸಿರುವ ಸಂಬಂಧ ಸ್ವತಃ ಅವರೇ ದೆಹಲಿಗೆ ತೆರಳಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡುತ್ತಾರೆ. ರಾಜಣ್ಣ ಅವರು "ಪಿತೂರಿ"ಗೆ ಬಲಿಯಾಗಿದ್ದಾರೆ ಮತ್ತು ಅದರ ಹಿಂದೆ ಯಾರಿದ್ದಾರೆಂದು ಅವರಿಗೆ ತಿಳಿದಿದೆ ಎಂದು ಹೇಳಿದರು.

ಇದನ್ನ ಸಮುದಾಯಕ್ಕೆ ಮಾಡಿದ ಮೋಸ ಅಂತ ಹೇಳಲಾಗೊಲ್ಲ. ಏನು ಅಂತ ರಾಜಣ್ಣ ಮುಂದೆ ಹೇಳ್ತೀನಿ ಅಂದಿದ್ದಾರೆ. ರಾಜಕೀಯದಲ್ಲಿ ಒಬ್ಬರ ಮೇಲೆ ಒಬ್ಬರಿಗೆ ಹಗೆ ಇರುತ್ತದೆ. ಸ್ವಲ್ಪ ಎಚ್ಚರಿಕೆಯಿಂದ ಇರಬೇಕು. ದೆಹಲಿಗೆ ರಾಜಣ್ಣ ಹೋಗ್ತೀನಿ ಎಂದು ಹೇಳಿದ್ದಾರೆ. ಆಗ ಎಲ್ಲವೂ ಸರಿ ಹೋಗಬಹುದು ಎಂದು ತಿಳಿಸಿದ್ದಾರೆ.

ಪಕ್ಷದ ನಾಯಕರಿಗೆ ಸ್ಪಷ್ಟನೆ ನೀಡುತ್ತಾರೆ. ಮುಂದೆ ಇದನ್ನು ತಿಳಿ ಮಾಡೋಣ. ಸಮುದಾಯವನ್ನು ಟಾರ್ಗೆಟ್‌ ಮಾಡಲಾಗುತ್ತಿದೆ ಎಂದು ಹೇಳಲಾಗುವುದಿಲ್ಲ. ಯಾಕೆಂದರೆ ಇದು ಉದ್ದೇಶಪೂರ್ವಕವಾಗಿ ಆಗಿದ್ದಲ್ಲ. ನಾಗೇಂದ್ರ ಘಟನೆಯೇ ಬೇರೆ ಈ ಘಟನೆಯೇ ಬೇರೆ. ಮುಂದಿನ ದಿನಗಳಲ್ಲಿ ರಾಜಣ್ಣ ಅವರೇ ಇದರ ಬಗ್ಗೆ ವಿವರಣೆ ನೀಡಲಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಗಾಜಾ ಸಂಘರ್ಷ ಕೊನೆಗೆ ಡೊನಾಲ್ಡ್ ಟ್ರಂಪ್ 20 ಅಂಶಗಳ ಯೋಜನೆ: ಪ್ರಧಾನಿ ಮೋದಿ ಸ್ವಾಗತ

ಪುರುಷರ Asia Cup ಹೈಡ್ರಾಮಾ: ಮಹಿಳಾ ವಿಶ್ವಕಪ್ ನಲ್ಲಿ ಏನಾಗುತ್ತದೆ,ಅ.5ರ ಪಂದ್ಯ ಮೇಲೆ ಎಲ್ಲರ ಚಿತ್ತ

ನೆತನ್ಯಾಹು-ಟ್ರಂಪ್ ಗಾಜಾ ಶಾಂತಿ ಒಪ್ಪಂದ ಘೋಷಣೆ: ಹಂತ ಹಂತವಾಗಿ ಹಿಂದೆ ಸರಿಯಲಿರುವ ಇಸ್ರೇಲ್

ಕಲ್ಯಾಣ ಕರ್ನಾಟಕದಲ್ಲಿ ಭಾರೀ ಪ್ರವಾಹ: ಹಾನಿ ಬಗ್ಗೆ ಕುರಿತು ಇಂದು ಸಿಎಂ ವೈಮಾನಿಕ ಸಮೀಕ್ಷೆ

ಅತಿಥಿ ಉಪನ್ಯಾಸಕರ ನೇಮಕಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್..!

SCROLL FOR NEXT