ವಿಧಾನಸಭೆಯಲ್ಲಿ ಡಿ.ಕೆ ಶಿವಕುಮಾರ್ 
ರಾಜಕೀಯ

ಒಂದು ಕ್ಷೇತ್ರ ಗೆಲ್ಲಲಾಗದ ಅಸಮರ್ಥ, ಅಶ್ವತ್ ನಾರಾಯಣ ಭ್ರಷ್ಟಾಚಾರದ ಪಿತಾಮಹ: ಡಿ.ಕೆ ಶಿವಕುಮಾರ್ ವಾಗ್ದಾಳಿ

ನೀನು, ನಿನ್ನ ಪಕ್ಷ ಭ್ರಷ್ಟಾಚಾರದ ಪಿತಾಮಹರು. ನಿಮ್ಮ ಭ್ರಷ್ಟಾಚಾರದಿಂದಲೇ ನಾವು 135 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬಂದಿದ್ದೇವೆ. ನೀನು ರಾಮನಗರಕ್ಕೆ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿ ಬಂದಿದ್ದಲ್ಲ ರಾಮನಗರದಲ್ಲಿ 1 ಸೀಟ್ ಕೂಡ ಬರಲಿಲ್ಲ. ನೀನು ನಿಜವಾದ ಅಸಮರ್ಥ.

ಬೆಂಗಳೂರು: ಅಶ್ವತ್ ನಾರಾಯಣ ನೀನು, ನಿನ್ನ ಪಕ್ಷ ಭ್ರಷ್ಟಾಚಾರದ ಪಿತಾಮಹರು. ರಾಮನಗರದಲ್ಲಿ ಒಂದೂ ಕ್ಷೇತ್ರ ಗೆಲ್ಲಲಾಗದವ, ಅಲ್ಪಸಂಖ್ಯಾತ ನಾಯಕನನ್ನು ಅಸಮರ್ಥ ಎನ್ನುತ್ತೀಯಾಎಂದು ಡಿ.ಕೆ. ಶಿವಕುಮಾರ್ ಅವರು ಹರಿಹಾಯ್ದರು.

ವಿಧಾನಸಭೆ ಕಲಾಪದಲ್ಲಿ ರಸಗೊಬ್ಬರ ಕೊರತೆ ವಿಚಾರವಾಗಿ ನಡೆದ ಚರ್ಚೆ ವೇಳೆ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಬುಧವಾರ ಬಿರುಸಿನ ಮಾತಿನ ಚಕಮಕಿ ನಡೆಯಿತು.

ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ಚರ್ಚೆ ವೇಳೆ ಮಾತನಾಡುವಾಗ ತಪ್ಪು ಅಂಕಿ ಅಂಶಗಳನ್ನು ನೀಡಿದ ಕಾರಣ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಸರಿ ಅಂಕಿ-ಅಂಶಗಳ ಸ್ಪಷ್ಟನೆ ನೀಡಲು ಮುಂದಾದರು. ಈ ವೇಳೆ ಅಶ್ವತ್ ನಾರಾಯಣ ಅವರು ಮಧ್ಯಪ್ರವೇಶಿಸಿ ವಾಗ್ವಾದ ಆರಂಭಿಸಿದರು.

ಆಗ ಸಚಿವ ಕೆ.ಜೆ ಜಾರ್ಜ್ ಅವರು, 'ಸುಳ್ಳು ಹೇಳಬೇಡಿ' ಎಂದು ಹೇಳಿದಾಗ, ಅಶ್ವತ್ಥ್ ನಾರಾಯಣ ಅವರು, 'ಸ್ಮಾರ್ಟ್ ಮೀಟರ್ ವಿಚಾರವಾಗಿ ಮಾತನಾಡಲು ನಿಮಗೆ ಧಮ್, ಯೋಗ್ಯತೆ ಇಲ್ಲ, ನೀವು ಅಸಮರ್ಥ' ಎಂದು ಟೀಕೆ ಮಾಡಿದರು.

ಈ ವೇಳೆ ಮಧ್ಯ ಪ್ರವೇಶಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಅಸಮರ್ಥರು ಅವರಲ್ಲ. ನೀವು ಅಸಮರ್ಥರು. ರಾಜ್ಯದ ಜನ ಮತ ನೀಡಿ ಅಧಿಕಾರ ನಡೆಸಲು ಅವಕಾಶ ನೀಡಿರುವ ಜಾರ್ಜ್ ಅವರು ಅಸಮರ್ಥರಲ್ಲ, ನೀವು ಅಸಮರ್ಥರಾಗಿರುವ ಕಾರಣ ನಿಮ್ಮ ಪಕ್ಷ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತಿದೆ” ಎಂದು ತಿರುಗೇಟು ನೀಡಿದರು.

ಈ ವೇಳೆ ಅಶ್ವತ್ ನಾರಾಯಣ ಅವರು “ಈ ಸರ್ಕಾರ ಅಸಮರ್ಥ, ಜನವಿರೋಧಿ, ಭ್ರಷ್ಟಾಚಾರ ಸರ್ಕಾರ” ಎಂದರು. ಇದಕ್ಕೆ ತಿರುಗೇಟು ನೀಡಿದ ಶಿವಕುಮಾರ್ ಅವರು, “ನೀನು, ನಿನ್ನ ಪಕ್ಷ ಭ್ರಷ್ಟಾಚಾರದ ಪಿತಾಮಹರು. ನಿಮ್ಮ ಭ್ರಷ್ಟಾಚಾರದಿಂದಲೇ ನಾವು 135 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬಂದಿದ್ದೇವೆ.

ನೀನು ರಾಮನಗರಕ್ಕೆ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿ ಬಂದಿದ್ಯಲ್ಲ.., ಆಗ ನಿನಗೆ ಡೆಪಾಸಿಟ್ ಕೂಡ ಬರಲಿಲ್ಲ. ರಾಮನಗರದಲ್ಲಿ 1 ಸೀಟ್ ಕೂಡ ಬರಲಿಲ್ಲ. ನೀನು ನಿಜವಾದ ಅಸಮರ್ಥ” ಎಂದು ಕೆಂಡಾ- ಮಂಡಲರಾದರು. ಈ ವೇಳೆ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವೆ ವಾಗ್ವಾದ ಹೆಚ್ಚಾದ ಕಾರಣ ಸ್ಪೀಕರ್ ಅವರು ಕಲಾಪವನ್ನು ಅಲ್ಪ ಅವಧಿಗೆ ಮುಂದೂಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT