ಡಿಕೆ ಶಿವಕುಮಾರ್  online desk
ರಾಜಕೀಯ

ಶಾಸಕ ಬಸವರಾಜು ಶಿವಗಂಗಾಗೆ ನೋಟಿಸ್ ನೀಡಲಾಗುವುದು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

ಶಿವಗಂಗಾ ಅವರು ಮತ್ತೇ ಹೇಳಿಕೆ ನೀಡಿರುವುದು ಪಕ್ಷದ ಶಿಸ್ತಿನ ಉಲ್ಲಂಘನೆ ಆಗುತ್ತದೆ. ಹೀಗಾಗಿ ಅವರಿಗೆ ನೋಟಿಸ್ ನೀಡಲಾಗುವುದು ಎಂದು ಶಿವಕುಮಾರ್ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು: ಹಲವು ಎಚ್ಚರಿಕೆಗಳ ನಡುವೆಯೂ ಮುಖ್ಯಮಂತ್ರಿ ಅಧಿಕಾರ ಹಸ್ತಾಂತರದ ಬಗ್ಗೆ ಹೇಳಿಕೆ ಮುಂದುವರೆಸಿರುವ ಶಾಸಕ ಬಸವರಾಜು ವಿ ಶಿವಗಂಗಾ ಅವರಿಗೆ ನೋಟಿಸ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.

ಸಿಎಂ ಅಧಿಕಾರ ಮತ್ತಿತರ ವಿಚಾರಗಳ ಬಗ್ಗೆ ಯಾರೂ ಮಾತಾಡಬಾರದು. ಶಾಸಕರು ಪಕ್ಷದ ಶಿಸ್ತು ಪಾಲಿಸಬೇಕು. ಚೌಕಟ್ಟು ಮೀರಬಾರದು. ಅನಗತ್ಯ ಹೇಳಿಕೆಗಳನ್ನು ಕೊಟ್ಟು ಗೊಂದಲ ಮೂಡಿಸಬಾರದು ಎಂದು ಈ ಹಿಂದೆಯೇ ಕಟ್ಟುನಿಟ್ಟಾಗಿ ಸೂಚನೆ ನೀಡಲಾಗಿದೆ. ಆದರೂ ಶಿವಗಂಗಾ ಅವರು ಮತ್ತೇ ಹೇಳಿಕೆ ನೀಡಿರುವುದು ಪಕ್ಷದ ಶಿಸ್ತಿನ ಉಲ್ಲಂಘನೆ ಆಗುತ್ತದೆ. ಹೀಗಾಗಿ ಅವರಿಗೆ ನೋಟಿಸ್ ನೀಡಲಾಗುವುದು ಎಂದು ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಚನ್ನಗಿರಿ ವಿಧಾನಸಭೆ ಕ್ಷೇತ್ರದ ಶಾಸಕ ಬಸವರಾಜು ವಿ ಶಿವಗಂಗಾ ಅವರು ದಾವಣಗೆರೆಯಲ್ಲಿ ಇಂದು ಸಿಎಂ ಅಧಿಕಾರ ಹಸ್ತಾಂತರ ಕುರಿತು ಹೇಳಿಕೆ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬಿಹಾರ ಚುನಾವಣೆಗೆ ಮುಹೂರ್ತ ಫಿಕ್ಸ್: 2 ಹಂತದಲ್ಲಿ ಮತದಾನ; ನ.14ಕ್ಕೆ ಫಲಿತಾಂಶ ಪ್ರಕಟ!

'ಇದೆಲ್ಲಾ ನನ್ ಮೇಲೆ ಪರಿಣಾಮ ಬೀರೊಲ್ಲ': ನ್ಯಾಯಾಲಯದಲ್ಲಿ CJI ಮೇಲೆ ಶೂ ಎಸೆದ ವಕೀಲ; Gavai ಪ್ರತಿಕ್ರಿಯೆ

Indian Stock Market: ವಾರದ ಮೊದಲ ದಿನವೇ ಮಾರುಕಟ್ಟೆ ಏರಿಕೆ, 25 ಸಾವಿರ ಅಂಕ ಗಡಿ ದಾಟಿದ Nifty50

Frances New PM Resigns: ಕ್ಯಾಬಿನೆಟ್ ರಚನೆ ಬೆನ್ನಲ್ಲೆ ಫ್ರಾನ್ಸ್‌ನ ನೂತನ ಪ್ರಧಾನಿ ರಾಜೀನಾಮೆ! ಕಾರಣವೇನು?

Ranji Trophy 2025: ಕರ್ನಾಟಕ ತಂಡ ಪ್ರಕಟ, ಕನ್ನಡಿಗ Mayank Agarwal ಗೆ ಮತ್ತೆ ಸಾರಥ್ಯ!

SCROLL FOR NEXT