ಬಿ.ವೈ. ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ 
ರಾಜಕೀಯ

ಧರ್ಮಸ್ಥಳ ಪ್ರಕರಣ: ಎಸ್‌ಐಟಿ ರಚಿಸಲು ಯಾರ ಒತ್ತಡ ಇತ್ತು ಎಂಬುದನ್ನು ಸಿಎಂ ಸ್ಪಷ್ಟಪಡಿಸಬೇಕು- ವಿಜಯೇಂದ್ರ

ಮುಖ್ಯಮಂತ್ರಿಗಳು ಎರಡು ವಾರಗಳ ಹಿಂದೆ ತಾವು ಎಸ್‌ಐಟಿ ರಚಿಸುವುದಿಲ್ಲ ಎಂದು ಹೇಳಿದ್ದರು. ಆದರೆ ಮರುದಿನವೇ ಅವರು ತಮ್ಮ ನಿಲುವು ಬದಲಾಯಿಸಿ ಎಸ್ಐಟಿ ರಚಿಸಿದರು ಎಂದರು.

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಲು ತಮ್ಮ ಮೇಲೆ ಯಾರು ಒತ್ತಡ ಹೇರಿದರು ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕೆಂದು ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸೋಮವಾರ ಒತ್ತಾಯಿಸಿದ್ದಾರೆ.

ಹಲವಾರು ಶವಗಳನ್ನು ತಾನೇ ಹೂತು ಹಾಕಿರುವುದಾಗಿ ಆರೋಪಿಸಿರುವ ಅನಾಮಧೇಯ ದೂರುದಾರನ ಹೇಳಿಕೆಯ ಆಧಾರದ ಮೇಲೆ ಶವಗಳನ್ನು ಹೊರತೆಗೆಯುವ ಕಾರ್ಯ ನಡೆಯುತ್ತಿರುವ ಮಧ್ಯೆಯೇ ಬಿಜೆಪಿ ರಾಜ್ಯಾಧ್ಯಕ್ಷರ ಈ ಹೇಳಿಕೆ ಬಂದಿದೆ.

ವಿಜಯೇಂದ್ರ ಅವರ ಪ್ರಕಾರ, ಮಂಜುನಾಥಸ್ವಾಮಿ ದೇವಸ್ಥಾನವಿರುವ ದೇವಾಲಯ ಪಟ್ಟಣ ಧರ್ಮಸ್ಥಳದ ವಿರುದ್ಧ "ದೊಡ್ಡ ಪಿತೂರಿ" ನಡೆಯುತ್ತಿದೆ.

ಮುಖ್ಯಮಂತ್ರಿಗಳು ಎರಡು ವಾರಗಳ ಹಿಂದೆ ತಾವು ಎಸ್‌ಐಟಿ ರಚಿಸುವುದಿಲ್ಲ ಎಂದು ಹೇಳಿದ್ದರು. ಆದರೆ ಮರುದಿನವೇ ಅವರು ತಮ್ಮ ನಿಲುವು ಬದಲಾಯಿಸಿ ಎಸ್ಐಟಿ ರಚಿಸಿದರು ಎಂದರು.

ಎಸ್‌ಐಟಿ ರಚಿಸಲು ಸಿದ್ದರಾಮಯ್ಯ ಅವರ ಮೇಲೆ ಯಾರು ಒತ್ತಡ ಹೇರಿದರು? ಇದು ಕರ್ನಾಟಕದ ಜನರಿಗೆ ಮುಖ್ಯಮಂತ್ರಿಯೇ ಉತ್ತರಿಸಬೇಕು ಎಂದು ವಿಜಯೇಂದ್ರ ಅವರು ಸುದ್ದಿಗಾರರಿಗೆ ತಿಳಿಸಿದರು.

ಧರ್ಮಸ್ಥಳ ವಿಷಯದ ಬಗ್ಗೆ ಮಾತನಾಡಲು ಒತ್ತಡ ಹೇರಲಾಗಿದೆ ಎಂದು ಮುಸುಕುಧಾರಿ ದೂರುದಾರ ಹೇಳಿದ್ದಾರೆ ಎಂದು ಆರೋಪಿಸಿರುವ ವಿಜಯೇಂದ್ರ, ಇದು ಪ್ರಕರಣದ ವಿಶ್ವಾಸಾರ್ಹತೆಯ ಬಗ್ಗೆ ಗಂಭೀರ ಅನುಮಾನಗಳನ್ನು ಹುಟ್ಟುಹಾಕಿದೆ ಎಂದಿದ್ದಾರೆ.

ಈ ಘಟನೆಯ ಹಿಂದೆ "ದೊಡ್ಡ ಪಿತೂರಿ" ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇತ್ತೀಚೆಗೆ ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿ, ಪ್ರಕರಣದಲ್ಲಿ ಭಾಗಿಯಾಗಿರುವವರ ಹೆಸರುಗಳನ್ನು ಬಹಿರಂಗಪಡಿಸುವಂತೆ ಒತ್ತಾಯಿಸಿದರು.

“ಎಸ್‌ಐಟಿ ತನಿಖೆ ನಡೆಸಿದ ರೀತಿ, ಸುಳ್ಳು ಪ್ರಚಾರವನ್ನು ಹರಡಿದ ರೀತಿ ಮತ್ತು ಅದು ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಾಧ್ಯಮಗಳ ಗಮನ ಸೆಳೆದ ರೀತಿಯಿಂದ ಧರ್ಮಸ್ಥಳದ ಕೋಟ್ಯಂತರ ಭಕ್ತರಿಗೆ ನೋವುಂಟಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು