ಈಶ್ವರ್ ಖಂಡ್ರೆ ನಿವಾಸದಲ್ಲಿ ಲಿಂಗಾಯಿತ ನಾಯಕರ ಸಭೆ 
ರಾಜಕೀಯ

ಸಚಿವ ಈಶ್ವರ್ ಖಂಡ್ರೆ ನಿವಾಸದಲ್ಲಿ 'ಕಾಂಗ್ರೆಸ್ ಲಿಂಗಾಯತ ನಾಯಕರ' ಶಕ್ತಿ ಪ್ರದರ್ಶನ: ಜಾತಿ ಸಮೀಕ್ಷೆ ಕುರಿತು ಚರ್ಚೆ, ಸಮುದಾಯದ ಒಗ್ಗಟ್ಟಿಗೆ ಕರೆ!

ವೀರಶೈವ-ಲಿಂಗಾಯತ ಸಮುದಾಯದ ನಿಜವಾದ ಜನಸಂಖ್ಯೆಯನ್ನು ದೃಢೀಕರಿಸುವ ಅಗತ್ಯವನ್ನು ನಾಯಕರು ಒತ್ತಿ ಹೇಳುವುದರೊಂದಿಗೆ, ರಾಜ್ಯ ಸರ್ಕಾರದ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ.

ಬೆಂಗಳೂರು: ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ನಿವಾಸದಲ್ಲಿ ವೀರಶೈವ-ಲಿಂಗಾಯತ ಸಮುದಾಯದ ಕಾಂಗ್ರೆಸ್ ನಾಯಕರು ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಸಮುದಾಯದ ಸಚಿವರು ಹಾಗೂ ಶಾಸಕರು ಮುಂಬರುವ ಜಾತಿ ಗಣತಿ ಮತ್ತು ಅದರ ಪರಿಣಾಮಗಳ ಕುರಿತು ಚರ್ಚಿಸಿದ್ದಾರೆ.

ಸಭೆಯಲ್ಲಿ ಸಚಿವರಾದ ಎಂ.ಬಿ.ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್, ಶಿವಾನಂದ ಪಾಟೀಲ, ಶರಣಬಸಪ್ಪ ದರ್ಶನಾಪುರ, ಶರಣಪ್ರಕಾಶ ಪಾಟೀಲ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯ ಸಚೇತಕ ಅಶೋಕ ಪಟ್ಟಣ, ಶಾಸಕರಾದ ಬಿ.ಆರ್.ಪಾಟೀಲ, ಲಕ್ಷ್ಮಣ ಸವದಿ ಸೇರಿದಂತೆ 34ಕ್ಕೂ ಹೆಚ್ಚು ಜನಪ್ರತಿನಿಧಿಗಳು ಭಾಗವಹಿಸಿದ್ದರು. ವೀರಶೈವ ಲಿಂಗಾಯತ ಮಹಾಸಭಾದ ಶಂಕರ ಬಿದರಿ ಅವರೂ ಚರ್ಚೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ.

ವೀರಶೈವ-ಲಿಂಗಾಯತ ಸಮುದಾಯದ ನಿಜವಾದ ಜನಸಂಖ್ಯೆಯನ್ನು ದೃಢೀಕರಿಸುವ ಅಗತ್ಯವನ್ನು ನಾಯಕರು ಒತ್ತಿ ಹೇಳುವುದರೊಂದಿಗೆ, ರಾಜ್ಯ ಸರ್ಕಾರದ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ.

ಕೆಲವರು ತಮ್ಮ ಜಾತಿ ಪ್ರಮಾಣ ಪತ್ರದಲ್ಲಿ ವೀರಶೈವ ಎಂದು ನೋಂದಾಯಿಸಿಕೊಂಡಿದ್ದರೆ, ಮತ್ತೆ ಕೆಲವರು ಲಿಂಗಾಯಿತ ಎಂದು, ಇನ್ನೂ ಕೆಲವರು ತಮ್ಮ ಉಪಜಾತಿಯನ್ನು ಮಾತ್ರ ನೋಂದಾಯಿಸಿಕೊಂಡಿದ್ದಾರೆ. ಇದು ಸಮುದಾಯದ ಜನಸಂಖ್ಯೆಯನ್ನು ಕಡಿಮೆ ಸಂಖ್ಯೆಗೆ ಕಾರಣವಾಗಬಹುದು ಎಂಬ ಕಳವಳ ವ್ಯಕ್ತಪಡಿಸಲಾಯಿತು.

ನಿಖರವಾದ ಪ್ರಾತಿನಿಧ್ಯ ಖಾತ್ರಿ ಮತ್ತು ಮೀಸಲಾತಿ ಪ್ರಯೋಜನ ಕಾಪಾಡಿಕೊಳ್ಳಲು ಸಾಮೂಹಿಕ ಪ್ರಯತ್ನಗಳ ಅಗತ್ಯವಿದೆ. ತಮ್ಮ ಸ್ಥಾನಗಳ ಸಂಖ್ಯೆಯಲ್ಲಿ ದುರ್ಬಲತೆ ತಡೆಯಲು ವೀರಶೈವ-ಲಿಂಗಾಯತ ಸಮಾಜದ ಎಲ್ಲಾ ಉಪ ಸಮುದಾಯಗಳಲ್ಲಿ ಏಕತೆಯನ್ನು ಕಾಪಾಡಬೇಕು ಎಂದು ನಾಯಕರು ಹೇಳಿದ್ದಾರೆ.

ಈ ಸವಾಲುಗಳನ್ನು ಎದುರಿಸಲು ಅಖಿಲ ಭಾರತ ವೀರಶೈವ ಮಹಾಸಭಾ ಆಗಸ್ಟ್ 22 ರಂದು ಸಮಾಲೋಚನಾ ಸಮಾವೇಶ ನಡೆಸುವುದಾಗಿ ಘೋಷಿಸಿದೆ. ಸಮುದಾಯದ ಮುಂದಿನ ಕಾರ್ಯಚಟುವಟಿಕೆಗಳನ್ನು ನಿರ್ಧರಿಸಲು ವೀರಶೈವ-ಲಿಂಗಾಯತ ನಾಯಕರ ಪಕ್ಷಾತೀತ ಸಭೆಯನ್ನು ಆ ದಿನ ಕರೆಯಲಾಗಿದೆ.

ಜಾತಿ ಗಣತಿ ವರದಿಯ ನಂತರ ಪ್ರಬಲ ಲಿಂಗಾಯತ ಸಮುದಾಯದಲ್ಲಿ ವ್ಯಾಪಕ ಅಸಮಾಧಾನ ಹೆಚ್ಚಿದೆ. ಶ್ರೀಶೈಲ ಪೀಠದ ಚನ್ನಸಿದ್ಧರಾಮ ಶಿವಾಚಾರ್ಯರಂತಹ ಲಿಂಗಾಯತ ಧರ್ಮೀಯರು ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಂತಹ ನಾಯಕರು ಸಮೀಕ್ಷೆಯನ್ನು ಪ್ರಶ್ನಿಸಿದ್ದಾರೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಸಮೀಕ್ಷೆಯನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಹಿಮಾಚಲದಲ್ಲಿ ಭಾರಿ ಭೂಕುಸಿತ: ಬಸ್‌ ಮೇಲೆಯೇ ಬಿದ್ದ ಪರ್ವತ; ಕನಿಷ್ಠ 18 ಮಂದಿ ಸಾವು

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣ: ಹಿರಿಯ ಅಧಿಕಾರಿ ಅಮಾನತು

BiggBoss Kannada: ಜಾಲಿವುಡ್​ ಸ್ಟುಡಿಯೋಸ್​ಗೆ ಬೀಗ; ಮನೆಯಿಂದ ಹೊರಬಂದ ಬಿಗ್‌ಬಾಸ್‌ ಸ್ಪರ್ಧಿಗಳು ಹೋಗಿದ್ದೇಲ್ಲಿಗೆ?

ಥಿಯೇಟರ್ ಹಾಗೂ ರಸ್ತೆಗಳಲ್ಲಿ ದೈವದ ಅನುಕರಣೆ ಮಾಡಬೇಡಿ: ಪ್ರೇಕ್ಷಕರಲ್ಲಿ ಕಾಂತಾರ: ಅಧ್ಯಾಯ 1 ಚಿತ್ರತಂಡ ಮನವಿ!

ಸುಪ್ರೀಂಕೋರ್ಟ್ ನಲ್ಲಿ ತಮ್ಮತ್ತ ಶೂ ಎಸೆದಿದ್ದವನಿಗೆ ಕ್ಷಮೆ ನೀಡಿದ CJI

SCROLL FOR NEXT