ಬಿ.ವೈ. ವಿಜಯೇಂದ್ರ 
ರಾಜಕೀಯ

ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ 'ಧರ್ಮಯುದ್ಧ': ಬಿ.ವೈ ವಿಜಯೇಂದ್ರ

ಶುಕ್ರವಾರದಿಂದ 'ಧರ್ಮಯುದ್ಧ'(ಧರ್ಮ ರಕ್ಷಣೆಗಾಗಿ ಹೋರಾಟ) ಎಂಬ ಶೀರ್ಷಿಕೆಯಡಿಯಲ್ಲಿ ಪಕ್ಷವು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದರು.

ಬೆಂಗಳೂರು: ಧರ್ಮಸ್ಥಳ ಪ್ರಕರಣವನ್ನು ರಾಜ್ಯ ಸರ್ಕಾರ ನಿರ್ವಹಿಸುತ್ತಿರುವ ರೀತಿಯನ್ನು ಖಂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಅವರು ಕ್ಷೇತ್ರದ ವಿರುದ್ಧ "ನಡೆಯುತ್ತಿರುವ ಅಪಪ್ರಚಾರ"ದ ಹಿಂದೆ "ವ್ಯವಸ್ಥಿತ ಪಿತೂರಿ" ಇದೆ ಎಂದು ಗುರುವಾರ ಆರೋಪಿಸಿದರು.

ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ವಿಜಯೇಂದ್ರ ಅವರು, ಶುಕ್ರವಾರದಿಂದ 'ಧರ್ಮಯುದ್ಧ'(ಧರ್ಮ ರಕ್ಷಣೆಗಾಗಿ ಹೋರಾಟ) ಎಂಬ ಶೀರ್ಷಿಕೆಯಡಿಯಲ್ಲಿ ಪಕ್ಷವು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದರು.

ಧರ್ಮಸ್ಥಳದ ವಿರುದ್ಧ ಸಾಮಾಜಿಕ ಮಾಧ್ಯಮ ಅಭಿಯಾನವು "ಲಕ್ಷಾಂತರ ಭಕ್ತರ ಭಾವನೆಗಳಿಗೆ ತೀವ್ರ ನೋವುಂಟು ಮಾಡಿದೆ". "ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗಾಗಿ ಹಿಂದೂ ಕಾರ್ಯಕರ್ತರ ವಿರುದ್ಧ ತ್ವರಿತ ಎಫ್‌ಐಆರ್‌ಗಳು ಮತ್ತು ಬಂಧನದ ಹೊರತಾಗಿಯೂ, ಧರ್ಮಸ್ಥಳವನ್ನು ಅವಹೇಳನ ಮಾಡುವವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ" ಎಂದು ಅವರು ಹೇಳಿದರು.

ಬಿಜೆಪಿ, ರಾಜ್ಯ ಸರ್ಕಾರದ ವಿಶೇಷ ತನಿಖಾ ತಂಡ(ಎಸ್‌ಐಟಿ)ವನ್ನು ಸ್ವಾಗತಿಸಿದೆ ಮತ್ತು ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆಯನ್ನು ಬೆಂಬಲಿಸಿದೆ ಎಂದು ಅವರು ತಿಳಿಸಿದರು.

"ಇಂದಿಗೂ ನಾವು ಆ ನಿಲುವಿಗೆ ಬದ್ಧರಾಗಿದ್ದೇವೆ. ಆದರೆ ದುರುದ್ದೇಶಪೂರಿತ ಪ್ರಚಾರವನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ. "ಅವರಿಗೆ ಕ್ರಮ ಕೈಗೊಳ್ಳುವ ಇಚ್ಛಾಶಕ್ತಿ ಇಲ್ಲವೇ ಅಥವಾ ಈ ಅಭಿಯಾನಕ್ಕೆ ಅದು ಕುಮ್ಮಕ್ಕು ನೀಡುತ್ತದೆಯೇ?" ಎಂಬ ಪ್ರಶ್ನೆಯನ್ನು ಹುಟ್ಟುಹಾಕುತ್ತಿದೆ ಎಂದರು.

ರಾಜ್ಯ ಸರ್ಕಾರ ಮತ್ತು ಪೊಲೀಸರ ನಿಷ್ಕ್ರಿಯತೆಯು "ಧರ್ಮಸ್ಥಳವನ್ನು ಗುರಿಯಾಗಿಸುವ" ದೊಡ್ಡ, ಸಂಘಟಿತ ಪ್ರಯತ್ನದ ಭಾಗವಾಗಿದೆ ಎಂದು ವಿಜಯೇಂದ್ರ ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್