ಸಿದ್ದರಾಮಯ್ಯ  
ರಾಜಕೀಯ

ವಯನಾಡಿಗೆ 10 ಕೋಟಿ ರೂ ವಿಶೇಷ ಅನುದಾನ: ನತದೃಷ್ಟ ಕನ್ನಡಿಗರು ಮಲಯಾಳಿಗಳಷ್ಟು ಅದೃಷ್ಟವಂತರಲ್ಲ ಬಿಡಿ..!

ಕೇರಳದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರಂತಹ ಹೃದಯ ವೈಶಾಲ್ಯ ಇರುವ, ಸಂವೇದನಾಶೀಲ ಮುಖ್ಯಮಂತ್ರಿ ಕರ್ನಾಟಕದಲ್ಲೂ ಇದ್ದಿದ್ದರೆ, ಎಲ್ಲ ಕ್ಷೇತ್ರಗಳಿಗೂ ಭರಪೂರ ಅನುದಾನ ಸಿಕ್ಕುತ್ತಿತ್ತು. ನತದೃಷ್ಟ ಕನ್ನಡಿಗರು ಮಲಯಾಳಿಗಳಷ್ಟು ಅದೃಷ್ಟವಂತರಲ್ಲ ಬಿಡಿ.

ಬೆಂಗಳೂರು: ಕೇರಳದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರಂತಹ ಹೃದಯ ವೈಶಾಲ್ಯ ಇರುವ, ಸಂವೇದನಾಶೀಲ ಮುಖ್ಯಮಂತ್ರಿ ಕರ್ನಾಟಕದಲ್ಲೂ ಇದ್ದಿದ್ದರೆ, ಎಲ್ಲ ಕ್ಷೇತ್ರಗಳಿಗೂ ಭರಪೂರ ಅನುದಾನ ಸಿಕ್ಕುತ್ತಿತ್ತು. ನತದೃಷ್ಟ ಕನ್ನಡಿಗರು ಮಲಯಾಳಿಗಳಷ್ಟು ಅದೃಷ್ಟವಂತರಲ್ಲ ಬಿಡಿ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ರಾಜ್ಯ ಸರ್ಕಾರದ 2024-25 ನೇ ಸಾಲಿನ ಪೂರಕ ಅಂದಾಜನ್ನು ಬುಧವಾರ ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ಈ ಕೇರಳದ ವಯನಾಡು ಜಿಲ್ಲೆಯಲ್ಲಿ ಕಳೆದ ವರ್ಷ ಸಂಭವಿಸಿದ್ದ ಭೂಕುಸಿತದ ಸಂತ್ರಸ್ತರಿಗೆ ಮನೆಗಳನ್ನು ಕಟ್ಟಿಕೊಡುವ ಸಲುವಾಗಿ ಎಎಸ್​​ಡಿಆರ್​​ಎಫ್ ಮೂಲಕ 10 ಕೋಟಿ ರೂಪಾಯಿ ಹಣಕಾಸು ನೆರವು ನೀಡುವ ಬಗ್ಗೆ ಉಲ್ಲೇಖಿಸಲಾಗಿತ್ತು.

ಈ ನಡೆಗೆ ಬಿಜೆಪಿ ಅಕ್ಷೇಪ ವ್ಯಕ್ತಪಡಿಸಿದ್ದು, ಕೇರಳದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು ಎಂದು ಟೀಕಿಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂಪಾಯಿ ವಿಶೇಷ ಅನುದಾನ ನೀಡಿರುವ ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು. ಕೇರಳದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರಂತಹ ಹೃದಯ ವೈಶಾಲ್ಯ ಇರುವ, ಸಂವೇದನಾಶೀಲ ಮುಖ್ಯಮಂತ್ರಿ ಕರ್ನಾಟಕದಲ್ಲೂ ಇದ್ದಿದ್ದರೆ, ಎಲ್ಲ ಕ್ಷೇತ್ರಗಳಿಗೂ ಭರಪೂರ ಅನುದಾನ ಸಿಕ್ಕುತ್ತಿತ್ತು. ನತದೃಷ್ಟ ಕನ್ನಡಿಗರು ಮಲಯಾಳಿಗಷ್ಟು ಅದೃಷ್ಟವಂತರಲ್ಲ ಬಿಡಿ ಎಂದು ತಿವಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್