ಸಚಿವ ಚಲುವರಾಯಸ್ವಾಮಿ 
ರಾಜಕೀಯ

SIT ತನಿಖೆ ಸತ್ಯವನ್ನು ಬಹಿರಂಗಪಡಿಸಿದೆ, BJP ಧನ್ಯವಾದ ಹೇಳಬೇಕು: ಸಚಿವ ಚಲುವರಾಯಸ್ವಾಮಿ

ದುಷ್ಕರ್ಮಿಗಳು ಹಲವು ವರ್ಷಗಳಿಂದ ಧರ್ಮಸ್ಥಳದ ಖ್ಯಾತಿಗೆ ಕಳಂಕ ತರಲು ಪ್ರಯತ್ನಿಸಿದ್ದಾರೆ. ಆದರೆ, ಎಸ್‌ಐಟಿ ತನಿಖೆ ಸತ್ಯವನ್ನು ಬಹಿರಂಗಪಡಿಸಿದೆ. ಧರ್ಮಸ್ಥಳದ ಪಾವಿತ್ರ್ಯವನ್ನು ಎತ್ತಿ ಹಿಡಿದಿದೆ.

ಮೈಸೂರು: ಧರ್ಮಸ್ಥಳದ ಪಾವಿತ್ರ್ಯವನ್ನು ಎತ್ತಿಹಿಡಿದು ವಿಶೇಷ ತನಿಖಾ ದಳದ (ಎಸ್‌ಐಟಿ) ತನಿಖೆಗೆ ಆದೇಶಿಸಿದ್ದಕ್ಕಾಗಿ ಬಿಜೆಪಿ ಕಾಂಗ್ರೆಸ್ ಸರ್ಕಾರಕ್ಕೆ ಕೃತಜ್ಞರಾಗಿರಬೇಕು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಭಾನುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದುಷ್ಕರ್ಮಿಗಳು ಹಲವು ವರ್ಷಗಳಿಂದ ಧರ್ಮಸ್ಥಳದ ಖ್ಯಾತಿಗೆ ಕಳಂಕ ತರಲು ಪ್ರಯತ್ನಿಸಿದ್ದಾರೆ. ಆದರೆ, ಎಸ್‌ಐಟಿ ತನಿಖೆ ಸತ್ಯವನ್ನು ಬಹಿರಂಗಪಡಿಸಿದೆ. ಧರ್ಮಸ್ಥಳದ ಪಾವಿತ್ರ್ಯವನ್ನು ಎತ್ತಿ ಹಿಡಿದಿದೆ. ತನಿಖೆಯನ್ನು ಪ್ರಾರಂಭಿಸಿದ್ದಕ್ಕಾಗಿ ಬಿಜೆಪಿ ಕಾಂಗ್ರೆಸ್ ಸರ್ಕಾರಕ್ಕೆ ಧನ್ಯವಾದ ಹೇಳಬೇಕು ಎಂದು ಹೇಳಿದರು.

ಇದೇ ವೇಳೆ ಆರ್.ಅಶೋಕ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಧರ್ಮಸ್ಥಳದ ವಿರುದ್ಧ ಆರೋಪ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮವಾಗಬೇಕು ಎಂದು ವಿಜಯೇಂದ್ರ, ಆರ್‌.ಅಶೋಕ್‌ ಈಗ ಮಾತನಾಡುತ್ತಿದ್ದಾರೆ. ಹತ್ತಾರು ವರ್ಷಗಳಿಂದ ಸೌಜನ್ಯ ಹೋರಾಟ ನಡೆಯುವಾಗ ಇವರೆಲ್ಲ ಎಲ್ಲಿ ಹೋಗಿದ್ದರು. ಇವರದೇ ಸರ್ಕಾರವಿತ್ತಲ್ಲಾ ಎಂದು ಪ್ರಶ್ನಿಸಿದರು.

ಬಳಿಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಮರ್ಥಿಸಿಕೊಂಡ ಅವರು, ಬದ್ಧತೆ ಹೊಂದಿರುವ ಕಾಂಗ್ರೆಸ್ ನಾಯಕ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅತ್ಯುತ್ತಮ ಅಧ್ಯಕ್ಷರಲ್ಲಿ ಒಬ್ಬರು ಎಂದು ಕರೆದರು.

ಎಸ್‌ಐಟಿ ರಚನೆ ಮಾಡಿದಾಗ ಬಾಯಿಮುಚ್ಚಿಕೊಂಡು ಸುಮ್ಮನಿದ್ದು ಈಗ ಲಾಭ ಪಡೆಯೋಕೆ ನೋಡುತ್ತಿದ್ದಾರೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರು ಕ್ರಮ ಆಗಬೇಕು ಎಂದಾಗ ಬಿಜೆಪಿಯವರಿಗೆ ಜ್ಞಾನೋದಯವಾಗಿದೆ. ಎಸ್‌ಐಟಿ ಮೂಲಕ ನಮ್ಮ ಸರ್ಕಾರ ಸತ್ಯವನ್ನು ಹೊರಗೆ ತಂದಿದೆ. ಇನ್ನು ಮುಂದೆಯಾದರೂ ಬಿಜೆಪಿಯವರು ಧರ್ಮಧ ವಿಚಾರದಲ್ಲಿ ರಾಜಕಾರಣ ಮಾಡೋದನ್ನು ಬಿಡಲಿ ಎಂದು ಹೇಳಿದರು.

ಡಿ.ಕೆ.ಶಿವಕುಮಾರ್‌ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ‘ಡಿ.ಕೆ.ಶಿವಕುಮಾರ್‌ ಬಿಜೆಪಿಗೆ ಹೋಗುವುದಾಗಿದ್ದರೆ ಎಂದೋ ಹೋಗಿರುತ್ತಿದ್ದರು. ಕಾಂಗ್ರೆಸ್‌ನಲ್ಲಿ ಗಟ್ಟಿ ನೆಲೆ ಕಂಡುಕೊಂಡಿದ್ದಾರೆ. ಉತ್ತಮ ಕೆಪಿಸಿಸಿ ಅಧ್ಯಕ್ಷರು ಅಂತ ಹೆಸರು ಪಡೆದಿದ್ದಾರೆ. ಅವರೇಕೆ ಈಗ ಬಿಜೆಪಿಗೆ ಹೋಗುತ್ತಾರೆ. ಸಂದರ್ಭ ಬಂದಾಗ ಅವರೂ ಸಿಎಂ ಆಗುತ್ತಾರೆ. ಈ ಬಗ್ಗೆ ನಮ್ಮ ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ’ ಎಂದರು.

ಇದೇ ವೇಳೆ ಮುಂಬರುವ ದಸರಾ ಉತ್ಸವ ಉದ್ಘಾಟಿಸಲು ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ್ದಕ್ಕೆ ಧಾರ್ಮಿಕ ಮತ್ತು ಜಾತಿ ಆಧಾರಿತ ಆಕ್ಷೇಪಣೆಗಳು ಬರುತ್ತಿರುವುದನ್ನು ಸಚಿವರು ಖಂಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ