ಕೆಎನ್ ರಾಜಣ್ಣ 
ರಾಜಕೀಯ

ಸಚಿವ ಸಂಪುಟಕ್ಕೆ ಮರಳಲು ಕೊನೆಯ ಯತ್ನ: ದೆಹಲಿಯಲ್ಲಿ ರಾಜಣ್ಣ ಶಕ್ತಿ ಪ್ರದರ್ಶನ; ಮೂಲೆಗುಂಪು ಮಾಡಿದ್ರೆ ಬಿಜೆಪಿ ಸೇರ್ಪಡೆ?

ಪಕ್ಷಾತೀತವಾಗಿ ರಾಜಣ್ಣ ಅವರ ಸಾವಿರಾರು ಬೆಂಬಲಿಗರು ಅಕ್ಟೋಬರ್‌ನಲ್ಲಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಸಾಧ್ಯತಯಿದೆ. ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಲಿದ್ದಾರೆ.

ಬೆಂಗಳೂರು/ತುಮಕೂರು: ರಾಜ್ಯ ಸಚಿವ ಸಂಪುಟಕ್ಕೆ ಮರಳಲು ಕೊನೆಯ ಪ್ರಯತ್ನವಾಗಿ ನವದೆಹಲಿಯಲ್ಲಿ ತಮ್ಮ ಬಲ ಪ್ರದರ್ಶನಕ್ಕೆ ಮಾಜಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಸಿದ್ಧತೆ ನಡೆಸುತ್ತಿದ್ದಾರೆ.

ಪಕ್ಷಾತೀತವಾಗಿ ರಾಜಣ್ಣ ಅವರ ಸಾವಿರಾರು ಬೆಂಬಲಿಗರು ಅಕ್ಟೋಬರ್‌ನಲ್ಲಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಸಾಧ್ಯತೆ ಇದ್ದು, ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಒತ್ತಾಯಿಸಲಿದ್ದಾರೆ.

ಮುಂದಿನ ರಾಜಕೀಯ ನಿರ್ಧಾರ ಕೈಗೊಳ್ಳುವ ಮೊದಲು ತುಮಕೂರಿನಲ್ಲಿ ಹಿಂದುಳಿದ ವರ್ಗಗಳ ಬೆಂಬಲ ಗಳಿಸುವ ರಾಜಣ್ಣ ಅವರ ಯೋಜನೆಯಾಗಿ ಈ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಜಣ್ಣ ಅವರಿಗೆ ನ್ಯಾಯ ಸಿಗುವವರೆಗೆ ಹಿಂದುಳಿದ ವರ್ಗಗಳ ವೇದಿಕೆಯಡಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರ ಬೆಂಬಲಿಗ, ತುಮಕೂರು ನಗರ ನಿಗಮದ ಮಾಜಿ ಸದಸ್ಯ ಧನಿಯಾ ಕುಮಾರ್ ತಿಳಿಸಿದ್ದಾರೆ. ಪ್ರತಿಭಟನಾಕಾರರು ನವದೆಹಲಿಗೆ ರೈಲು ಹತ್ತುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ರಾಜಣ್ಣ ಅವರ ಮುಂದೆ ಹಲವು ಆಯ್ಕೆಗಳಿವೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ರಾಜಣ್ಣ ಅವರ ಬಗ್ಗೆ ಗಮನ ಹರಿಸದಿದ್ದರೆ ಬಿಜೆಪಿ ಸೇರುವ ಯೋಜನೆ ಹೊಂದಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಧರ್ಮಸ್ಥಳ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ಸ್ಥಾಪಿಸಿರುವುದನ್ನು ಟೀಕಿಸುವ ಮೊದಲು ಕೇಸರಿ ಶಾಲು ಧರಿಸಿ ಅವರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ರಾಜಣ್ಣ ಪ್ರತಿನಿಧಿಸುವ ಮಧುಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಬಲವಾದ ನೆಲೆ ಇಲ್ಲದ ಕಾರಣ, ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಒಪ್ಪಿಗೆ ನೀಡಿದರೆ, 2028 ರ ವಿಧಾನಸಭಾ ಚುನಾವಣೆಗೆ ಮುನ್ನ ಜೆಡಿಎಸ್ ಸೇರುವ ಬಗ್ಗೆಯೂ ಅವರು ಯೋಚಿಸಬಹುದು.

ಇದು ಹಳೆಯ ಮೈಸೂರು ಪ್ರದೇಶದಲ್ಲಿ ರಾಜಕೀಯ ಧ್ರುವೀಕರಣಕ್ಕೆ ಕಾರಣವಾಗಬಹುದು. ಇದರಿಂದ ಕೆಲವು ಮಾಜಿ ಜೆಡಿಎಸ್ ನಾಯಕರು ಪ್ರಾದೇಶಿಕ ಪಕ್ಷಕ್ಕೆ ಹಿಮ್ಮೆಟ್ಟುತ್ತಾರೆ. ಏಕೆಂದರೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ರಾಜಕೀಯ ವಿಶ್ಲೇಷಕರು ಗಮನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT