ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ 
ರಾಜಕೀಯ

'ರಾಜಕೀಯ ನಮ್ಮಪ್ಪನ ಆಸ್ತಿಯಾ? ಏನ್ ಆಗುತ್ತೋ ಆಗಲಿ, ನಾನು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ'

ಸಚಿವ ಸ್ಥಾನಕ್ಕೆ ಆಕಾಂಕ್ಷಿಯಾಗಿರುವ ಹಾಸನ ಜಿಲ್ಲೆಯ ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಸಿಎಂ ಸಿದ್ದರಾಮಯ್ಯ ಅವರನ್ನು ಖುದ್ದು ಭೇಟಿಯಾಗಿ ಮಾತನಾಡಿಸಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಆಡಿರುವ ಮಾತು ಬಹಳಷ್ಟು ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು: ರಾಜಕೀಯ ಶಾಶ್ವತ ಅಲ್ಲ. ನಾನು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ರಾಜಕೀಯ ನಮ್ಮಪ್ಪನ ಆಸ್ತಿಯಾ? ಏನ್ ಆಗುತ್ತೋ ಆಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಚ್ಚರಿ ಮಾತುಗಳನ್ನು ಆಡಿದ್ದಾರೆ.

ವಿಧಾನಸೌಧದಲ್ಲಿ ಸಭೆ ಮುಗಿಸಿ ಹೊರಬರುತ್ತಿದ್ದ ಸಿಎಂ ಸಿದ್ದರಾಮಯ್ಯಗೆ ಅಡ್ಡ ಬಂದು ನಿಂತ ಬೇಳೂರು ಗೋಪಾಲಕೃಷ್ಣ, ಮೊದಲು ಹಾಸ್ಯದ ಲಹರಿಯಲ್ಲಿ ನಾಟಿ ಕೋಳಿ ಸಾಂಬಾರ್ ಹೇಗಿತ್ತು ಸಾರ್? ಎಂದು ಪ್ರಶ್ನಿಸಿದ್ದಾರೆ. ಆದರೆ ಸಿಎಂ ಅವರ ಉತ್ತರ ಸಂಪೂರ್ಣ ಗಂಭೀರವಾಗಿತ್ತು.

ರಾಜಕೀಯ ಶಾಶ್ವತ ಅಲ್ಲ ಗೋಪಾಲಕೃಷ್ಣ. ನಾನು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ರಾಜಕೀಯ ನಮ್ಮಪ್ಪನ ಆಸ್ತಿಯಾ? ಏನ್ ಆಗುತ್ತೋ ಆಗಲಿ ಎಂದು ಅಚ್ಚರಿ ಮಾತುಗಳನ್ನು ಆಡಿದ್ದಾರೆ. ಈ ಒಂದು ಸಣ್ಣ ಸಂಭಾಷಣೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಸಚಿವ ಸ್ಥಾನಕ್ಕೆ ಆಕಾಂಕ್ಷಿಯಾಗಿರುವ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಸಿಎಂ ಸಿದ್ದರಾಮಯ್ಯ ಅವರನ್ನು ಖುದ್ದು ಭೇಟಿಯಾಗಿ ಮಾತನಾಡಿಸಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಆಡಿರುವ ಮಾತು ಬಹಳಷ್ಟು ಚರ್ಚೆಗೆ ಕಾರಣವಾಗಿದೆ.

ಇತ್ತೀಚೆಗೆ ಡಿಕೆಶಿ ಮನೆಯಲ್ಲಿ ನಡೆದ ಬ್ರೇಕ್‌ಫಾಸ್ಟ್ ಭೇಟಿ, ಅಧಿಕಾರ ಹಂಚಿಕೆ ಯುದ್ಧ, ದೆಹಲಿಯಲ್ಲಿ ನಡೆಯುತ್ತಿರುವ ಸಭೆಗಳು ಎಲ್ಲದರ ನಡುವೆಯೂ ಸಿಎಂ ಸಿದ್ದರಾಮಯ್ಯ ಹೈಕಮಾಂಡ್​ ಮಾತೇ ಅಂತಿಮ ಎಂದು ಹೇಳುತ್ತಿದ್ದಾರೆ. ಇದೀಗ ಮತ್ತೆ ಅಚ್ಚರಿ ಹೇಳಿಕೆ ಕೊಟ್ಟ ಸಿಎಂ ಏನ್ ಆಗುತ್ತೋ ಆಗಲಿ, ನಾನು ತಲೆ ಕಡೆಸಿಕೊಳ್ಳುವುದಿಲ್ಲ, ರಾಜಕೀಯ ಶಾಶ್ವತ ಅಲ್ಲ, ನಮ್ಮಪ್ಪನ ಆಸ್ತಿಯೂ ಅಲ್ಲ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ಮಾಡುತ್ತಿರುವ ಬೇಳೂರು ಗೋಪಾಲಕೃಷ್ಣ ದೆಹಲಿಯಲ್ಲಿಯೂ ಹೈಕಮಾಂಡ್‌ಗೆ ಒತ್ತಡ ಹೇರಿದ್ದರು. ಆದರೆ ಸಿಎಂ ಅವರ ಈ ಮಾತುಗಳು ಸಚಿವ ಸ್ಥಾನ ಖಾತರಿಯಿಲ್ಲ ಎಂಬ ಸ್ಪಷ್ಟ ಸಂದೇಶವನ್ನೇ ನೀಡಿವೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಅಕ್ರಮ ಮತ್ತೆ ನಡೆಯಲು ಅವಕಾಶ ಕೊಡುವುದಿಲ್ಲ’: ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್-Video

ಪೆಟ್ರೋಲ್–ಡೀಸೆಲ್ ಬೆಲೆ ತಲಾ ರೂ.3 ಏರಿಕೆ: ಜಾಗತಿಕ ಬಿಕ್ಕಟ್ಟು ನಡುವೆಯೂ ಭಾರತದಲ್ಲಿ ಇಂಧನ ದರ ಏರಿಕೆ ಅತ್ಯಂತ ಕಡಿಮೆ; ಕೇಂದ್ರ ಸರ್ಕಾರ ಸಮರ್ಥನೆ

NEET UG re-exam- ಪ್ರಶ್ನೆಪತ್ರಿಕೆ ಸೋರಿಕೆ: ಜೂ.21ಕ್ಕೆ ನೀಟ್-ಯುಜಿ ಮರು ಪರೀಕ್ಷೆ ನಿಗದಿ

ಭಾರತಕ್ಕೂ ತಟ್ಟಿದ ಮಧ್ಯಪ್ರಾಚ್ಯ ಸಂಘರ್ಷ ಎಫೆಕ್ಟ್: ಪೆಟ್ರೋಲ್-ಡೀಸೆಲ್ ದರ ಲೀಟರ್‌ಗೆ ರೂ.3 ಏರಿಕೆ, 4 ವರ್ಷಗಳ ಬಳಿಕ ಇಂಧನ ದರ ಪರಿಷ್ಕರಣೆ..!

ಕ್ಸೀ ಜಿನ್ಪಿಂಗ್ ನ್ನು ಹಾಡಿ ಹೊಗಳಿದ ಟ್ರಂಪ್; ಅವರು ಬಹಳ ಎತ್ತರ, ಹಾಲಿವುಡ್ ನಲ್ಲಿ ನಟಿಸಬಹುದು-US President

SCROLL FOR NEXT