ಅರವಿದ್ ಬೆಲ್ಲದ್ 
ರಾಜಕೀಯ

ಸಿದ್ದರಾಮಯ್ಯ ಅಹಿಂದ ನಾಯಕ ಅಲ್ಲ; ಕೇವಲ ಕುರುಬರ ನಾಯಕ ಅಷ್ಟೇ: ಅರವಿಂದ ಬೆಲ್ಲದ

ಓಬಿಸಿಯಲ್ಲಿ ಈಡಿಗ, ಮಡಿವಾಳ, ಸವಿತಾ ಸಮಾಜ, ಮರಾಠ, ಕಂಬಾರ, ಕುಂಬಾರರು, ವಿಶ್ವಕರ್ಮ ಸೇರಿದಂತೆ ಬಹಳಷ್ಟು ಸಮುದಾಯ ಇದೆ. ಆ ಸಮಾಜಗಳು ನಮ್ಮ ನಾಯಕ ಸಿದ್ದರಾಮಯ್ಯ ಎಂದು ಎಲ್ಲಿ ಒಪ್ಪಿಕೊಂಡಿದ್ದಾರೆ?

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ನಾಯಕ ಅಲ್ಲ. ಅವರು ಕುರುಬರ ನಾಯಕರು ಅಷ್ಟೇ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.

ನವದೆಹಲಿಯಲ್ಲಿ ಮಾತನಾಡಿದ ಅವರು, 'ಅಹಿಂದದಲ್ಲಿ ಹತ್ತಾರು ಜಾತಿಗಳಿವೆ. ಆ ಜಾತಿಯವರು ಯಾರೂ ಸಿದ್ದರಾಮಯ್ಯ ಅವರನ್ನು ನಾಯಕನೆಂದು ಒಪ್ಪಿಕೊಂಡಿಲ್ಲ. ಅವರು ಯಾವ ರೀತಿಯ ಒಬಿಸಿ ನಾಯಕ ಎಂದು ಪ್ರಶ್ನಿಸಿದರು. ಓಬಿಸಿಯಲ್ಲಿ ಈಡಿಗ, ಮಡಿವಾಳ, ಸವಿತಾ ಸಮಾಜ, ಮರಾಠ, ಕಂಬಾರ, ಕುಂಬಾರರು, ವಿಶ್ವಕರ್ಮ ಸೇರಿದಂತೆ ಬಹಳಷ್ಟು ಸಮುದಾಯ ಇದೆ. ಆ ಸಮಾಜಗಳು ನಮ್ಮ ನಾಯಕ ಸಿದ್ದರಾಮಯ್ಯ ಎಂದು ಎಲ್ಲಿ ಒಪ್ಪಿಕೊಂಡಿದ್ದಾರೆ? ಅವರು ಯಾವ ರೀತಿಯ ಓಬಿಸಿ ನಾಯಕ? ಅಲ್ಪಸಂಖ್ಯಾತರ ಮತ ಕಾಂಗ್ರೆಸ್ ಜೊತೆಗಿದೆ, ಅದು ಸಿದ್ದರಾಮಯ್ಯ ವೋಟ್ ಅಲ್ಲ, ಸಿದ್ದರಾಮಯ್ಯ ಅಹಿಂದಾ ನಾಯಕ ಅಲ್ಲ ಎಂದರು.

ಅಲ್ಪಸಂಖ್ಯಾತರ ಮತ ಕಾಂಗ್ರೆಸ್ ಜತೆಗೆ ಇದೆ. ಅದು ಸಿದ್ದರಾಮಯ್ಯ ಅವರ ಮತ ಬ್ಯಾಂಕ್ ಅಲ್ಲ. ಅಹಿಂದ ನಾಯಕನೆಂದು ಬಿಂಬಿಸಿಕೊಂಡು ಹೈಕಮಾಂಡ್‌ ಅನ್ನು ಬೆದರಿಸುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆಎಂದರು. ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಪಕ್ಷದಲ್ಲಿ ಇನ್ನೂ ತೀರ್ಮಾನ ಆಗಿಲ್ಲ ಎಂದು ಸ್ಪಷ್ಟಪಡಿಸಿದರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುವುದು ನಿಶ್ಚಿತ, ಹೊಸ ಸಿಎಂ ಯಾರು ಎನ್ನುವುದು ಗೊತ್ತಿಲ್ಲ. ಆದರೆ ಯಾರೇ ಸಿಎಂ ಆದರೂ ಕಾಂಗ್ರೆಸ್ ಪಕ್ಷದಿಂದ ರಾಜ್ಯಕ್ಕೆ ಒಳ್ಳೆಯದಾಗುವುದಿಲ್ಲ

ರಾಜ್ಯದಲ್ಲಿ ಆಡಳಿತ ಕುಸಿದು ಬಿದ್ದಿದೆ. ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ. ಸೂಟ್‌ಕೇಸ್ ತಲುಪಿಸುವ ಸ್ಪರ್ಧೆಯಲ್ಲಿ ಭ್ರಷ್ಟಾಚಾರ ಆಕಾಶಕ್ಕೆ ಮುಟ್ಟಿದೆ. ಸಿಎಂ ಯಾರು ಆಗಬೇಕು ಅದು ಅವರ ಪಕ್ಷದ ತಿರ್ಮಾನ. ಆದರೆ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT