ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್  
ರಾಜಕೀಯ

ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ತಮ್ಮ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ: BJP ಕುರಿತು ಸಿಎಂ ವ್ಯಂಗ್ಯ

ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ನಡೆದ ಭ್ರಷ್ಟಾಚಾರ ಹಗರಣಗಳು ಒಂದೇ, ಎರಡೇ. ಕೊರೊನಾ ಕಾಲದಲ್ಲಿ ಜನ ಹಾದಿಬೀದಿಯಲ್ಲಿ ಸಾಯುವಾಗಲೂ ವೆಂಟಿಲೇಟರ್, ಮಾಸ್ಕ್, ಸ್ಯಾನಿಟೈಸರ್, ಐಸಿಯು ಖರೀದಿ ಎನ್ನದೆ ಎಲ್ಲದರಲ್ಲಿಯೂ ನಿರ್ಲಜ್ಜರಾಗಿ ಲೂಟಿ ಮಾಡಲಾಗಿತ್ತು.

ಬೆಂಗಳೂರು: ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿ, ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.

ಪ್ರವಾಸಕಥನ ಜನಾರ್ಪಣೆ ಕಾರ್ಯಕ್ರಮದಲ್ಲಿ ಉಪಲೋಕಾಯುಕ್ತ ಬಿ.ವೀರಪ್ಪ ಅವರು ಆಡಿದ್ದ ಮಾತನ್ನು ಆಧರಿಸಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಅವರು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದರು.

ಈ ಹೇಳಿಕೆಗೆ ಮುಖ್ಯಮಂತ್ರಿಗಳು ತಿರುಗೇಟು ನೀಡಿದ್ದು, ಗೌರವಾನ್ವಿತ ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು 2019ರ ನವೆಂಬರ್‌ನಲ್ಲಿ ಕೊಟ್ಟ ವರದಿಯಲ್ಲಿ ರಾಜ್ಯದಲ್ಲಿ ಶೇ.63 ಭ್ರಷ್ಟಾಚಾರ ಇದೆ ಎಂಬುದಾಗಿತ್ತು. ಅದೇ ವರದಿಯನ್ನು ಆಧರಿಸಿ ಬಿ.ವೀರಪ್ಪನವರು ಇಂದು ಮಾತನಾಡಿದ್ದಾರೆ. ಅವರು ವರದಿ ನೀಡುವ ವೇಳೆಯಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇತ್ತು. ಬಿಜೆಪಿಯವರು ಇಂದು ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ನಡೆದ ಭ್ರಷ್ಟಾಚಾರ ಹಗರಣಗಳು ಒಂದೇ, ಎರಡೇ. ಕೊರೊನಾ ಕಾಲದಲ್ಲಿ ಜನ ಹಾದಿಬೀದಿಯಲ್ಲಿ ಸಾಯುವಾಗಲೂ ವೆಂಟಿಲೇಟರ್, ಮಾಸ್ಕ್, ಸ್ಯಾನಿಟೈಸರ್, ಐಸಿಯು ಖರೀದಿ ಎನ್ನದೆ ಎಲ್ಲದರಲ್ಲಿಯೂ ನಿರ್ಲಜ್ಜರಾಗಿ ಲೂಟಿ ಮಾಡಲಾಗಿತ್ತು ಎಂದು ಕಿಡಿಕಾರಿದ್ದಾರೆ.

ಪ್ರತಿ ಇಲಾಖೆಯಲ್ಲಿ ಕನಿಷ್ಠ 40% ಕಮಿಷನ್ ಚಾಲ್ತಿಯಲ್ಲಿ ಇತ್ತು. ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಎಂಬುವವರು ಅಂದಿನ ಸಚಿವ ಈಶ್ವರಪ್ಪನವರ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದರು. ನೀರಾವರಿ ಇಲಾಖೆಯ ಭದ್ರಾ ಮೇಲ್ದಂಡೆ ಹಾಗೂ ಕಾವೇರಿ ನೀರಾವರಿ ನಿಗಮದಲ್ಲಿ ಭಾರೀ ಅಕ್ರಮ ನಡೆದಿದ್ದು, ಸುಮಾರು ರೂ.20,000 ಕೋಟಿ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ಸ್ವತಃ ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾದ ಹೆಚ್.ವಿಶ್ವನಾಥ್ ಅವರು ಇಂದಿನ ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರ ವಿರುದ್ಧ ನೇರಾನೇರ ಆರೋಪ ಮಾಡಿದ್ದರು. ಪಿಎಸ್‌ಐ ನೇಮಕಾತಿಯಲ್ಲಿ ಹಗರಣ ಮಾಡಿ ನಿಮ್ಮ ಹಲವು ಬಂಧು ಮಿತ್ರರು ಜೈಲು ಸೇರಿ ಬಂದಿದ್ದಾರೆ. ಇವೆಲ್ಲಾ ಮರೆತು ಹೋಯಿತೇ? ಹೀಗೆ ಬಿಜೆಪಿ ಕಾಲದ ಹಗರಣಗಳನ್ನು ಪಟ್ಟಿಮಾಡುತ್ತಾ ಹೋದರೆ ಒಂದು ಮಹಾಗ್ರಂಥವನ್ನೇ ಬರೆಯಬಹುದು ಎಂದು ಕುಟುಕಿದ್ದಾರೆ.

ಇಂದು "ನ ಖಾವೂಂಗಾ, ನ ಖಾನೆದೂಂಗ" ಎನ್ನುವ ಪ್ರಧಾನಿ ಮೋದಿ ಅವರ‌ ಆಡಳಿತದಲ್ಲಿ ಭಾರತ ಭ್ರಷ್ಟಾಚಾರದಲ್ಲೇ ಮುಳುಗೇಳುತ್ತಿದೆ. ಇದಕ್ಕೆ ಟ್ರಾನ್ಸ್‌ಪರೆಸಿ ಇಂಟರ್ನ್ಯಾಷನಲ್ ನವರು ಬಿಡುಗಡೆ ಮಾಡಿರುವ ಜಾಗತಿಕ ಭ್ರಷ್ಟಾಚಾರಯುಕ್ತ ದೇಶಗಳ ಪಟ್ಟಿಯಲ್ಲಿ ಭಾರತ 96ನೇ ಸ್ಥಾನದಲ್ಲಿ ಇರುವುದು ಸಾಕ್ಷಿ. ಮೊದಲು ಆರ್.ಅಶೋಕ್ ಅವರು ತಮ್ಮ ಪ್ರಧಾನ ಸೇವಕರ ಬಳಿ ಭಾರತದ ಈ ದಯನೀಯ ಸ್ಥಿತಿಗೆ ಕಾರಣವೇನು ಎಂಬ ಪ್ರಶ್ನೆಯನ್ನೆತ್ತಲಿ ಎಂದು ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

H-1B visa ನಿಯಮದಲ್ಲಿ ಅಮೆರಿಕಾ ಮಹತ್ವದ ಬದಲಾವಣೆ: ಇನ್ನು ಮುಂದೆ ಅರ್ಜಿದಾರರ "social media" ಖಾತೆ ಪಬ್ಲಿಕ್ ಇದ್ದರಷ್ಟೇ ವೀಸಾ..!

ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆ: ರಾಜ್ಯ ಸರ್ಕಾರ ಘೋಷಣೆ

ರಷ್ಯಾ ಅಧ್ಯಕ್ಷ Putin ಗೆ ಮೋದಿ ನಿವಾಸದಲ್ಲಿ ವಿಶೇಷ ಭೋಜನ ಕೂಟ!

ಇನ್ನೂ 2-3 ದಿನ ಅವಾಂತರ; ಫೆ. 10 ರವರೆಗೆ ನಿಯಮಗಳ ವಿನಾಯಿತಿ ಕೋರಿದ IndiGo!

ಭಾರತಕ್ಕೆ ಬಂದ ಆಪ್ತ ಗೆಳೆಯ Putin ಗೆ ಭಗವದ್ಗೀತೆ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ! ವಿಶೇಷ ಏನು?

SCROLL FOR NEXT