ಸಿಎಂ ಸಿದ್ದರಾಮಯ್ಯ ಮತ್ತು ಸೋನಿಯಾ ಗಾಂಧಿ (ಸಂಗ್ರಹ ಚಿತ್ರ) 
ರಾಜಕೀಯ

ಕುರ್ಚಿ ಕದನ: ಸೋನಿಯಾ ಗಾಂಧಿ ಮಧ್ಯಪ್ರವೇಶ; ಜನವರಿ ಮಧ್ಯದ ವೇಳೆಗೆ ಬಿಕ್ಕಟ್ಟು ಶಮನ..!

ಸೋನಿಯಾ ಗಾಂಧಿಯವರು ನವದೆಹಲಿಯಲ್ಲಿ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನಾ) ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರನ್ನು ಶನಿವಾರ ಭೇಟಿ ಮಾಡಿದ್ದು, ರಾಜ್ಯದ ರಾಜಕೀಯ ಪರಿಸ್ಥಿತಿಯನ್ನು ಅವಲೋಕನ ನಡೆಸಿದರು.

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದೊಂದು ತಿಂಗಳಿಂದ ಭಾರಿ ಚರ್ಚೆಗೆ ಕಾರಣವಾಗಿರುವ ಅಧಿಕಾರ ಹಸ್ತಾಂತರ ವಿಚಾರದಲ್ಲಿ ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಅವರು ಮಧ್ಯಪ್ರವೇಶಿಸಿದ್ದು, ಜನವರಿ ಮಧ್ಯದ ವೇಳೆಗೆ ಬಿಕ್ಕಟ್ಟು ಶಮನಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.

ಜನವರಿ 15 ರ ನಂತರ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿದೇಶಕ್ಕೆ ತೆರಳಲಿದ್ದು, ಅದಕ್ಕೂ ಮೊದಲು ಈ ಬಿಕ್ಕಟ್ಟನ್ನು ಕೊನೆಗೊಳಿಸುವ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಸೋನಿಯಾ ಗಾಂಧಿಯವರು ನವದೆಹಲಿಯಲ್ಲಿ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನಾ) ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರನ್ನು ಶನಿವಾರ ಭೇಟಿ ಮಾಡಿದ್ದು, ರಾಜ್ಯದ ರಾಜಕೀಯ ಪರಿಸ್ಥಿತಿಯನ್ನು ಅವಲೋಕನ ನಡೆಸಿದರು.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ನಂತರ, 2026 ರಲ್ಲಿ ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶಗಳಿಗೆ ನಡೆಯಲಿರುವ ಚುನಾವಣೆಗೆ ಪಕ್ಷವು ಸಜ್ಜಾಗಬೇಕಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಸೃಷ್ಟಿಯಾಗಿರುವ ಗೊಂದಲವನ್ನು ಸೋನಿಯಾ ಗಾಂಧಿಯವರು ಗಂಭೀರವಾಗಿ ಪರಿಗಣಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಡಿಕೆ.ಶಿವಕುಮಾರ್ ಅವರ ಬಗ್ಗೆ ಸೋನಿಯಾ ಗಾಂಧಿಯವರು ಮೃದುತ್ವ ಧೋರಣೆಯನ್ನು ಹೊಂದಿದ್ದು, ನಾಯಕತ್ವ ವಿಚಾರದಲ್ಲಿ ಸೋನಿಯಾ ಅವರು ಮಧ್ಯಪ್ರವೇಶಿಸಿರುವುದು, ಡಿಕೆ.ಶಿವಕುಮಾರ್ ಬೆಂಬಲಿಗರಲ್ಲಿ ಸಂತಸ ಮೂಡಿಸಿದೆ.

2023 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ನಡೆದ ಅಧಿಕಾರ ಹಂಚಿಕೆ ಒಪ್ಪಂದವಾಗಿದ್ದು, ಈ ಒಪ್ಪಂದದ ವೇಳೆ ಸೋನಿಯಾ ಮತ್ತು ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಇದ್ದರೂ ಎನ್ನಲಾಗಿದೆ.

ಒಪ್ಪಂದದ ಪ್ರಕಾರ, ಸಿದ್ದರಾಮಯ್ಯ ಅವರು ಎರಡೂವರೆ ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ ನಂತರ ಸಿಎಂ ಹುದ್ದೆಯನ್ನು ಡಿಕೆ. ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕಾಗುತ್ತದೆ.

ಈ ನಡುವೆ ಸಿದ್ದರಾಮಯ್ಯ ಬೆಂಬಲಿಗರು ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಅವರನ್ನು ಮುಂದುವರೆಸಬೇಕೆಂದು ರಾಹುಲ್ ಗಾಂಧಿಯವರನ್ನು ಒತ್ತಾಯಿಸುತ್ತಿದ್ದಾರೆ. ಒಂದು ಸಿದ್ದರಾಮಯ್ಯ ಅವರನ್ನು ಬಲವಂತವಾಗಿ ಕೆಳಗಿಳಿಸಿದರೆ ಅಹಿಂದ ಸಮುದಾಯಗಳ ಬೆಂಬಲ ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆಂದು ತಿಳಿದುಬಂದಿದೆ.

ದೆಹಲಿಯಲ್ಲಿ ಇತ್ತೀಚೆಗೆ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಒಂದು ಗಂಟೆಗೂ ಹೆಚ್ಚು ಕಾಲ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದ ಪ್ರಿಯಾಂಕ್ ಅವರು, ಡಿಕೆ. ಶಿವಕುಮಾರ್ ಅವರಿಗೆ ಹತ್ತಿರವಾಗುತ್ತಿದ್ದು. ಇತ್ತೀಚೆಗೆ ಡಿಕೆ.ಶಿವಕುಮಾರ್ ಅವರನ್ನು ಭೇಟಿಯಾಗುವ ಮೂಲಕ ಹೈಕಮಾಂಡ್ ಶಿವಕುಮಾರ್ ಜೊತೆ ನಿಲ್ಲುವ ಸಾಧ್ಯತೆ ಇದೆ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗಿಂತ ಮೊದಲು ಕಾಂಗ್ರೆಸ್ ಇರಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಏತನ್ಮಧ್ಯೆ ಸೋನಿಯಾ ಗಾಂಧಿಯವರು ನಿರ್ಧಾರ ತೆಗೆದುಕೊಳ್ಳುವ ಮೊದಲು ಹಲವಾರು ಆಯ್ಕೆಗಳನ್ನು ಪರಿಗಣಿಸುವ ಸಾಧ್ಯತೆಯಿದ್ದು, ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಪ್ತರ ನಡುವೆ ಭಿನ್ನಾಭಿಪ್ರಾಯ ಮುಂದುವರಿದರೆ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಹುದ್ದೆಗೆ ಒಮ್ಮತದ ಅಭ್ಯರ್ಥಿಯನ್ನಾಗಿ ಹೆಸರಿಸುವ ಬಗ್ಗೆಯೂ ಯೋಚಿಸಬಹುದು ಎಂದು ಖರ್ಗೆ ಅವರ ಬೆಂಬಲಿಗರು ಹೇಳಿದ್ದಾರೆ.

ಸಿದ್ದರಾಮಯ್ಯ ಅವರ ಮನವೊಲಿಸಿದ್ದೇ ಆದರೆ, ಹಿಂದುಳಿದ ವರ್ಗಗಳ ಮೇಲೆ ವಿಶೇಷವಾಗಿ ಕುರುಬ ಸಮುದಾಯದ ಮೇಲೆ ಪ್ರಭಾವ ಬೀರಲು ಹೈಕಮಾಂಡ್ ಸಿದ್ದರಾಮಯ್ಯಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಬಹುದು ಅಥವಾ ಎಲ್‌ಒಪಿ ಹುದ್ದೆಗೆ ಪರಿಗಣಿಸಬಹುದು ಎಂದು ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲೋಕಸಭೆಯಲ್ಲಿ 'ವಂದೇ ಮಾತರಂ' ಚರ್ಚೆ: ದೇಶಕ್ಕೆ ಸ್ವಾತಂತ್ರ್ಯ ಬಂದ 79 ವರ್ಷಗಳ ನಂತರ ಚರ್ಚೆಯ ಅಗತ್ಯವೇನಿತ್ತು? ಪ್ರಿಯಾಂಕಾ ಗಾಂಧಿ, ಯಾದವ್ ತೀವ್ರ ಕಿಡಿ!

ಬೀದರ್: 'ಹಿಂದೂ' ಎನ್ನುವುದು ಧರ್ಮವೇ ಅಲ್ಲ, ಅದೊಂದು ಕೆಟ್ಟ ಬೈಗುಳ; ನಿವೃತ್ತ ನ್ಯಾಯಮೂರ್ತಿ

ನಿಮ್ಮ ಪತ್ನಿ ಭಾರತೀಯಳಲ್ಲವೇ? ವಲಸೆ ವಿಚಾರವಾಗಿ ಮತ್ತೆ 'ಅಪಹಾಸ್ಯ'ಕ್ಕೀಡಾದ ಅಮೆರಿಕಾದ ಉಪಾಧ್ಯಕ್ಷ ಜೆಡಿ ವ್ಯಾನ್ಸ್!

'ಇತಿಹಾಸ ತಿರುಚಲು' ಪ್ರಧಾನಿ ಮೋದಿ ಯತ್ನ; ನೆಹರೂ ಪರಂಪರೆ ಅಳಿಸಲು ಬಿಜೆಪಿಗೆ ಸಾಧ್ಯವಿಲ್ಲ: ಗೌರವ್ ಗೊಗೊಯ್; Video

ಇಂದು 500 Indigo ವಿಮಾನ ಹಾರಾಟ ರದ್ದು: ನಾವು ಹಗುರವಾಗಿ ಪರಿಗಣಿಸಲ್ಲ... ಇಂಡಿಗೋ ಬಿಕ್ಕಟ್ಟಿನ ಬಗ್ಗೆ ಕೇಂದ್ರ ಸಚಿವರ ಎಚ್ಚರಿಕೆ!

SCROLL FOR NEXT