ಡಾ ಯತೀಂದ್ರ ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್  
ರಾಜಕೀಯ

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ: ಪುತ್ರ ಡಾ ಯತೀಂದ್ರ ಹೇಳಿಕೆಗೆ ಡಿ.ಕೆ ಶಿವಕುಮಾರ್ ಹೇಳಿದ್ದೇನು?

ಈ ಹೇಳಿಕೆ ಕುರಿತು ಮಾಧ್ಯಮದವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ಕೇಳಿದರು.

ಬೆಂಗಳೂರು: ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಮುಗಿದರೂ ಸಿಎಂ ಕುರ್ಚಿ ಕದನ ರಾಜ್ಯ ಕಾಂಗ್ರೆಸ್ ನಲ್ಲಿ ಇನ್ನೂ ನಿಂತಂತೆ ಕಾಣುತ್ತಿಲ್ಲ. ಬೆಳಗಾವಿ ಅಧಿವೇಶನ ಮಧ್ಯೆ ಸಿಎಂ ಕುರ್ಚಿ ಗುದ್ದಾಟ ಸದ್ದು ಮಾಡುತ್ತಿದೆ.

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಎಂದು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಬೆಳಗಾವಿಯಲ್ಲಿ ನಿನ್ನೆ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಯತೀಂದ್ರ ಹೇಳಿಕೆಯ ಬೆನ್ನಲ್ಲೇ ವಿರೋಧ ಪಕ್ಷಗಳು ಕೂಡ ಈ ವಿಷಯಕ್ಕೆ ಧ್ವನಿಗೂಡಿಸಿ, ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿವೆ.

ಈ ಹೇಳಿಕೆ ಕುರಿತು ಮಾಧ್ಯಮದವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ಕೇಳಿದರು. ಬೆಳಗಾವಿಗೆ ತೆರಳುವ ಮುನ್ನ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ‘ಬಹಳ ಸಂತೋಷ, ಒಳ್ಳೆಯದಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ’ ಎಂದಷ್ಟೇ ಹೇಳಿದರು.

ಯತೀಂದ್ರ ಅವರ ಹೇಳಿಕೆ ಡಿ ಕೆ ಶಿವಕುಮಾರ್ ಅವರ ಬೆಂಬಲಿಗ ಶಾಸಕರನ್ನು ಕೆರಳಿಸಿದೆ. ಸಿಎಂ ಬದಲಾವಣೆ ನಿರ್ಧಾರ ಮಾಡುವುದು ಯತೀಂದ್ರ ಅವರಲ್ಲ. ಮುಖ್ಯಮಂತ್ರಿ ಬದಲಾವಣೆ ಮಾಡುವುದು ಹೈಕಮಾಂಡ್,ಯತೀಂದ್ರ ಅವರು ಮಾಡುವುದಿದ್ದರೆ ಅವರ ಹೇಳಿಕೆ ಪುರಸ್ಕರಿಸಬಹುದಾಗಿತ್ತು. ಮುಖ್ಯಮಂತ್ರಿ ಬದಲಾವಣೆಯೇ ಅಥವಾ ಸಿದ್ದರಾಮಯ್ಯನವರೇ ಮುಂದುವರಿಯುತ್ತಾರೆಯೇ ಎಂದು ಹೈಕಮಾಂಡ್ ಹೇಳಬೇಕು ಎಂದು ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ ಪ್ರತಿಕ್ರಿಯಿಸಿದ್ದಾರೆ.

ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಮಾಗಡಿ ಶಾಸಕ ಸಿ ಹೆಚ್ ಬಾಲಕೃಷ್ಣ, ಮಂಡ್ಯ ಶಾಸಕ ರವಿ ಗಣಿಗ ಕೂಡ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಹೊಸವರ್ಷ ಸಂಕ್ರಾಂತಿಗೆ ಸೂರ್ಯ ಪಥ ಬದಲಿಸುತ್ತಾನೆ. ಜನವರಿ 2ರ ನಂತರ ಮುಖ್ಯಮಂತ್ರಿ ಬದಲಾವಣೆ ಆಗುತ್ತದೋ ಇಲ್ಲವೋ ಎಂದು ನೋಡೋಣ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 20 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

'ಸತ್ಯವನ್ನು ಎದುರಿಸುವ ಧೈರ್ಯವಿಲ್ಲ'; ಭಾರತದ ಕಮ್ಯುನಿಸ್ಟರು ಸಂಪೂರ್ಣ ಹೇಡಿಗಳು: ನಿರ್ಮಲಾ ಸೀತಾರಾಮನ್ ವಾಗ್ದಾಳಿ