ಸಿಎಂ ಸಿದ್ದರಾಮಯ್ಯ-ಡಿಕೆ ಶಿವಕುಮಾರ್  online desk
ರಾಜಕೀಯ

ಕದ್ದುಮುಚ್ಚಿ ದೆಹಲಿಗೆ ಹೋಗಲ್ಲ; ಸೂಕ್ತ ಸಮಯದಲ್ಲಿ ಹೈಕಮಾಂಡ್ ನಮ್ಮನ್ನು ಕರೆಯುತ್ತದೆ: ಡಿಕೆಶಿ

ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪಕ್ಷದ ಹೈಕಮಾಂಡ್ ತಮಗೆ ಸಂದೇಶ ರವಾನಿಸಿದೆ ಎಂಬ ಸುಳಿವು ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, "ಸೂಕ್ತ ಸಮಯದಲ್ಲಿ ತಮ್ಮನ್ನು ದೆಹಲಿಗೆ ಕರೆಯುತ್ತಾರೆ" ಎಂದು ಶನಿವಾರ ಹೇಳಿದ್ದಾರೆ.

ಇಂದು ಸದಾಶಿವನಗರ ನಿವಾಸದ ಬಳಿ ದೆಹಲಿ ನಾಯಕರು ನಿಮಗೆ ಆಹ್ವಾನ ನೀಡಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ನಾನು ಕದ್ದುಮುಚ್ಚಿ ದೆಹಲಿಗೆ ಹೋಗಲ್ಲ. ಹೋಗುವುದಿದ್ದರೆ ನಿಮಗೂ ತಿಳಿಸುತ್ತೇವೆ. ನಿಮಗೆ ತಿಳಿಸದೇ ಏನೂ ಮಾಡುವುದಿಲ್ಲ ಎಂದರು.

ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಹಾಕಿದ್ದ ಚಾರ್ಜ್ ಶೀಟ್ ಕೋರ್ಟ್‌ನಲ್ಲಿ ತಿರಸ್ಕೃತಗೊಂಡಿದ್ದು, ಈಗ ಒಂದು ಎಫ್ಐಆರ್ ಬಾಕಿ ಉಳಿದುಕೊಂಡಿದೆ. ನಮ್ಮ ಮೇಲೆ ಯಾವ ರೀತಿ ದಬ್ಬಾಳಿಕೆ ನಡೆಯುತ್ತಿದೆ ಎಂದು ತಿಳಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.

ಇದೇ ವೇಳೆ ದೆಹಲಿ ಪೊಲೀಸರ ವಿಚಾರಣೆಗೆ ಹಾಜರಾಗುವ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, ನಾನು ಮಂಗಳವಾರ ದೆಹಲಿಗೆ ಹೋಗುತ್ತಿದ್ದು, ಆಗ ದೆಹಲಿ ಪೊಲೀಸರನ್ನು ಭೇಟಿ ಮಾಡುವೆ. ಅಂದು ಕೇಂದ್ರ ಜಲಶಕ್ತಿ ಸಚಿವರು ನದಿ ಜೋಡಣೆ ವಿಚಾರವಾಗಿ ಸಭೆ ಕರೆದಿದ್ದಾರೆ. ಅಂದು ನಮ್ಮ ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆ ವಿಚಾರವಾಗಿ ಚರ್ಚೆ ಮಾಡುವೆ. ಇದೇ ವೇಳೆ ಕೇಂದ್ರ ಅರಣ್ಯ ಸಚಿವರು, ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡಲು ಸಮಯ ಕೇಳಿರುವೆ. ರಾಜ್ಯದ ಹಿತಾಸಕ್ತಿ ವಿಚಾರವಾಗಿ ನಾನು ಅವರನ್ನು ಭೇಟಿ ಮಾಡಲು ತೀರ್ಮಾನಿಸಿರುವೆ. ರಾಜ್ಯದ ಸಂಸದರನ್ನು ಭೇಟಿಯಾಗುವ ಆಲೋಚನೆ ಇತ್ತು. ಇವೆಲ್ಲ ಆದ ನಂತರ ಅವರು ಬಂದರೆ ಪ್ರಧಾನಮಂತ್ರಿಗಳನ್ನೂ ಭೇಟಿ ಮಾಡುವೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಳನುಸುಳುವವರನ್ನು ಹೊರಗಿಡಲು SIR; ಆದ್ರೆ ದಶಕಗಳಿಂದ ಕಾಂಗ್ರೆಸ್ ಅವರನ್ನು ರಕ್ಷಿಸಿತ್ತು: ಪ್ರಧಾನಿ ಮೋದಿ

BMC election: ಕಾಂಗ್ರೆಸ್ ಏಕಾಂಗಿ ಸ್ಪರ್ಧೆ; ಉದ್ಧವ್ ಠಾಕ್ರೆ, ಶರದ್ ಪವಾರ್ ಜತೆ ಮೈತ್ರಿ ಇಲ್ಲ

ಬುರುಡೆ ಗ್ಯಾಂಗ್ ವಿರುದ್ಧ ತಿರುಗಿಬಿದ್ದ ಚಿನ್ನಯ್ಯ: ಜೀವ ಬೆದರಿಕೆ ಆರೋಪ ಮಾಡಿ ಐವರ ವಿರುದ್ಧ ಪೊಲೀಸರಿಗೆ ದೂರು!

'ಜಗತ್ತಿನಲ್ಲಿ ಅಧಿಕಾರದ ಅರ್ಥ ಈಗ ಬದಲಾಗಿದೆ...'; ಅಮೆರಿಕ-ಚೀನಾ ಜೊತೆ ಸಂಬಂಧ ವೃದ್ಧಿ ಮತ್ತಷ್ಟು ಜಟಿಲ: ಜೈಶಂಕರ್

'ಅಪ್ಪುಗೆಯಿಂದ ಆಕ್ರೋಶ'ಗೊಂಡ ಮೆಸ್ಸಿ ಕೋಲ್ಕತ್ತಾ ಕ್ರೀಡಾಂಗಣ ತೊರೆದರು: SITಗೆ ಮುಖ್ಯ ಸಂಘಟಕರು

SCROLL FOR NEXT