ಡಿ.ಕೆ. ಶಿವಕುಮಾರ್ 
ರಾಜಕೀಯ

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್: ಎಲ್ಲರೂ ಸೇರಿರೋದ್ರಲ್ಲಿ ತಪ್ಪೇನಿದೆ; ಡಿ.ಕೆ ಶಿವಕುಮಾರ್

ಹೈಕಮಾಂಡ್ ಗೆ ನಾವು ಎಟಿಎಂ ಎಂದು ವಿಜಯೇಂದ್ರ ಹೇಳಿದ್ದಾರೆ. ಇದನ್ನು ಅವರು ಸಾಬೀತು ಮಾಡಬೇಕು. ಯಾವ ಲೆಕ್ಕಾಚಾರದ ಮೇಲೆ ಅವರು ಆರೋಪ ಮಾಡಿದ್ದಾರೆ.

ಬೆಳಗಾವಿ: ಒಟ್ಟಿಗೆ ಸೇರಿ ಊಟ ಮಾಡುವುದನ್ನು ಬೇಡ ಎಂದು ಹೇಳಲು ಆಗುತ್ತದೆಯೇ? ನನಗೇಕೆ ಅದೆಲ್ಲಾ? ಹೊರಗಡೆಯಿಂದ ಬಂದಿದ್ದೀವಿ. ಎಲ್ಲಾ ಸೇರಿರೋದ್ರಲ್ಲಿ, ಊಟ ಮಾಡೋದ್ರಲ್ಲಿ ತಪ್ಪೇನಿದೆ?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮರುಪ್ರಶ್ನಿಸಿದ್ದಾರೆ.

ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಗುರುವಾರ ರಾತ್ರಿ ಡಿನ್ನರ್ ಮೀಟಿಂಗ್ ಬಗ್ಗೆ ಮಾತನಾಡಿದ ಅವರು, ಎಲ್ಲ ಸೇರಿ ಊಟ ಮಾಡೋದ್ರಲ್ಲಿ ತಪ್ಪು ಹುಡುಕಬೇಡಿ ಎಂದರು. ಅಲ್ಲಿ ಬರೀ ನಾಲ್ಕೈದು ಜನ ಸೇರಿದ್ರಂತೆ ಎಂದು ಮಾಧ್ಯಮದವರು ಕೇಳಿದಾಗ, "ಅದು ನನಗ್ಯಾಕೆ ಬೇಕು. ನನ್ನನ್ಯಾಕೆ ಈ ಪ್ರಶ್ನೆ ಕೇಳ್ತೀರಿ" ಎಂದು ಮರು ಪ್ರಶ್ನಿಸಿದರು.

ವಿಜಯೇಂದ್ರ ಅವರಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡೋಣ. ಹೈಕಮಾಂಡ್ ಗೆ ನಾವು ಎಟಿಎಂ ಎಂದು ವಿಜಯೇಂದ್ರ ಹೇಳಿದ್ದಾರೆ. ಇದನ್ನು ಅವರು ಸಾಬೀತು ಮಾಡಬೇಕು. ಯಾವ ಲೆಕ್ಕಾಚಾರದ ಮೇಲೆ ಅವರು ಆರೋಪ ಮಾಡಿದ್ದಾರೆ.

ಇಲ್ಲಿ ಸರಕಾರನಾ ನಾವು ದಿವಾಳಿ ಮಾಡಿ ದುಡ್ಡು ತೆಗೆದುಕೊಂಡು ಹೋಗಿ ಹೈಕಮಾಂಡ್ ಗೆ ಕೊಡುತ್ತಿದ್ದೇವೆ, ನಾವು ಹೈ ಕಮಾಂಡ್ ಗೆ ಎಟಿಎಂ ಎಂದು ಹೇಳಿದ್ದಾರೆ. ಈಗ ಏನು ಹೇಳಬೇಕು ಅದನ್ನು ಹೇಳಿದ್ದೇನೆ. ಉಳಿದ ಉತ್ತರಕ್ಕೆ ಸಮಯ ಬರುತ್ತದೆ, ಕಾಲವೇ ಉತ್ತರ ನೀಡುತ್ತದೆ. ಅವರಿಗೆ ಏನು ಬೇಕೋ ಆ ಉತ್ತರ ಈಗಾಗಲೇ ನೀಡಿದ್ದೇನೆ" ಎಂದರು.

ತಮ್ಮ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಅವರನ್ನು ವೈದ್ಯರು ತಪಾಸಣೆ ನಡೆಸಿದ್ದಾರೆ. ಯಾವುದೇ ಆತಂಕ ಪಡಬೇಕಿಲ್ಲ. ಕತ್ತಿನ ಬಳಿ ನೋವಿದೆ. ಒಂದೆರಡು ದಿನ ವಿಶ್ರಾಂತಿ ಬೇಕು ಎಂದು ಹೇಳಿದ್ದಾರೆ. ತೀವ್ರ ತೆರನಾದ ತೊಂದರೆ ಉಂಟಾಗಿಲ್ಲ. ದೇವಿ ಯಲ್ಲಮ್ಮನೇ ಕಾಪಾಡಿದ್ದಾಳೆ" ಎಂದರು.

"ಒಬ್ಬ ಯುವಕನ ಸಾವಾಗಿದೆ. ಆತನ ಕುಟುಂಬದವರನ್ನು ಭೇಟಿ ಮಾಡಲು ಮಂತ್ರಿಗಳಿಗೆ ತಿಳಿಸುತ್ತೇನೆ. ನನಗೂ ಈ ಬಗ್ಗೆ ನೋವಿದೆ. ಮೃತಪಟ್ಟವನು ಇನ್ನೂ ಯುವಕ, ವಾಹನ ಚಾಲಕನಿಗೂ ಎದೆಯ ಬಳಿ ನೋವಾಗಿದೆ. ದೇವಸ್ಥಾನಕ್ಕೆ ತೆರಳಿ ಬರುವಾಗ ವಾಹನ ಅಡ್ಡ ಬಂದ ಕಾರಣಕ್ಕೆ ಈ ದುರ್ಘಟನೆ ನಡೆದಿದ್ದು, ಮೃತನ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡಲಾಗುವುದು" ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದ್ದುಮುಚ್ಚಿ ದೆಹಲಿಗೆ ಹೋಗಲ್ಲ; ಸೂಕ್ತ ಸಮಯದಲ್ಲಿ ಹೈಕಮಾಂಡ್ ನಮ್ಮನ್ನು ಕರೆಯುತ್ತದೆ: ಡಿಕೆಶಿ

ಒಳನುಸುಳುವವರನ್ನು ಹೊರಗಿಡಲು SIR; ಆದ್ರೆ ದಶಕಗಳಿಂದ ಕಾಂಗ್ರೆಸ್ ಅವರನ್ನು ರಕ್ಷಿಸಿತ್ತು: ಪ್ರಧಾನಿ ಮೋದಿ

BMC election: ಕಾಂಗ್ರೆಸ್ ಏಕಾಂಗಿ ಸ್ಪರ್ಧೆ; ಉದ್ಧವ್ ಠಾಕ್ರೆ, ಶರದ್ ಪವಾರ್ ಜತೆ ಮೈತ್ರಿ ಇಲ್ಲ

ಬುರುಡೆ ಗ್ಯಾಂಗ್ ವಿರುದ್ಧ ತಿರುಗಿಬಿದ್ದ ಚಿನ್ನಯ್ಯ: ಜೀವ ಬೆದರಿಕೆ ಆರೋಪ ಮಾಡಿ ಐವರ ವಿರುದ್ಧ ಪೊಲೀಸರಿಗೆ ದೂರು!

'ಜಗತ್ತಿನಲ್ಲಿ ಅಧಿಕಾರದ ಅರ್ಥ ಈಗ ಬದಲಾಗಿದೆ...'; ಅಮೆರಿಕ-ಚೀನಾ ಜೊತೆ ಸಂಬಂಧ ವೃದ್ಧಿ ಮತ್ತಷ್ಟು ಜಟಿಲ: ಜೈಶಂಕರ್

SCROLL FOR NEXT