ಎಂ. ಬಿ. ಪಾಟೀಲ್ 
ರಾಜಕೀಯ

ಯಾರೋ ಒಬ್ಬರಿಂದ ಪಕ್ಷ ಅಧಿಕಾರಕ್ಕೆ ಬಂದಿಲ್ಲ: ಖರ್ಗೆ ಹೇಳಿಕೆ ಬೆಂಬಲಿಸಿದ ಎಂ.ಬಿ ಪಾಟೀಲ; ಡಿಕೆಶಿಗೆ ಪರೋಕ್ಷ ಟಾಂಗ್

ಕಾಂಗ್ರೆಸ್ ಯಾರೋ ಒಬ್ಬ ನಾಯಕನಿಂದ ಬೆಳೆದಿಲ್ಲ. ಹೀಗಾಗಿ ಯಾರೊಬ್ಬರೂ ನನ್ನಿಂದ ಅಧಿಕಾರಕ್ಕೆ ಬಂತು, ನಾನೇ ಪಕ್ಷ ಕಟ್ಟಿದ್ದೇನೆಂದು ಹೇಳಬಾರದು.

ವಿಜಯಪುರ: ಸಚಿವ ಎಂ.ಬಿ. ಪಾಟೀಲ ಅವರು, ಕಾಂಗ್ರೆಸ್ ಯಾರೋ ಒಬ್ಬ ನಾಯಕನಿಂದ ಬೆಳೆದಿಲ್ಲ ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಬೆಂಬಲಿಸುವ ಮೂಲಕ ಶನಿವಾರ ಪರೋಕ್ಷವಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಟಾಂಗ್ ನೀಡಿದ್ದಾರೆ.

ಕಾಂಗ್ರೆಸ್ ಯಾರೋ ಒಬ್ಬ ನಾಯಕನಿಂದ ಬೆಳೆದಿಲ್ಲ. ಹೀಗಾಗಿ ಯಾರೊಬ್ಬರೂ ನನ್ನಿಂದ ಅಧಿಕಾರಕ್ಕೆ ಬಂತು, ನಾನೇ ಪಕ್ಷ ಕಟ್ಟಿದ್ದೇನೆಂದು ಹೇಳಬಾರದು. ಕಾಂಗ್ರೆಸ್ ಪಕ್ಷ ಕಾರ್ಯಕರ್ತರಿಂದ ಕಟ್ಟಿದ ಪಕ್ಷ. ಪಕ್ಷ ಅಂದ ಮೇಲೆ ಎಲ್ಲರ ಪಾತ್ರವೂ ಇರುತ್ತೆ ಎಂದು ಮಲ್ಲಿಕಾರ್ಜನ ಖರ್ಗೆ ಅವರು ಕಲಬುರಗಿಯಲ್ಲಿ ಹೇಳಿದ್ದರು.

ಇಂದು ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಖರ್ಗೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಎಂ.ಬಿ.ಪಾಟೀಲ ಅವರು, ಖರ್ಗೆ ಅವರು ಹೇಳಿದ್ದು ಸತ್ಯ. ಕಾಂಗ್ರೆಸ್ ತತ್ವ, ಸಿದ್ಧಾಂತದ ಮೇಲೆ ನಿಂತಿದೆ. ಕೆಲವೇ ಜನರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂಬುದನ್ನು ನಾನು ಒಪ್ಪುವುದಿಲ್ಲ ಎಂದರು.

ಕಾಂಗ್ರೆಸ್ ರಾಜಕೀಯ ಪಕ್ಷವಾಗಿ ಹುಟ್ಟಿಕೊಂಡಿರೋದಲ್ಲ. ದೇಶದ ಸ್ವಾತಂತ್ರ್ಯ ಹೋರಾಟಕ್ಕಾಗಿ ಹುಟ್ಟಿಕೊಂಡ ಸಂಘಟನೆ. ಹೀಗಾಗಿ ಯಾರೋ ಸಹ ನನ್ನಿಂದಲೇ ಪಕ್ಷ ಅಧಿಕಾರಕ್ಕೆ ಬಂತು ಅಂತ ಹೇಳಬಾರದು ಎಂದರು.

ನಾಯಕತ್ವ ಬದಲಾವಣೆ ವಿಷಯದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ. ಹೈಕಮಾಂಡ್ ಏನು ಹೇಳುತ್ತದೆಯೋ ಅದಕ್ಕೆ ಸಿಎಂ, ಡಿಸಿಎಂ ಹಾಗೂ ನಾನೂ ಸೇರಿದಂತೆ ಎಲ್ಲ ಕಾಂಗ್ರೆಸ್ಸಿಗರು ಬದ್ಧರಾಗಿರುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

ಯುಗಾದಿ ಹಬ್ಬಕ್ಕೆ ಬಮೂಲ್ ನಿಂದ ಭರ್ಜರಿ ಗಿಫ್ಟ್: ಪ್ರತಿ ಲೀಟರ್ ಗೆ 1 ರೂ.ನಂತೆ ಹಾಲು ಉತ್ಪಾದಕರಿಗೆ ಬೋನಸ್; ಡಿ.ಕೆ. ಸುರೇಶ್

ಮದ್ಯ ಮಾರಾಟದಲ್ಲಿ ಶೇ.0.51 ಇಳಿಕೆ, ಆದರೂ ಸರ್ಕಾರಕ್ಕೆ 36,492 ಕೋಟಿ ರೂ. ಆದಾಯ..!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

SCROLL FOR NEXT