ಬಸನಗೌಡ ಪಾಟೀಲ್ ಯತ್ನಾಳ್ 
ರಾಜಕೀಯ

Hate Speech Bill: ದ್ವೇಷ ಭಾಷಣ ವಿಧೇಯಕ ತಡೆಹಿಡಿಯುವಂತೆ ರಾಜ್ಯಪಾಲರಿಗೆ ಪತ್ರ ಬರೆದ ಯತ್ನಾಳ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿರುವ ಯತ್ನಾಳ್ ಅವರು, ರಾಜ್ಯ ಸರ್ಕಾರ ಅಂಗೀಕರಿಸಿರುವ ದ್ವೇಷ ಭಾಷಣ ತಡೆ ಕಾಯ್ದೆಗೆ ಸಹಿ ಹಾಕದಂತೆ ಮನವಿ ಮಾಡಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಿದ ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025 ಅನ್ನು ವಿರೋಧಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸೋಮವಾರ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿರುವ ಯತ್ನಾಳ್ ಅವರು, ರಾಜ್ಯ ಸರ್ಕಾರ ಅಂಗೀಕರಿಸಿರುವ ದ್ವೇಷ ಭಾಷಣ ತಡೆ ಕಾಯ್ದೆಗೆ ಸಹಿ ಹಾಕದಂತೆ ಮನವಿ ಮಾಡಿದ್ದಾರೆ.

ಜನತೆಯ ವಾಕ್ ಸ್ವಾತಂತ್ರ್ಯ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ, 2025ಗೆ ಸಹಿ ಹಾಕದೆ ತೆಹಿಡಿಯಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

ಸದರಿ ವಿಧೇಯಕವನ್ನು ಬಳಸಿ ರಾಜಕೀಯ ವಿರೋಧಿಗಳನ್ನು ದಮನಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಮೇಲಾಗಿ ಈಗಾಗಲೇ ಭಾರತೀಯ ನ್ಯಾಯ ಸಂಹಿತೆಯಲ್ಲಿ(BNS) ದ್ವೇಷ ಭಾಷಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನು ಇರುವುದರಿಂದ, ಇದಕ್ಕೆ ಪ್ರತ್ಯೇಕ ವಿಧೇಯಕ ಅವಶ್ಯವಿರುವುದಿಲ್ಲ ಎಂದಿದ್ದಾರೆ.

ಸರ್ಕಾರದ ವಿರುದ್ಧ ಜನತೆ, ಸಂಘಟನೆಗಳು ಮಾಡುವ ರಚನಾತ್ಮಕ ಟೀಕೆಗಳನ್ನು ಶಿಕ್ಷಾರ್ಹ ಅಪರಾಧವಾಗಿ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನೇ ದುರ್ಬಲಗೊಳಿಸುವ ಪ್ರಯತ್ನ ಇದಾಗಿದೆ ಎಂದು ಯತ್ನಾಳ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಗೆಹರಿಸಿಕೊಳ್ಳಲು ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ, ನಾಯಕತ್ವ ಗೊಂದಲ "ಮಾಧ್ಯಮಗಳ ಸೃಷ್ಟಿ": ಡಿಕೆಶಿ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋಲು; BMC ಚುನಾವಣೆಗೆ ಕಾಂಗ್ರೆಸ್ ಜತೆ ಮೈತ್ರಿಗೆ ಶಿವಸೇನೆ(ಯುಬಿಟಿ) ಯತ್ನ!

Mark: ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ?: ಸುದೀಪ್ ಬೆನ್ನಿಗೆ ನಿಂತ ಚಕ್ರವರ್ತಿ ಚಂದ್ರಚೂಡ್

ಟಿಎಂಸಿಯಿಂದ ಅಮಾನತುಗೊಂಡ ಶಾಸಕನಿಂದ ಹೊಸ ಪಕ್ಷ ಘೋಷಣೆ; ಅಲ್ಪಸಂಖ್ಯಾತರು ಒಗ್ಗಟ್ಟಾಗುವಂತೆ ಮಮತಾ ಮನವಿ

ಜೆರುಸಲೆಮ್‌ನಲ್ಲಿ ಇಸ್ರೇಲ್ ಬುಲ್ಡೋಜರ್ ಕಾರ್ಯಾಚರಣೆ: ರಾತ್ರೋರಾತ್ರಿ ಮನೆ ಕಳೆದುಕೊಂಡ 100 ಪ್ಯಾಲೆಸ್ತೀನಿಯರು!

SCROLL FOR NEXT