ಸಿಎಂ ಸಿದ್ದರಾಮಯ್ಯ 
ರಾಜಕೀಯ

ನಾಯಕತ್ವ ಬದಲಾವಣೆ ಬಗ್ಗೆ ಹೆಚ್ಚು ಚರ್ಚಿಸುತ್ತಿರುವುದು ನೀವು, ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ?: ಮಾಧ್ಯಮಗಳ ವಿರುದ್ಧ ಸಿದ್ದರಾಮಯ್ಯ ಸಿಡಿಮಿಡಿ

ಕೆ.ಎನ್. ರಾಜಣ್ಣ ಅವರು ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ. ಶಿವಕುಮಾರ್ ಅವರು ನಮ್ಮ ಪಕ್ಷದ ಅಧ್ಯಕ್ಷರಾಗಿರುವುದರಿಂದ ಅವರನ್ನು ಭೇಟಿ ಮಾಡುವುದು ಸಹಜ ಪ್ರಕ್ರಿಯೆಯಾಗಿದೆ.

ಬೆಂಗಳೂರು: ಮಾಧ್ಯಮದವರೇ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದು, ಮಾಧ್ಯಮಗಳ ವಿರುದ್ಧ ಕಿಡಿಕಾರಿದರು.

ಮೈಸೂರಿನಲ್ಲಿ ಸಿಕ್ಕ ಮುಖ್ಯಮಂತ್ರಿಗಳಿಗೆ ಮಾಧ್ಯಮ ಪ್ರತಿನಿಧಿಗಳು ನಾಯಕತ್ವ ಬದಲಾವಣೆ ಕುರಿತು ನಾನಾ ಪ್ರಶ್ನೆಗಳನ್ನು ಕೇಳಿದರು.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ಕೆಎನ್ ರಾಜಣ್ಣ ಭೇಟಿಯಾದ ವಿಚಾರವನ್ನು ಪ್ರಸ್ತಾಪಿಸಿ, ಈ ಭೇಟಿ ಅಧಿಕಾರ ಹಸ್ತಾಂತರದ ಪೂರ್ವಭಾವಿ ಬೆಳವಣಿಗೆಯೇ ಎಂದು ಕೇಳಿದರು.

ಇದಕ್ಕೆ ಕೋಪಗೊಂಡ ಮುಖ್ಯಮಂತ್ರಿಗಳು, ಒನ್ಸ್ ಫಾರ್ ಆಲ್ ಈ ವಿಚಾರದ ಬಗ್ಗೆ ಹೇಳಿಬಿಡುತ್ತೇನೆ ಕೇಳಿ, ಹೈಕಮಾಂಡ್ ತೀರ್ಮಾನವೇ ಅಂತಿಮ. ಈಗಾಗಲೇ ನಾನು ಹೈಕಮಾಂಡ್ ಜೊತೆ ಮಾತನಾಡಿದ್ದು, ಅವರೇ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಅಲ್ಲಿಗೆ ಎಲ್ಲ ಗೊಂದಲಗಳು ಮುಗಿದಿದ್ದು, ಹೈಕಮಾಂಡ್ ತನ್ನ ನಿರ್ಧಾರವನ್ನು ಶೀಘ್ರವೇ ಪ್ರಕಟಿಸಲಿದೆ. ಆದರೆ ಈ ವಿಷಯದ ಬಗ್ಗೆ ಮಾಧ್ಯಮದವರೇ ಅನಗತ್ಯವಾಗಿ ಅತಿ ಹೆಚ್ಚು ಚರ್ಚೆ ಮಾಡುತ್ತಿದ್ದಾರೆಂದು ಕಿಡಿಕಾರಿದರು.

ನಾನು ಅಧಿವೇಶನದಲ್ಲಿ ಮಾತನಾಡಿದ ಮೇಲೂ ಈ ವಿಚಾರದಲ್ಲಿ ಯಾಕೆ ಪ್ರಶ್ನೆ ಕೇಳುತ್ತಿದ್ದೀರಾ ಎಂದು ಮಾಧ್ಯಮದವರನ್ನು ತರಾಟೆಗೆ ತೆಗೆದುಕೊಂಡರು.

ಡಿಕೆ.ಶಿವಕುಮಾರ್ ಹಾಗೂ ರಾಜಣ್ಣ ಭೇಟಿ ಕುರಿತು ಮಾತನಾಡಿ, ಕೆ.ಎನ್. ರಾಜಣ್ಣ ಅವರು ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ. ಶಿವಕುಮಾರ್ ಅವರು ನಮ್ಮ ಪಕ್ಷದ ಅಧ್ಯಕ್ಷರಾಗಿರುವುದರಿಂದ ಅವರನ್ನು ಭೇಟಿ ಮಾಡುವುದು ಸಹಜ ಪ್ರಕ್ರಿಯೆಯಾಗಿದೆ. ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಬಾರದು ಎಂಬ ಯಾವುದೇ ನಿಯಮಗಳಿಲ್ಲ. ಈ ಭೇಟಿಯಲ್ಲಿ ಯಾವುದೇ ಅಸಹಜತೆ ಇಲ್ಲದ ಕಾರಣ ಇದನ್ನು ತಪ್ಪಾಗಿ ಅರ್ಥೈಸುವ ಅಗತ್ಯವಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ