ಬಿ.ವೈ. ವಿಜಯೇಂದ್ರ 
ರಾಜಕೀಯ

JDS ಜೊತೆಗಿನ ಚುನಾವಣಾ ಮೈತ್ರಿ ತೀರ್ಮಾನ ಹೈಕಮಾಂಡ್‌'ಗೆ ಬಿಟ್ಟದ್ದು: ಬಿ.ವೈ ವಿಜಯೇಂದ್ರ

ಬಿಜೆಪಿ ಕೇಂದ್ರ ನಾಯಕತ್ವವು ಜೆಡಿಎಸ್ ಜೊತೆ ಕೈಜೋಡಿಸಲು ತೀರ್ಮಾನಿಸಿದೆ. ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಮುಂದಾಗಿದ್ದಾರೆ.

ಬೆಂಗಳೂರು: ಜೆಡಿಎಸ್ ಜೊತೆ ಚುನಾವಣಾ ಮೈತ್ರಿ ಕುರಿತ ಅಂತಿಮ ತೀರ್ಮಾನವನ್ನು ಬಿಜೆಪಿ ಹೈಕಮಾಂಡ್ ಕೈಗೊಳ್ಳಲಿದ್ದು, ಅದನ್ನು ರಾಜ್ಯ ಬಿಜೆಪಿ ಘಟಕ ಗೌರವಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡ ಅವರು ರಾಜ್ಯದ ದೊಡ್ಡ ನಾಯಕ. ಅವರು ಒಬ್ಬ ರಾಷ್ಟ್ರತಜ್ಞರು. ನನ್ನ ತಂದೆಯನ್ನು ನಾನು ಹೇಗೆ ಗೌರವಿಸುತ್ತೇನೋ ಅದೇ ರೀತಿ ದೇವೇಗೌಡ ಅವರನ್ನೂ ಗೌರವಿಸುತ್ತೇನೆ. ಇಬ್ಬರೂ ಜನಸಾಮಾನ್ಯರ ನಾಯಕರಾಗಿದ್ದಾರೆ. ಚುನಾವಣಾ ಮೈತ್ರಿ ವಿಚಾರದಲ್ಲಿ ಬಿಜೆಪಿ ರಾಜ್ಯ ಘಟಕವು ಕೇಂದ್ರ ನಾಯಕತ್ವ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿ ಕೇಂದ್ರ ನಾಯಕತ್ವವು ಜೆಡಿಎಸ್ ಜೊತೆ ಕೈಜೋಡಿಸಲು ತೀರ್ಮಾನಿಸಿದೆ. ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೇಗೌಡ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಮುಂದಾಗಿದ್ದಾರೆಂದು ತಿಳಿಸಿದರು.

ಇದೇ ವೇಳೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್–ಬಿಜೆಪಿ ಮೈತ್ರಿ ಇರುವುದಿಲ್ಲ ಎಂಬ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಲು ವಿಜಯೇಂದ್ರ ಅವರು ನಿರಾಕರಿಸಿದ್ದಾರೆ.

ಬಳಿಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಇತ್ತೀಚೆಗೆ ಮುಕ್ತಾಯಗೊಂಡ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶವೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರ ಅಸಮಾಧಾನಕ್ಕೆ ಸ್ಪಷ್ಟ ಸಂದೇಶವಾಗಿದೆ ಎಂದರು.

ಗ್ರಾಮ ಮಟ್ಟದಲ್ಲೇ ಜನರು ಕೋಪಗೊಂಡಿದ್ದು, ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸಲಿ ಅಥವಾ ಅಧಿಕಾರ ತ್ಯಜಿಸಲಿ ಎಂಬ ಸಂದೇಶ ನೀಡಿದ್ದಾರೆಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ದಿನಕ್ಕೊಂದು, ಕ್ಷಣಕ್ಕೊಂದು ಮಾತನಾಡಬೇಡಿ": ಇರಾನ್ ಯುದ್ಧದ ಬಗ್ಗೆ ಟ್ರಂಪ್​ಗೆ ಮ್ಯಾಕ್ರನ್ ಮಂಗಳಾರತಿ!

ಹಾರ್ಮುಜ್ ಜಲಸಂಧಿ ಕುರಿತು ಬ್ರಿಟನ್ ನೇತೃತ್ವದಲ್ಲಿ ಮಾತುಕತೆ; ಭಾರತ ಭಾಗಿ: ತೈಲ ಬಿಕ್ಕಟ್ಟಿಗೆ ಬ್ರೇಕ್?

IPL 2026: ಅಭಿಷೇಕ್, ಕ್ಲಾಸೆನ್ ಸ್ಫೋಟಕ ಬ್ಯಾಟಿಂಗ್; KKR ವಿರುದ್ಧ SRH ಭರ್ಜರಿ ಗೆಲುವು

ಪಶ್ಚಿಮ ಏಷ್ಯಾ ಯುದ್ಧದ ಪರಿಸ್ಥಿತಿ ನಿರ್ವಹಣೆ: ಮೋದಿ ಸರ್ಕಾರವನ್ನು ಹಾಡಿ ಹೊಗಳಿದ ಕಾಂಗ್ರೆಸ್ ಹಿರಿಯ ನಾಯಕ; ಪಕ್ಷಕ್ಕೆ ತೀವ್ರ ಮುಜುಗರ!

"ಸೇನಾ ದಾಳಿ ಮಾರ್ಗದಿಂದ...": ಇರಾನ್ ನ್ನು ಶಿಲಾಯುಗಕ್ಕೆ ಅಟ್ಟುವ ಟ್ರಂಪ್ ಬೆದರಿಕೆಗೆ ಚೀನಾ ತೀಕ್ಷ್ಣ ಪ್ರತಿಕ್ರಿಯೆ...

SCROLL FOR NEXT