ಡಿಸಿಎಂ ಡಿಕೆ.ಶಿವಕುಮಾರ್ 
ರಾಜಕೀಯ

ಕೇರಳಿಗರೊಂದಿಗೆ ಉತ್ತಮ ಬಾಂಧವ್ಯವಿದೆ, ಹುಳಿ ಹಿಂಡಬೇಡಿ: BJPಗೆ ಡಿಕೆ.ಶಿವಕುಮಾರ್

ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರು ನನ್ನ ಹೇಳಿಕೆಯನ್ನು ತಿರುಚುತ್ತಿದ್ದು, ಜನರ ದಾರಿ ತಪ್ಪಿಸುತ್ತಿದ್ದಾರೆ.

ಬೆಂಗಳೂರು: ಕೇರಳ ಸಿಎಂ, ಕೇರಳ ಸರಕಾರ ಕರ್ನಾಟಕ ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಹೇಳಿದ್ದೇನೆಯೇ ಹೊರತು, ಕೇರಳಿಗರ ಬಗ್ಗೆ ನಾನು ಮಾತನಾಡಿಲ್ಲ. ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರು ನನ್ನ ಹೇಳಿಕೆಯನ್ನು ತಿರುಚುತ್ತಿದ್ದು, ಜನರ ದಾರಿ ತಪ್ಪಿಸುತ್ತಿದ್ದಾರೆಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದ ಜನರು ಹಾಗೂ ನನ್ನ ನಡುವೆ ಉತ್ತಮ ಬಾಂಧವ್ಯವಿದೆ. ಕೇರಳ ಜನ ನನ್ನನ್ನು ಬಹಳ ಪ್ರೀತಿಸುತ್ತಾರೆ. ನನಗೂ ಅವರ ಮೇಲೆ ಗೌರವವಿದೆ. ಕೇರಳ ಚುನಾವಣೆ ಪ್ರಚಾರಕ್ಕೆ ನಾನು ಹೋಗುತ್ತೇನೆ. ಅಲ್ಲಿ ನಮ್ಮ ಸರ್ಕಾರ ಬರಲಿದೆ. ಹೀಗಾಗಿ ಬಿಜೆಪಿಯವರು ಗೊಂದಲ ಸೃಷ್ಟಿಸಲು ಮುಂದಾಗಿದ್ದಾರೆ. ಬಿಜೆಪಿಗರು ಈ ರೀತಿ ಹುಳಿ ಹಿಂಡುವ ಕೆಲಸ ಮಾಡಬಾರದು. ನಮ್ಮ ಪಕ್ಷದ ನಾಯಕರು ನಮಗೆ ಸಲಹೆ ನೀಡಿದ್ದು, ನಾವು ಅದನ್ನು ಸ್ವೀಕರಿಸುತ್ತೇವೆ ಎಂದು ಹೇಳಿದರು.

ಇಂದು ಕರ್ನಾಟಕ ನೀರಾವರಿ ನಿಗಮ ಹಾಗೂ ಕೃಷ್ಣ ಭಾಗ್ಯ ಜಲ ನಿಗಮದ ನಿರ್ದೇಶಕರ ಮಂಡಳಿ ಸಭೆ ಮಾಡಿದೆವು. ಈ ನಿಗಮಗಳಲ್ಲಿ 5 ಸಾವಿರ ಕೋಟಿ ರೂಪಾಯಿಯಷ್ಟು ಕಾಮಗಾರಿ ತೆಗೆದುಕೊಳ್ಳುತ್ತಿದ್ದೇವೆ. ಕೃಷ್ಣ ಭಾಗ್ಯ ಜಲ ನಿಗಮದಲ್ಲಿ ನಾವು ಯುಕೆಪಿ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಇದಕ್ಕೆ 70 ಸಾವಿರ ಕೋಟಿ ಹಣ ನೀಡಬೇಕಾಗಿದೆ. ಹೀಗಾಗಿ ಇತರೆ ಕೆಲಸಗಳನ್ನು ಮುಂದಿನ ಹಂತದಲ್ಲಿ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಮಾಹಿತಿ ನೀಡಿದರು.

ಮುಂದಿನ ವರ್ಷ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯಲಿದ್ದು, ಗ್ಯಾರಂಟಿ ಯೋಜನೆಗಳು ಮುಂದುವರಿಯಲಿದೆ. ಜನರಿಗೆ ಬಲ ತುಂಬಲಿವೆ ಎಂದು ತಿಳಿಸಿದರು.

ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗೆ ಉತ್ತರಿಸಿ, ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ಉತ್ತಮ ಆಡಳಿತ ಮುಂದುವರಿಯುತ್ತದೆ. ಈ ಆಡಳಿತ ಮುಂದಿನ ಏಳೂವರೆ ವರ್ಷಗಳ ಕಾಲ ಮುಂದುವರಿಯುತ್ತದೆ. ಇದರ ಬಗ್ಗೆ 2026 ರಲ್ಲಿ ಮಾತನಾಡುತ್ತೇನೆಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜು: ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಬಿಗಿ ಬಂದೋಬಸ್ತ್, ಫ್ಲೈಓವರ್'ಗಳು ಬಂದ್

ಮೇ ತಿಂಗಳ ಭಾರತ-ಪಾಕಿಸ್ತಾನ ಸಂಘರ್ಷ ವೇಳೆ ಮಧ್ಯಸ್ಥಿಕೆ ವಹಿಸಿದ್ದು ನಾವೇ: ಚೀನಾ

ಭಾರತೀಯ ರೈಲ್ವೆ ಇತಿಹಾಸದಲ್ಲಿ ಮಹತ್ತರ ಸಾಧನೆ: ಗಂಟೆಗೆ 180 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್ ; ವಿಡಿಯೋ ಹಂಚಿಕೊಂಡ ಅಶ್ವಿನಿ ವೈಷ್ಣವ್

New Year ಗೆ ಆನ್ ಲೈನ್ ಫುಡ್ ಆರ್ಡರ್ ಗೆ ಸಮಸ್ಯೆ: ಒಕ್ಕೂಟಗಳಿಂದ ಇಂದು ಮೆಗಾ ಪ್ರತಿಭಟನೆ, 1.5 ಲಕ್ಷ ಕಾರ್ಮಿಕರು ಭಾಗಿ

ಮಠಾಧೀಶರ ತೀವ್ರ ಆಕ್ಷೇಪ: ಮಥುರಾದಲ್ಲಿ ಆಯೋಜಿಸಿದ್ದ ಸನ್ನಿ ಲಿಯೋನ್ ಕಾರ್ಯಕ್ರಮ ರದ್ದು!

SCROLL FOR NEXT