ಶಾಸಕ ಬಿಆರ್ ಪಾಟೀಲ್ 
ರಾಜಕೀಯ

ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಬಿಆರ್ ಪಾಟೀಲ್ ರಾಜೀನಾಮೆ

ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ನಾನು ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಈಗಾಗಲೇ ತಲುಪಿಸಿದ್ದೇನೆ.

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಹಾಗೂ ಅಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್​ ಅವರು ಶನಿವಾರ ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಬಿಆರ್ ಪಾಟೀಲ್ ಅವರ ದಿಢೀರ್ ರಾಜೀನಾಮೆ ಕಾಂಗ್ರೆಸ್​​ನಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ನಾನು ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಈಗಾಗಲೇ ತಲುಪಿಸಿದ್ದೇನೆ ಎಂದು ಬಿಆರ್ ಪಾಟೀಲ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಆದರೆ ರಾಜೀನಾಮೆಗೆ ಕಾರಣ ಏನು ಎಂಬ ಪ್ರಶ್ನೆಗೆ, ನಾನಾಗಿಯೇ ತನ್ನ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ. ಆದರೆ ಬಿಆರ್ ಪಾಟೀಲ್ ಅವರ ದಿಢೀರ್ ನಿರ್ಧಾರ ಅಚ್ಚರಿಗೆ ಕಾರಣವಾಗಿದೆ. ಏಕಾಏಕಿ ರಾಜೀನಾಮೆ ಏಕೆ ನೀಡಿದ್ದಾರೆ ಎನ್ನುವುದು ಚರ್ಚೆಗೆ ಗ್ರಾಸವಾಗಿದೆ.

ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ತಮಗೆ ಯಾವುದೇ ಸ್ಥಾನಮಾನ ನೀಡಿಲ್ಲ ಎಂದು ಕೆಲ ಹಿರಿಯ ಶಾಸಕರು ಅಸಮಾಧಾನಗೊಂಡಿದ್ದರು. ಆರ್​​ವಿ ದೇಶಪಾಂಡೆ, ಬಸವರಾಜ್ ರಾಯರೆಡ್ಡಿ ಹಾಗೂ ಬಿಆರ್ ಪಾಟೀಲ್​ ಸಹ ಬೇಸರಗೊಂಡಿದ್ದರು. ಹೀಗಾಗಿ ಬಂಡಾಯ ಎದ್ದಿದ್ದ ಶಾಸಕರಿಗೆ ವಿಶೇಷ ಹುದ್ದೆಗಳ ಸ್ಥಾನ ಮಾನ ನೀಡಲಾಗಿತ್ತು. ಬಸವರಾಜ ರಾಯರೆಡ್ಡಿ ಅವರಿಗೆ ಸಿಎಂ ಆರ್ಥಿಕ ಸಲಹೆಗಾರ ಹುದ್ದೆ, ಬಿಆರ್‌ ಪಾಟೀಲ್‌ ಅವರನ್ನು ಸಿಎಂ ರಾಜಕೀಯ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿತ್ತು. ಹಾಗೇ ಆರ್‌ವಿ ದೇಶಪಾಂಡೆ ಅವರನ್ನು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು, ಆದರೆ, ಇದೀಗ ಬಿಆರ್ ಪಾಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ