ವಿಜಯೇಂದ್ರ, ಯತ್ನಾಳ್ ಸಾಂದರ್ಭಿಕ ಚಿತ್ರ 
ರಾಜಕೀಯ

ಬಿಜೆಪಿ ಆಂತರಿಕ ಕಿತ್ತಾಟ: ವಿಜಯೇಂದ್ರ ವಿರೋಧಿ ಬಣ ದೆಹಲಿ ಭೇಟಿ; ವರಿಷ್ಠರೊಂದಿಗೆ ಮಾತುಕತೆ!

ಶಾಸಕ ರಮೇಶ್ ಜಾರಕಿಹೊಳಿ ಮತ್ತು ಸಂಸದ ಕೆ ಸುಧಾಕರ್, ಮಾಜಿ ಶಾಸಕರಾದ ಕುಮಾರ್ ಬಂಗಾರಪ್ಪ ಮತ್ತು ಅರವಿಂದ ಲಿಂಬಾವಳಿ ಅವರನ್ನೊಳಗೊಂಡ ತಂಡ ಸೋಮವಾರ ನವದೆಹಲಿಗೆ ತಲುಪಲಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಕಿತ್ತಾಟಕ್ಕೆ ಬ್ರೇಕ್ ಬೀಳುವ ಸಾಧ್ಯತೆ ಕಾಣಿಸುತ್ತಿಲ್ಲ. ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕಿತ್ತುಹಾಕಬೇಕು ಎಂದು ಮತ್ತೊಂದು ಬಣ ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ, ತಮ್ಮ ಬೇಡಿಕೆಗಳನ್ನು ಸಲ್ಲಿಸಲು ಸಜ್ಜಾಗಿದೆ ಎಂದು ಮೂಲಗಳು ತಿಳಿಸಿವೆ.

ಶಾಸಕ ರಮೇಶ್ ಜಾರಕಿಹೊಳಿ ಮತ್ತು ಸಂಸದ ಕೆ ಸುಧಾಕರ್, ಮಾಜಿ ಶಾಸಕರಾದ ಕುಮಾರ್ ಬಂಗಾರಪ್ಪ ಮತ್ತು ಅರವಿಂದ ಲಿಂಬಾವಳಿ ಅವರನ್ನೊಳಗೊಂಡ ತಂಡ ಸೋಮವಾರ ರಾಷ್ಟ್ರ ರಾಜಧಾನಿ ತಲುಪಲಿದೆ ಎಂದು ತಿಳಿದುಬಂದಿದೆ.

ನಮ್ಮ ವಿಷಯ ಈಗ ದೆಹಲಿ ತಲುಪಿದೆ. ಅಲ್ಲಿ ತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ತಿಳಿಸುವುದಾಗಿ ಸುಧಾಕರ್ ಸುದ್ದಿಗಾರರಿಗೆ ತಿಳಿಸಿದರು. ಜಾರಕಿಹೊಳಿ ಮತ್ತು ಬಂಗಾರಪ್ಪ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ತಮ್ಮ ಕಾರ್ಯಾಚರಣೆಯ ಯಶಸ್ಸಿಗೆ ಆಶೀರ್ವಾದ ಪಡೆದರು ಎಂದು ಮೂಲಗಳು ತಿಳಿಸಿವೆ.

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆರಂಭಿಸಿರುವ ವಿಜಯೇಂದ್ರ ವಿರುದ್ಧದ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಸೇರಿದಂತೆ ಹಲವು ಮುಖಂಡರ ಬೆಂಬಲ ವ್ಯಕ್ತವಾಗಿದೆ.

ಹಲವು ಹಿರಿಯ ನಾಯಕರನ್ನು ಬದಿಗೊತ್ತಲು ಯತ್ನಿಸಿದ ಆರೋಪದ ಮೇಲೆ ವಿಜಯೇಂದ್ರ ವಿರುದ್ಧ ಬಣ ಅಸಮಾಧಾನಗೊಂಡಿದೆ.

ಯತ್ನಾಳ್ ಅವರು ವಿಜಯೇಂದ್ರ ಮತ್ತು ಅವರ ತಂದೆ - ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಹೋರಾಡುತ್ತಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಪಕ್ಷದ ನಿಲುವಿಗೆ ವಿರುದ್ಧವಾಗಿ ಕರ್ನಾಟಕದ ರಾಜ್ಯ ಘಟಕದಲ್ಲಿ ವಂಶಾಡಳಿತ ಹೆಚ್ಚಾಗುತ್ತಿರುವುದು ತಮ್ಮಅಸಮಾಧಾನಕ್ಕೆ ಕಾರಣ ಎಂದು ಅವರು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ