ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ online desk
ರಾಜಕೀಯ

ದೆಹಲಿ ಜನತೆ ತುಷ್ಟೀಕರಣ ರಾಜಕೀಯವನ್ನು ತಿರಸ್ಕರಿಸಿದೆ: ಹೆಚ್‌.ಡಿ ಕುಮಾರಸ್ವಾಮಿ

ಈ ಜನಾದೇಶವು ಬಲಿಷ್ಠ ನಾಯಕತ್ವ, ಆರ್ಥಿಕ ಬೆಳವಣಿಗೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಿಕ್ಕಿರುವ ಅಭೂತಪೂರ್ವ ಬೆಂಬಲ ಎಂದು ನಾನು ಭಾವಿಸುತ್ತೇನೆ.

ಬೆಂಗಳೂರು: ರಾಜಧಾನಿ ದೆಹಲಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭೂತಪೂರ್ವ ಗೆಲುವು ತುಷ್ಟೀಕರಣ ರಾಜಕೀಯವನ್ನು ಸಂಪೂರ್ಣವಾಗಿ ತಿರಸ್ಕಾರ ಮಾಡಿರುವುದಕ್ಕೆ ಸ್ಪಷ್ಟ ಉದಾಹರಣೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಹೇಳಿದ್ದಾರೆ.

ದೆಹಲಿ ವಿಧಾನಸಭಾ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಬಹುದೊಡ್ಡ ಫಲಿತಾಂಶಕ್ಕೆ ಕಾರಣರಾದ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಅಭಿನಂದಿಸಿದ್ದಾರೆ.

ಪ್ರಧಾನಿಗಳ ಮಹತ್ವಾಕಾಂಕ್ಷೆಯ ವಿಕಸಿತ ಭಾರತ, ಆತ್ಮನಿರ್ಭರ ಭಾರತ ಮತ್ತು ಅಭಿವೃದ್ದಿಪೂರಕ ಆಡಳಿತಕ್ಕೆ ಮನ್ನಣೆ ನೀಡಿ, ತುಷ್ಟೀಕರಣ ರಾಜಕೀಯವನ್ನು ಸ್ಪಷ್ಟವಾಗಿ ತಿರಸ್ಕರಿಸಿರುವುದಕ್ಕೆ ಈ ಫಲಿತಾಂಶ ಅತ್ಯುತ್ತಮ ಉದಾಹರಣೆ.

ಈ ಜನಾದೇಶವು ಬಲಿಷ್ಠ ನಾಯಕತ್ವ, ಆರ್ಥಿಕ ಬೆಳವಣಿಗೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಿಕ್ಕಿರುವ ಅಭೂತಪೂರ್ವ ಬೆಂಬಲ ಎಂದು ನಾನು ಭಾವಿಸುತ್ತೇನೆ. ನಮ್ಮ ಮಿತ್ರಪಕ್ಷ ಬಿಜೆಪಿ ಗೆಲುವಿಗೆ ಶ್ರಮಿಸಿದ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ನನ್ನ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್