ಮಾಜಿ ಸಚಿವ ಶ್ರೀರಾಮುಲು 
ರಾಜಕೀಯ

BJP ಬಣ ಬಡಿದಾಟ: ಒಡೆದ ಮನಸ್ಸುಗಳ ಒಗ್ಗೂಡಿಸಲು ಶೀಘ್ರದಲ್ಲೇ ಶ್ರೀರಾಮುಲು ರಾಜ್ಯ ಪ್ರವಾಸ

ರಾಜ್ಯದಲ್ಲಿ ಬಿಜೆಪಿಯ ಎಲ್ಲಾ ನಾಯಕರೂ ಒಂದೇ ವೇದಿಕೆಯಲ್ಲಿ ಬರಬೇಕು. ಹೈಕಮಾಂಡ್‌ ಎಲ್ಲರನ್ನೂ ಒಟ್ಟಿಗೆ ತರಬೇಕು. ಬಿಜೆಪಿಯ ಎಲ್ಲಾ ಒಡೆದ ಮನಸ್ಸುಗಳನ್ನು ಒಟ್ಟುಗೂಡಿಸುವ ಸದುದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ.

ದಾವಣಗೆರೆ: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕಕ್ಕೇರಿದ್ದು, ಈ ನಡುವಲ್ಲೇ ನಾಯಕರ ಒಗ್ಗೂಡಿಸಲು ರಾಜ್ಯ ಪ್ರವಾಸ ಮಾಡುವುದಾಗಿ ಬಿಜೆಪಿ ನಾಯಕ ಬಿ.ಶ್ರೀರಾಮುಲು ಅವರು ಭಾನುವಾರ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಮಾತನಾಡಿದ ಶ್ರೀರಾಮುಲು ಅವರು, ರಾಜ್ಯದಲ್ಲಿ ಬಿಜೆಪಿಯ ಎಲ್ಲಾ ನಾಯಕರೂ ಒಂದೇ ವೇದಿಕೆಯಲ್ಲಿ ಬರಬೇಕು. ಹೈಕಮಾಂಡ್‌ ಎಲ್ಲರನ್ನೂ ಒಟ್ಟಿಗೆ ತರಬೇಕು. ಬಿಜೆಪಿಯ ಎಲ್ಲಾ ಒಡೆದ ಮನಸ್ಸುಗಳನ್ನು ಒಟ್ಟುಗೂಡಿಸುವ ಸದುದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆಂದು ಹೇಳಿದರು.

ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಹಾಗೂ ಪಕ್ಷದ ಒಡೆದ ಮನಸುಗಳನ್ನು ಒಂದುಗೂಡಿಸಲು ರಾಜ್ಯದಾದ್ಯಂತ ಯಾತ್ರೆ ಹಮ್ಮಿಕೊಳ್ಳಲಾಗುವುದು. ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಯಾತ್ರೆ ಮಾಡುವ ಉದ್ದೇಶವಿದ್ದು, ಈ ಕುರಿತು ಪಕ್ಷದ ಹಿರಿಯ ನಾಯಕರು ಮತ್ತು ಹೈಕಮಾಂಡ್‌ ಜೊತೆ ಚರ್ಚೆ ನಡೆಸಿದ್ದೇನೆಂದು ತಿಳಿಸಿದರು.

ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಳ್ಳುವ ವಿಚಾರದಲ್ಲಿ ಯಾವುದೇ ವೈಯಕ್ತಿಕ ಸ್ವಾರ್ಥ ಇಲ್ಲ. ಬಿಜೆಪಿ ನಾಯಕರು ಹಾಗೂ ಸಂಘ ಪರಿವಾರದ ಎಲ್ಲರೂ ಒಗ್ಗೂಡಬೇಕು ಎಂಬುದಷ್ಟೇ ನನ್ನ ಆಶಯ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ತನ್ನನ್ನು ಸರ್ವೋಚ್ಚ ನಾಯಕನನ್ನಾಗಿ ಮಾಡಲು ಇರಾನ್ ಬಯಸಿದೆ ಆದರೆ, ನಾನು ತಿರಸ್ಕರಿಸಿದೆ': ಡೊನಾಲ್ಡ್ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ: ಭಾರತ ಸೇರಿ 5 ದೇಶಗಳಿಗೆ Hormuz ಮೂಲಕ ಸುರಕ್ಷಿತ ಸಂಚಾರಕ್ಕೆ Iran ಅನುಮತಿ!

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ; 7 ಗಂಟೆ ಹಾರಾಟದ ನಂತರ ದೆಹಲಿಗೆ ವಾಪಸ್!

ಇರಾನಿಯನ್ನರು ಸಾಯುತ್ತಿದ್ದಾಗ ನೀವೆಲ್ಲಿದ್ರಿ..: 'ಶಾಂತಿ-ಸಂಧಾನ' ವ್ಯಂಗ್ಯ ಮಾಡಿದ ನಟ Boman Irani ಚಳಿಬಿಡಿಸಿದ ನಟಿ Mandana Karimi!

SCROLL FOR NEXT