ಬಿಕೆ.ಹರಿಪ್ರಸಾದ್ 
ರಾಜಕೀಯ

ಗ್ಯಾರಂಟಿ ಯೋಜನೆಗಳು ಸಾಕು, ಪ್ರಣಾಳಿಕೆಯತ್ತ ಗಮನ ಹರಿಸಿ: ಚರ್ಚೆಗೆ ಕಾರಣವಾಯ್ತು ಬಿಕೆ.ಹರಿಪ್ರಸಾದ್ ಹೇಳಿಕೆ

ದೆಹಲಿ ಚುನಾವಣೆ ಫಲಿತಾಂಶ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಕರ್ನಾಟಕದಲ್ಲಿ ಗ್ಯಾರಂಟಿಯಲ್ಲಿ ಮುಳುಗಿರುವುದು ಸಾಕು. ಗ್ಯಾರಂಟಿ ಒಂದು ಕಡೆ ಇರಲಿ, ಅದು ತಪ್ಪಲ್ಲ. ಆದರೆ, ಅದರಲ್ಲೇ ಮುಳುಗಿದರೆ ಆಗುವುದಿಲ್ಲ. ಚುನಾವಣೆ ವೇಳೆ ಪ್ರಕಟಿಸಿದ ಪ್ರಣಾಳಿಕೆಯ ಭರವಸೆಗಳನ್ನೂ ಜಾರಿಗೆ ತರಬೇಕು.

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ವಿರುದ್ಧ ಸ್ವಪಕ್ಷೀಯರೇ ಅಸಮಾಧಾನಗಳನ್ನು ಹೊರಹಾಕುತ್ತಿರುವುದು ಮುಂದುವರೆದಿದೆ. ಮೇಲ್ಮನೆ ಸದಸ್ಯರೂ ಆಗಿರುವ ಪಕ್ಷದ ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್‌ ಕೂಡ ಗ್ಯಾರಂಟಿ ಯೋಜನೆ ಮೇಲೆ ಮಾತ್ರ ಗಮನಹರಿಸುವುದನ್ನು ಬಿಟ್ಟು, ಪ್ರಣಾಳಿಕೆಯ ಭರವಸೆಗಳನ್ನೂ ಜಾರಿಗೆ ತರುವಂತೆ ಒತ್ತಾಯಿಸಿದ್ದಾರೆ.

ದೆಹಲಿ ಚುನಾವಣೆ ಫಲಿತಾಂಶ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಕರ್ನಾಟಕದಲ್ಲಿ ಗ್ಯಾರಂಟಿಯಲ್ಲಿ ಮುಳುಗಿರುವುದು ಸಾಕು. ಗ್ಯಾರಂಟಿ ಒಂದು ಕಡೆ ಇರಲಿ, ಅದು ತಪ್ಪಲ್ಲ. ಆದರೆ, ಅದರಲ್ಲೇ ಮುಳುಗಿದರೆ ಆಗುವುದಿಲ್ಲ. ಚುನಾವಣೆ ವೇಳೆ ಪ್ರಕಟಿಸಿದ ಪ್ರಣಾಳಿಕೆಯ ಭರವಸೆಗಳನ್ನೂ ಜಾರಿಗೆ ತರಬೇಕೆಂದು ಎಂದು ಸಲಹೆ ನೀಡಿದರು.

ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆ ಹಿಂಪಡೆದಿದೆ. ಆದರೆ, ನಾವಿನ್ನೂ ಹಿಂಪಡೆದಿಲ್ಲ. ಈ ಕುರಿತು ಕೂಡಲೇ ಆ ಕೆಲಸ ಮಾಡಬೇಕು. ಮತಾಂತರ ನಿಷೇಧ ಕಾಯ್ದೆಯನ್ನು ಬಿಜೆಪಿ ಕಾನೂನುಬಾಹಿರವಾಗಿ ಮಾಡಿತ್ತು. ಅದನ್ನು ನಾವು ಹಿಂಪಡೆಯಬೇಕು. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸಂಘ-ಪರಿವಾರದವರೇ ಇದ್ದಾರೆ. ಅದನ್ನು ಬದಲಾಯಿಸಬೇಕು. ಜಾತಿ ಗಣತಿ ವರದಿ ಜಾರಿ ಮಾಡಬೇಕು.

ಇವುಗಳನ್ನು ಅನುಷ್ಠಾನಕ್ಕೆ ತರದೇ ಇದ್ದರೆ ಮುಂದೆ ನಮಗೆ ಕಷ್ಟ ಆಗಲಿದೆ. ನಮ್ಮ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳು ಇವು. ಕೃಷಿ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿ ಬಗ್ಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳನ್ನು ಆದಷ್ಟು ಬೇಗ ಈಡೇರಿಸಿದರೆ ಮಾತ್ರ ಪಕ್ಷಕ್ಕೆ ಒಳ್ಳೆಯದಾಗಲು ಸಾಧ್ಯ ಎಂದು ಎಚ್ಚರಿಸಿದರು. ಹರಿಪ್ರಸಾದ್ ಅವರ ಈ ಹೇಳಿಕೆ ಇದೀಗ ಗ್ಯಾರಂಟಿ ಯೋಜನೆಗಳ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಎಡೆಮಾಡಿಕೊಟ್ಟಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT