ಮಲ್ಲಿಕಾರ್ಜುನ ಖರ್ಗೆ online desk
ರಾಜಕೀಯ

ಶೀಘ್ರದಲ್ಲೇ ಕೆಲವು ರಾಜ್ಯಗಳ ಅಧ್ಯಕ್ಷರ ಬದಲಾವಣೆ; ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಖರ್ಗೆ ಸುಳಿವು

ಇಂದು ಕಲಬುರಗಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಶೀಘ್ರದಲ್ಲೇ ಕೆಲವು ರಾಜ್ಯಗಳಲ್ಲಿ ಅಧ್ಯಕ್ಷರ ಬದಲಾವಣೆ ಆಗುತ್ತದೆ.

ಕಲಬುರಗಿ: ಈಗಾಗಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ರಾಜ್ಯ ಕಾಂಗ್ರೆಸ್‌ ನಾಯಕರು ನಡುವೆ ಪೈಪೋಟಿ ಆರಂಭವಾಗಿದ್ದು, ಈ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಮಹತ್ವದ ಸುಳಿವು ನೀಡಿದ್ದಾರೆ.

ಇಂದು ಕಲಬುರಗಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಶೀಘ್ರದಲ್ಲೇ ಕೆಲವು ರಾಜ್ಯಗಳಲ್ಲಿ ಅಧ್ಯಕ್ಷರ ಬದಲಾವಣೆ ಆಗುತ್ತದೆ. ಒಡಿಶಾದಲ್ಲಿ ಅಧ್ಯಕ್ಷರ ಬದಲಾವಣೆ ಮಾಡಿ ಬಂದಿದ್ದೇನೆ. ಅಲ್ಲಿ ಹಿಂದುಳಿದ ವರ್ಗದವರು ಪಿಸಿಸಿ ಅಧ್ಯಕ್ಷರಾಗಿದ್ದಾರೆ. ಬೇರೆ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಅಧ್ಯಕ್ಷರ ಬದಲಾವಣೆ ಆಗುತ್ತದೆ ಎಂದರು.

ಇದೇ ವೇಳೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ, ಈ ಬಗ್ಗೆ ನಿರ್ದಿಷ್ಟವಾಗಿ ನಾನು ಹೇಳಲು ಸಾಧ್ಯವಾಗುವುದಿಲ್ಲ. ಬಾಕಿ ಉಳಿದ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಬದಲಾವಣೆ ಆಗುತ್ತದೆ. ಇನ್ನೆರಡು ದಿನಗಳಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಇನ್ನು ಎಂಟು ದಿನಗಳಲ್ಲಿ ನಮ್ಮಿಂದಲೇ ಪ್ರಕಟಣೆ ಹೊರ ಬೀಳಲಿದೆ ಎಂದು ಸ್ಪಷ್ಟಪಡಿಸಿದರು.

ಇನ್ನು ಸಚಿವರಾದ ಜಿ ಪರಮೇಶ್ವರ, ಸತೀಶ್ ಜಾರಕಿಹೊಳಿ ಭೇಟಿ ಬಗ್ಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಭೇಟಿ ದೊಡ್ಡ ಮಾತಾ? ಎಂದು ಪ್ರಶ್ನೆ ಮಾಡಿದರು. ನಾನು ಎಐಸಿಸಿ ಅಧ್ಯಕ್ಷ, ಎಲ್ಲರೂ ಬಂದು ಭೇಟಿ ಮಾಡುತ್ತಾರೆ ಇದು ದೊಡ್ಡ ಮಾತಾ? ನಮ್ಮ‌ ರಾಜ್ಯದವರಿಗೆ ಬೇಗ ಅಪಾಯಿಂಟಮೆಂಟ್ ಸಿಗುತ್ತೆ, ಬಂದವರಿಗೆ ಬೇಡ ಅನ್ನಲು ಆಗುತ್ತಾ? ಪರಮೇಶ್ವರ್ ಬರ್ತಾರೆ, ಡಿಕೆ ಶಿವಕುಮಾರ ಬರ್ತಾರೆ, ಸತೀಶ್ ಜಾರಕಿಹೊಳಿ ಬರ್ತಾರೆ, ಸಿದ್ದರಾಮಯ್ಯ ಫೋನ್ ಮಾಡ್ತಾರೆ ಇದರಲ್ಲಿ ವಿಶೇಷ ಏನಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT