ಡಿಕೆ ಶಿವಕುಮಾರ್ 
ರಾಜಕೀಯ

ಪ್ರಯತ್ನ ವಿಫಲವಾಗಬಹುದು, ಪ್ರಾರ್ಥನೆಗೆ ಗೆಲುವು ನಿಶ್ಚಿತ: ಡಿಸಿಎಂ ಡಿಕೆ ಶಿವಕುಮಾರ್ ಮಾರ್ಮಿಕ ಟ್ವೀಟ್!

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಮುಂದಿಟ್ಟು ಉದ್ದೇಶಪೂರ್ವಕವಾಗಿಯೇ ಡಿಕೆಶಿ ಪ್ರಭಾವವನ್ನು ಕುಗ್ಗಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಕಾಂಗ್ರೆಸ್ ನಲ್ಲಿ ಅಧ್ಯಕ್ಷರ ಬದಲಾವಣೆ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಅಲ್ಲದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು, 'ಕೆಲವು ರಾಜ್ಯಗಳ ಪ್ರದೇಶ ಕಾಂಗ್ರೆಸ್‌ ಸಮಿತಿಗಳ (ಪಿಸಿಸಿ) ಅಧ್ಯಕ್ಷರನ್ನು ಸದ್ಯವೇ ಬದಲಾಯಿಸಲಾಗುವುದು ಎಂದು ಹೇಳಿರುವುದು ಕಾಂಗ್ರೆಸ್‌ ವಲಯದಲ್ಲಿ ತೀವ್ರ ಚರ್ಚೆಗೂ ಕಾರಣವಾಗಿದೆ.

ಕಲಬುರಗಿಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಶೀಘ್ರದಲ್ಲೇ ಕೆಲವು ರಾಜ್ಯಗಳಲ್ಲಿ ಅಧ್ಯಕ್ಷರ ಬದಲಾವಣೆ ಆಗುತ್ತದೆ. ಒಡಿಶಾದಲ್ಲಿ ಅಧ್ಯಕ್ಷರ ಬದಲಾವಣೆ ಮಾಡಿ ಬಂದಿದ್ದೇನೆ. ಅಲ್ಲಿ ಹಿಂದುಳಿದ ವರ್ಗದವರು ಪಿಸಿಸಿ ಅಧ್ಯಕ್ಷರಾಗಿದ್ದಾರೆ. ಬೇರೆ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಅಧ್ಯಕ್ಷರ ಬದಲಾವಣೆ ಆಗುತ್ತದೆ ಎಂದು ಹೇಳಿದ್ದರು. ಇನ್ನು ರಾಜ್ಯದಲ್ಲೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವಂತೆ ದಲಿತ ಸಚಿವರು, ಕೆಲವು ಶಾಸಕರು ಒತ್ತಡ ಹೇರುತ್ತಿರುವುದು ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕುತ್ತು ಎಂದು ಹೇಳಲಾಗುತ್ತಿದೆ.

ಇನ್ನು ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಬೆನ್ನಲ್ಲೇ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದರು. ಪ್ರಯತ್ನ ವಿಫಲವಾಗಬಹುದು, ಪ್ರಾರ್ಥನೆಗೆ ಗೆಲುವು ನಿಶ್ಚಿತ ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಕರ್ನಾಟಕ ಚುನಾವಣೆ ಗೆಲುವಿನ ನಂತರ ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕರ ಮಧ್ಯೆ ಸಿಎಂ ಹುದ್ದೆ ಶೇರಿಂಗ್ ಕುರಿತು ಚರ್ಚೆಗಳು ನಡೆದಿವೆ ಎನ್ನಲಾಗಿದೆ. ಹೀಗಾಗಿ ಮುಖ್ಯಮಂತ್ರಿ ಗಾದಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಲೇ ಬರುತ್ತಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಮುಂದಿಟ್ಟು ಉದ್ದೇಶಪೂರ್ವಕವಾಗಿಯೇ ಡಿಕೆಶಿ ಪ್ರಭಾವವನ್ನು ಕುಗ್ಗಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಡಿಕೆ ಶಿವಕುಮಾರ್ ಟ್ವೀಟ್ ಗೆ ಹಲವರು ಪ್ರತಿಕ್ರಿಯಿಸಿದ್ದಾರೆ. ನೀವು ಬಿಜೆಪಿಗೆ ಬಂದು ಬಿಡಿ ಸರ್ ಅಭಿವೃದ್ಧಿ ಆದರೂ ಮಾಡಬೋದು. ಕಾಂಗ್ರೆಸ್ ನಲ್ಲಿ ಇದ್ದರೆ ಏನೂ ಪ್ರಯೋಜನವಿಲ್ಲ. ಕಾಂಗ್ರೆಸ್ ನಲ್ಲಿ ಗೆದ್ದರೂ ಸೋತಂತೆ. ಕಾಂಗ್ರೆಸ್ ಸಿದ್ದಾಂತವಿಲ್ಲದ ಪಕ್ಷ ಎಂದು ಕಮೆಂಟ್ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT