ಗೃಹ ಸಚಿವ ಡಾ ಜಿ ಪರಮೇಶ್ವರ 
ರಾಜಕೀಯ

ಸಿದ್ದರಾಮಯ್ಯ ದೀರ್ಘಾವಧಿ ಮುಖ್ಯಮಂತ್ರಿ ಆಗಲಿ, ದಾಖಲೆ ಮಾಡಲಿ ಎಂದು ಹಾರೈಸುತ್ತೇನೆ: ಜಿ ಪರಮೇಶ್ವರ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಹೈಕಮಾಂಡ್ ತೀರ್ಮಾನವೇ ಅಂತಿಮ. ಅದನ್ನು ನಾವು ಒಪ್ಪಿಕೊಳ್ಳುತ್ತೇವೆ.

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಬಗ್ಗೆ ಆಗ್ಗಾಗ್ಗೆ ಚರ್ಚೆಯಾಗುತ್ತಲೇ ಇರುತ್ತದೆ. ಮುಖ್ಯಮಂತ್ರಿ ಹುದ್ದೆ ಮೇಲೆ ಹಲವು ನಾಯಕರು ಕಣ್ಣಿಟ್ಟಿದ್ದು, ಸದ್ಯ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಆಗಿರುತ್ತಾರೆ ಎಂದು ಹೇಳಲಾಗುತ್ತಿದೆ. ಈ ಬೆನ್ನಲ್ಲೇ ಗೃಹ ಸಚಿವ ಜಿ ಪರಮೇಶ್ವರ ಅವರು ಸಿದ್ದರಾಮಯ್ಯ ಅವರೇ ದೀರ್ಘಾವಧಿ ಮುಖ್ಯಮಂತ್ರಿ ಆಗಿರಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಶಾಸಕರು ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದ್ದರು. ಆಗ ಹೈಕಮಾಂಡ್ ಸಿದ್ದರಾಮಯ್ಯ ಅವರು ಎರಡೂವರೆ ವರ್ಷ ಸಿಎಂ ಆಗಿರುತ್ತಾರೆ ಎಂದೇನು ನಮಗೆ ಹೇಳಿರಲಿಲ್ಲ. ಹೀಗಾಗಿ ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ ಎಂದೇ ಭಾವಿಸಿದ್ದೇವೆ. ಸಿದ್ದರಾಮಯ್ಯ ಅವರು ದೀರ್ಘಾವಧಿ ಮುಖ್ಯಮಂತ್ರಿ ಆಗಲಿ, ದಾಖಲೆ ಮಾಡಲಿ ಎಂದು ನಾನೂ ಹಾರೈಸುತ್ತೇನೆ. ಅವರು ಐದು ವರ್ಷ ಅಧಿಕಾರದಲ್ಲಿದ್ದರೆ ಸಹಜವಾಗಿಯೇ ದಾಖಲೆ ಆಗಲಿದೆ' ಎಂದು ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಹೈಕಮಾಂಡ್ ತೀರ್ಮಾನವೇ ಅಂತಿಮ. ಅದನ್ನು ನಾವು ಒಪ್ಪಿಕೊಳ್ಳುತ್ತೇವೆ. ಕೆಲವು ರಾಜ್ಯಗಳಲ್ಲಿ ನಮ್ಮ ಪಕ್ಷ ಸೋತಿದೆ. ಹೀಗಾಗಿ, ಪಕ್ಷ ಸಂಘಟನೆ ದೃಷ್ಟಿಯಿಂದ ಖರ್ಗೆಯವರು ಹಾಗೆ ಹೇಳಿರಬಹುದು. ಹೈಕಮಾಂಡ್ ತೀರ್ಮಾನ ಏನಿರುತ್ತದೆಯೋ ಗೊತ್ತಿಲ್ಲ ಎಂದು ತಿಳಿಸಿದರು.

'ಮೈಕ್ರೊ ಫೈನಾನ್ಸ್ ಸುಗ್ರೀವಾಜ್ಞೆಯನ್ನು ನಾವು ಮೊದಲು ಕಳುಹಿಸಿದಾಗ ರಾಜ್ಯಪಾಲರು ಕೆಲವು ಪ್ರಶ್ನೆಗಳನ್ನು ಕೇಳಿದ್ದರು. ಅವುಗಳಿಗೆ ಸರ್ಕಾರ ಉತ್ತರಿಸಿತ್ತು. ಅದನ್ನೆಲ್ಲ ಪರಿಶೀಲಿಸಿ ರಾಜ್ಯಪಾಲರು ಒಪ್ಪಿಗೆ ಕೊಟ್ಟಿದ್ದಾರೆ. ತಕ್ಷಣ ಕಾನೂನು ಜಾರಿಗೆ ಬಂದಿದೆ. ಜನರಿಗೆ ಕಿರುಕುಳ ಕೊಡುವ, ಒತ್ತಾಯ ಮಾಡುವ, ಮನೆಗೆ ಬೀಗ ಹಾಕುವ ಪ್ರಕರಣಗಳು ನಡೆಯುತ್ತಿವೆ. ಇದಕ್ಕೆಲ್ಲ ಕಡಿವಾಣ ಹಾಕಲು ಸುಗ್ರೀವಾಜ್ಞೆ ತಂದಿದ್ದೇವೆ. ರಾಜ್ಯಪಾಲರು ಕೆಲವು ಸೂಚನೆಗಳನ್ನು ಕೊಟ್ಟಿದ್ದಾರೆ' ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT