ಬಸವರಾಜ ಬೊಮ್ಮಾಯಿ 
ರಾಜಕೀಯ

ನಮ್ಮ ಮೆಟ್ರೋ ದರ ಏರಿಕೆಗೆ ಶಿಫಾರಸು ಮಾಡಿದ್ದು ರಾಜ್ಯ ಸರ್ಕಾರ: ಸಂಸದ ಬೊಮ್ಮಾಯಿ

ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ. ಮುಖ್ಯಮಂತ್ರಿಗಳು ದರ ಏರಿಕೆ ವಿಚಾರವಾಗಿ ನಿರ್ದೇಶನ‌ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ.

ಹುಬ್ಬಳ್ಳಿ: ಬೆಂಗಳೂರು ನಮ್ಮ ಮೆಟ್ರೋ ದರ ಏರಿಕೆಗೆ ಜನರ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ನಡುವೆ ಸರ್ಕಾರ ಹಾಗೂ ವಿರೋಧ ಪಕ್ಷಗಳ ನಡುವೆ ಹಗ್ಗಜಗ್ಗಾಟ ಶುರುವಾಗಿದೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಅವರು, ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ. ಮುಖ್ಯಮಂತ್ರಿಗಳು ದರ ಏರಿಕೆ ವಿಚಾರವಾಗಿ ನಿರ್ದೇಶನ‌ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲದರ ಏರಿಕೆ ಮಾಡುತ್ತಿದೆ ಎಂದು ಆರೋಪಿಸಿದರು.

ಮೆಟ್ರೋ ದರ ವಿಚಾರದಲ್ಲಿ ಎಲ್ಲಾ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯದ ಅಧಿಕಾರಿಗಳಿರುತ್ತಾರೆ. ಅದಕ್ಕೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯ ಮಂತ್ರಿಗಳು ದರ ಏರಿಕೆ ವಿಚಾರವಾಗಿ ನಿರ್ದೇಶನ‌ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ ಎಂದು ಹೇಳಿದರು.

ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲದರ ಏರಿಕೆ ಮಾಡುತ್ತಿದೆ. ವಿದ್ಯುತ್, ನೀರು, ಹಾಲಿನ‌ ದರ ಸೇರಿದಂತೆ ಎಲ್ಲ ದರ ಏರಿಸಿದೆ. ಸರ್ಕಾರ ಹಣಕಾಸಿನ‌‌ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಮೈಸೂರಿನ ಉದಯಗಿರಿ ಗಲಭೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾವಾಗ ಸರ್ಕಾರ ಹಳೇ ಹುಬ್ಬಳ್ಳಿ ಪ್ರಕರಣವನ್ನು ಹಿಂತೆಗೆದುಕೊಂಡಿತೋ ಆಗ ಸರ್ಕಾರ ಯಾರ ಪರ ಇದೆ ಎನ್ನುವುದು ಗೊತ್ತಾಗಿದೆ. ಪೊಲೀಸ್ ಠಾಣೆ ಮೇಲೆ ದಾಳಿ ಮಾಡುವುದರ ಹಿಂದೆ ಯಾರ ಕುಮ್ಮಕ್ಕು ಇದೆ ಎನ್ನುವುದೂ ಗೊತ್ತಾಗುತ್ತದೆ. ಈ‌ ಹಿಂದೆ ತನ್ವೀರ್ ಸೇಠ್ ಮೇಲೆ ಪಿಎಫ್ಐ ದಾಳಿ ಮಾಡಿತ್ತು. ಇಂದು ಆ ಶಕ್ತಿಗಳು ಮತ್ತೆ ಒಂದಾಗಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವವರೇ ಆತಂಕದಲ್ಲಿದ್ದಾರೆ. ಜನರಿಗೆ ರಕ್ಷಣೆ ಕೊಡುವ ಶಕ್ತಿಯೇ ಅವರಲ್ಲಿ‌ ಇಲ್ಲ. ಮುಖ್ಯಮಂತ್ರಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ದಾಳಿ ವಿಚಾರವಾಗಿ ಪೊಲೀಸರಿಗೆ ಎಲ್ಲವೂ ಗೊತ್ತಿದೆ. ಆದರೆ, ರಾಜಕೀಯ ಒತ್ತಡದಿಂದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT