ಸತೀಶ್ ಜಾರಕಿಹೊಳಿ  
ರಾಜಕೀಯ

ಕಾಂಗ್ರೆಸ್ ಹೈಕಮಾಂಡ್ ದೇವಾಲಯವಿದ್ದಂತೆ, ಅಲ್ಲಿ ಯಾರು ಬೇಕಾದರೂ ಹೋಗಿ ಸಲಹೆ ನೀಡಬಹುದು: ಸತೀಶ್ ಜಾರಕಿಹೊಳಿ

ಹೈಕಮಾಂಡ್ ಬಳಿ ಹೇಳಲು ನಮ್ಮ ಪಕ್ಷದಲ್ಲಿ ಎಲ್ಲರೂ ಸ್ವತಂತ್ರರಿದ್ದಾರೆ. ಅಂತಿಮವಾಗಿ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತೆ.

ಮಂಗಳೂರು: ಕಾಂಗ್ರೆಸ್ ಹೈಕಮಾಂಡ್ ದೇವಾಲಯವಿದ್ದಂತೆ, ಅಲ್ಲಿ ಯಾರು ಬೇಕಾದರೂ ಯಾವುದೇ ನಿರ್ಬಂಧಗಳಿಲ್ಲದೆ ಹೋಗಿ ಪಕ್ಷದ ಒಳಿತಿಗಾಗಿ ಸಲಹೆಗಳನ್ನು ನೀಡಬಹುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಂಗಳವಾರ ಹೇಳಿದರು,

ಸಚಿವರಾದ ಕೆ.ಎನ್. ರಾಜಣ್ಣ ಮತ್ತು ಜಿ. ಪರಮೇಶ್ವರ ಸೇರಿದಂತೆ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಪಕ್ಷದ ಹಿರಿಯ ನಾಯಕರನ್ನು ಭೇಟಿಯಾಗಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಾರಕಿಹೊಳಿ ಅವರು, ಪಕ್ಷದ ಬೆಳವಣಿಗೆ ಮತ್ತು ಅಧಿಕಾರಕ್ಕೆ ಮರಳುವುದು ನಮ್ಮ ಗುರಿ. ಪಕ್ಷದೊಳಗಿನ ಸಣ್ಣ ಭಿನ್ನಾಭಿಪ್ರಾಯಗಳನ್ನು ಹೈಕಮಾಂಡ್ ಪರಿಹರಿಸುತ್ತದೆ. ಹೈಕಮಾಂಡ್ ಬಳಿ ಹೇಳಲು ನಮ್ಮ ಪಕ್ಷದಲ್ಲಿ ಎಲ್ಲರೂ ಸ್ವತಂತ್ರರಿದ್ದಾರೆ. ಅಂತಿಮವಾಗಿ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದು ಹೇಳಿದರು.

ದಲಿತ ಸಮಾವೇಶ ನಡೆಸುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಸದ್ಯಕ್ಕೆ ದಲಿತ ಸಮಾವೇಶ ಇಲ್ಲವೇ ಇಲ್ಲ. ಆ ಬಗ್ಗೆ ಖಚಿತವಾದಾಗ ಹೇಳುತ್ತೇನೆ. ಅದು ಗೃಹ ಸಚಿವರ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಅವರು ಯಾವಾಗ ಹೇಳುತ್ತಾರೋ ಆವಾಗ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕುವ ಬಗ್ಗೆ ರಾಜಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಹೈಕಮಾಂಡ್ ಬಳಿ ವಿನಂತಿಸಿದ್ದಾರೆ, ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.

ಸಚಿವ ರಾಜಣ್ಣ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಕೆ.ಸಿ. ಚಂದ್ರಶೇಖರ್‌ ಅವರು ಹೈಕಮಾಂಡ್‌ಗೆ ದೂರು ನೀಡಿದ ಕುರಿತು ಪ್ರತಿಕ್ರಿಯಿಸಿ, ಕಾರ್ಯಾಧ್ಯಕ್ಷರು ಇಲ್ಲೇ ಇರುತ್ತಾರೆ. ರಾಜಣ್ಣ ಅವರನ್ನು ಕರೆಸಿ ಚರ್ಚೆ ನಡೆಸಿ, ಇಲ್ಲಿಯೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಿತ್ತು. ದೆಹಲಿಗೆ ಹೋಗುವ ಅಗತ್ಯ ಇರಲಿಲ್ಲ. ಕಾರ್ಯಾಧ್ಯಕ್ಷರ ಅಧೀನದಲ್ಲೇ ರಾಜಣ್ಣ ಇರೋದಲ್ವಾ ಎಂದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂಬ ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಶಿವಕುಮಾರ್ ಹಾಗೆ ಹೇಳುತ್ತಿದ್ದರೆ, ಈ ವಿಷಯದ ಬಗ್ಗೆ ಹೆಚ್ಚಿನ ಚರ್ಚೆಯ ಅಗತ್ಯವಿಲ್ಲ" ಎಂದು ಹೇಳಿದರು.

ಗೃಹಲಕ್ಷ್ಮಿ ಹಣ ಬಿಡುಗಡೆಯಾಗದ ವಿಚಾರದ ಕುರಿತು ಮಾತನಾಡಿ, ಎರಡು ತಿಂಗಳಿನಿಂದ ಆಗಿಲ್ಲ, ಈಗ ಒಟ್ಟಿಗೇ ಬಿಡುಗಡೆ ಆಗುತ್ತೆ. ಈ ಹಿಂದೆಯೂ ಎರಡು ತಿಂಗಳಿಗೊಮ್ಮೆ ಬಿಡುಗಡೆ ಆಗುತ್ತಾ ಬಂದಿದೆ. ಒಟ್ಟಾರೆ ಹಣ ಕೂಡಿಸಿ ಕೊಡುತ್ತಿದ್ದೇವೆ. ಯೋಜನೆ ನಿಲ್ಲಿಸಿಲ್ಲ. ತಾತ್ಕಾಲಿಕ ತಡವಾಗಿದೆ. ಪೂರ್ತಿ ಕೊಡುವ ಪ್ರಯತ್ನ ಮಾಡ್ತೇವೆ ಎಂದರು.

ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂಬ ಬಿಜೆಪಿಯ ಆರೋಪದ ಬಗ್ಗೆ ಮಾತನಾಡಿ, ರಾಜ್ಯದ ಖಜಾನೆಯನ್ನು ಖಾಲಿ ಮಾಡಿದ್ದು ಬಿಜೆಪಿ. ಹಣವಿಲ್ಲದೆ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದರು. ಇದು ನಮ್ಮ ಮೇಲೆ ಹೊರೆಯಾಗಿದೆ. ನಾವು ಅದನ್ನು ತೆರವುಗೊಳಿಸಿ ಸರಿಪಡಿಸುತ್ತಿದ್ದೇವೆ ಎಂದು ಹೇಳಿದರು.

ಮುಂದಿನ ಸಿಎಂ ಜಾರಕಿಹೊಳಿ ಎಂಬ ಕಾರ್ಯಕರ್ತರ ಹೇಳಿಕೆಗೆ ಪ್ರತಿಕ್ರಿಯಿಸಿ, ಪರಮೇಶ್ವರ್‌, ಡಿಕೆ ಶಿವಕುಮಾರ್‌, ನನ್ನ ಬಗ್ಗೆ ಅಭಿಮಾನಿಗಳು ಹೀಗೆ ಹೇಳುತ್ತಾರೆ. ಅದು ಕಾರ್ಯಕರ್ತರ ಪ್ರೀತಿ. ಸಿಎಂ ಸ್ಥಾನ ಸಿಗೋದು ಅಷ್ಟು ಸುಲಭ ಅಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ, ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': ‘ಜೈಲರ್ 2’ ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ