ಡಾ. ಜಿ. ಪರಮೇಶ್ವರ್ 
ರಾಜಕೀಯ

ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮುನ್ನವೇ KPCC ಅಧ್ಯಕ್ಷರ ಬದಲಾವಣೆ ಮಾಡಿ: ಹೈಕಮಾಂಡ್ ಗೆ ಪರಮೇಶ್ವರ್ ಒತ್ತಾಯ

ಶಿವಕುಮಾರ್ ಅವರನ್ನು ಬದಲಿಸಿ ಹಿಂದುಳಿದ ವರ್ಗಕ್ಕೆ ಸೇರಿದ ನಾಯಕರನ್ನು ನೇಮಕ ಮಾಡುವುದರಿಂದ ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ಪಕ್ಷಕ್ಕೆ ಪ್ರಯೋಜನಕಾರಿಯಾಗಲಿದೆ ಎಂದು ಅವರು ಸಲಹೆ ನೀಡಿದ್ದಾರೆ.

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಪಕ್ಷದೊಳಗಿನ ಅಧಿಕಾರ ಹಂಚಿಕೆ ಜಗಳ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವಂತೆ ಕಾಣುತ್ತಿದೆ. ಹೀಗಾಗಿ ರಾಜಕೀಯ ವಿದ್ಯಮಾನಗಳು ಬಿರುಸುಗೊಳ್ಳುತ್ತಿದೆ. ಈ ಮಧ್ಯೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಗೃಹ ಸಚಿವ ಜಿ. ಪರಮೇಶ್ವರ ಮಂಗಳವಾರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ. ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ್ದಾರೆ, ಈ ವೇಳೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನವೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬದಲಿಸಿ ಹೊಸ ರಾಜ್ಯ ಘಟಕದ ಅಧ್ಯಕ್ಷರನ್ನು ನೇಮಿಸಬೇಕೆಂದು ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ.

ಶಿವಕುಮಾರ್ ಅವರನ್ನು ಬದಲಿಸಿ ಹಿಂದುಳಿದ ವರ್ಗಕ್ಕೆ ಸೇರಿದ ನಾಯಕರನ್ನು ನೇಮಕ ಮಾಡುವುದರಿಂದ ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ಪಕ್ಷಕ್ಕೆ ಪ್ರಯೋಜನಕಾರಿಯಾಗಲಿದೆ ಎಂದು ಅವರು ಸಲಹೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇನ್ನೂ ಇದೇ ವೇಳೆ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆಯೂ ಚರ್ಚಿಸಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಪಾಳಯದೊಂದಿಗೆ ಗುರುತಿಸಿಕೊಂಡಿರುವ ಪರಮೇಶ್ವರ್, ಅಧಿಕಾರ ಹಂಚಿಕೆ' ಒಪ್ಪಂದದ ಪ್ರಕಾರ ಪಕ್ಷವು ನಾಯಕತ್ವವನ್ನು ಬದಲಾಯಿಸಲು ಬಯಸಿದರೆ, ಸಿಎಂ ಹುದ್ದೆಗೆ ಹಿಂದುಳಿದ ವರ್ಗಗಳ ನಾಯಕರನ್ನು ಆಯ್ಕೆ ಮಾಡುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!