ಸಿದ್ದರಾಮಯ್ಯ ಮತ್ತು ಎಚ್.ಸಿ ಮಹಾದೇವಪ್ಪ 
ರಾಜಕೀಯ

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯಗೆ ಕ್ಲೀನ್ ಚಿಟ್: CM ತಪ್ಪು ಮಾಡಿಲ್ಲ ಎಂಬುದು ನಮಗೆ ಗೊತ್ತಿತ್ತು- HC ಮಹಾದೇವಪ್ಪ

ಸಿದ್ದರಾಮಯ್ಯ ಮೊದಲಿನಿಂದಲೂ ಗಟ್ಟಿಯಾಗಿದ್ದರು. ಅವರ ಆತ್ಮಸಾಕ್ಷಿ ಎಂದೂ ತಪ್ಪು ಮಾಡಿಲ್ಲವೆಂದು ಹೇಳುತ್ತಿತ್ತು. ನಮಗೂ ಅವರು ತಪ್ಪು ಮಾಡಿಲ್ಲವೆಂದು ಗೊತ್ತಿತ್ತು ಎಂದರು.

ಮೈಸೂರು: ಮುಡಾ ಪ್ರಕರಣದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿಗೆ ಕಳಂಕ ತರಲು ವಿಪಕ್ಷಗಳು ರಾಜಕೀಯ ಪಿತೂರಿ ನಡೆಸಿದ್ದವು. ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ಸಿಕ್ಕಿರುವುದು ಸಂತೋಷ ತಂದಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಹೇಳಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮೊದಲಿನಿಂದಲೂ ಗಟ್ಟಿಯಾಗಿದ್ದರು. ಅವರ ಆತ್ಮಸಾಕ್ಷಿ ಎಂದೂ ತಪ್ಪು ಮಾಡಿಲ್ಲವೆಂದು ಹೇಳುತ್ತಿತ್ತು. ನಮಗೂ ಅವರು ತಪ್ಪು ಮಾಡಿಲ್ಲವೆಂದು ಗೊತ್ತಿತ್ತು ಎಂದರು.

ಪಕ್ಷದ ಹೈಕಮಾಂಡ್ ಈಗಾಗಲೇ ಸಿದ್ದರಾಮಯ್ಯ ಅವರ ನಾಯಕತ್ವವನ್ನು ಅನುಮೋದಿಸಿರುವುದರಿಂದ ಸಿಎಂ ಬದಲಾವಣೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅವರು ಒತ್ತಿ ಹೇಳಿದರು. "ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಉಳಿಯಬೇಕೆಂದು ಶಾಸಕರು ದೃಢಪಡಿಸಿದ್ದಾರೆ ಮತ್ತು ಹೈಕಮಾಂಡ್ ಕೂಡ ಅದನ್ನೇ ನಿರ್ದೇಶಿಸಿದೆ. ಆದ್ದರಿಂದ, ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ" ಎಂದು ಮಹದೇವಪ್ಪ ಹೇಳಿದರು. ಬಿಜೆಪಿಯ ಸಂಭಾವ್ಯ ಬದಲಾವಣೆಯ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದರು.

ಸಿದ್ದರಾಮಯ್ಯ ಅವರ ಹೆಸರಿಗೆ ಕಳಂಕ ತರುವ ಉದ್ದೇಶದಿಂದ ವಿರೋಧ ಪಕ್ಷಗಳು ನಡೆಸಿದ ರಾಜಕೀಯ ಪಿತೂರಿ ಕೇಸ್‌ ಇದು. ಸಿದ್ದರಾಮಯ್ಯ ಅವರು ತಪ್ಪು ಮಾಡಿಲ್ಲ ಎಂದು ನಮಗೂ ಗೊತ್ತಿತ್ತು. ಲೋಕಾಯುಕ್ತ ಕ್ಲೀನ್‌ಚಿಟ್‌ ನೀಡಿರುವುದು ಸಂತೋಷವಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್