ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡುತ್ತಿರುವ ಹೇಳಿಕೆಗಳನ್ನೆಲ್ಲಾ ಪಟ್ಟಿ ಮಾಡಿಟ್ಟುಕೊಂಡು ಒಂದೇ ಬಾರಿಗೆ ಉತ್ತರ ನೀಡುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗುರುವಾರ ಮಾರ್ಮಿಕವಾಗಿ ಹೇಳಿದರು.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಯತ್ನಾಳ್ ಮಾತನಾಡಿದ್ದಕ್ಕೆಲ್ಲಾ ಉತ್ತರ ಕೊಡಲು ಆಗುವುದಿಲ್ಲ. ನಾನು ರಾಜ್ಯಾಧ್ಯಕ್ಷ. ಮಾಡಲು ಸಾಕಷ್ಟು ಕೆಲಸಗಳಿವೆ. ಅವರು ನನಗೆ ಕೇಳಿದ ಪ್ರಶ್ನೆಗೆ ನಾನೇ ಸಮಯ ಬಂದಾಗ ಉತ್ತರ ಕೊಡುವೆ ಎಂದು ಹೇಳಿದರು.
ಯತ್ನಾಳ್ ಏಕವಚನ ಬಳಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿ, ಯತ್ನಾಳ್ ಹಿರಿಯರು ಇದ್ದಾರೆ. ಏಕವಚನದಲ್ಲಿ ಮಾತನಾಡಿದ್ದಾರೋ, ಇನ್ನೊಂದು ಭಾಷೆಯಲ್ಲಿ ಮಾತನಾಡಿದ್ದಾರೋ ತಲೆ ಕೆಡಿಸಿಕೊಳ್ಳಲ್ಲ. ನಮಗೆ ಪಕ್ಷದಲ್ಲಿ ಕೆಲಸ ಮಾಡಲು ಸಾಕಷ್ಟು ಇದೆ ಎಂದು ತಿಳಿಸಿದರು.