ಸಚಿವ ಸತೀಶ್ ಜಾರಕಿಹೊಳಿ 
ರಾಜಕೀಯ

ಈಗಲ್ಲ, ಮೊದಲಿನಿಂದಲೂ ಡಿಕೆಶಿ ಸಿಎಂ ಹುದ್ದೆ ರೇಸ್ ನಲ್ಲಿದ್ದಾರೆ: ಸತೀಶ್ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷರನ್ನ ನೇಮಿಸುವ ಅಧಿಕಾರ ನಮಗಿಲ್ಲ, ಅದನ್ನ ಹೈಕಮಾಂಡ್ ನೋಡುತ್ತೆ. ಕರ್ನಾಟಕದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಖರ್ಗೆ ಅವರೇ ಹೇಳಿದ್ದಾರೆ. ನನ್ನ ಸಮಯ ಮತ್ತು ಸರದಿಗಾಗಿ ಕಾಯುತ್ತೇನೆ.

ಹುಬ್ಬಳ್ಳಿ: ಈಗಲ್ಲ, ಮೊದಲಿನಿಂದಲೂ ಡಿಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಗೆ ರೇಸ್ ನಲ್ಲಿದ್ದಾರೆಂದು ಸಚಿವ ಸತೀಶ್ ಜಾರಕಿಹೊಳಿಯವರು ಶನಿವಾರ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕುರಿತು ಪಕ್ಷದ ನಾಯಕರು ನೀಡುತ್ತಿರುವ ಹೇಳಿಕೆಗಳನ್ನು ಖಂಡಿಸಿದರು. ಬಳಿಕ ನಾನು ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದರು.

ಕೆಪಿಸಿಸಿ ಅಧ್ಯಕ್ಷರನ್ನ ನೇಮಿಸುವ ಅಧಿಕಾರ ನಮಗಿಲ್ಲ, ಅದನ್ನ ಹೈಕಮಾಂಡ್ ನೋಡುತ್ತೆ. ಕರ್ನಾಟಕದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಖರ್ಗೆ ಅವರೇ ಹೇಳಿದ್ದಾರೆ. ನನ್ನ ಸಮಯ ಮತ್ತು ಸರದಿಗಾಗಿ ಕಾಯುತ್ತೇನೆ. ದೇಶದ ನಾನಾ ರಾಜ್ಯಗಳ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಿದೆ. ಈಗ ತಕ್ಷಣ ಮಾಡಲು ಆಗದೆ ಇರಬಹುದು, ಆದರೆ, ಆಗಿಯೇ ಆಗುತ್ತೆ. ಅವರು ಯಾವಾಗ ಮಾಡುತ್ತಾರೆ ಎನ್ನುವುದನ್ನು ಕಾದು ನೋಡೋಣ. ನಾನಂತೂ ಯಾವುದೇ ರೀತಿಯ ಆಕಾಂಕ್ಷಿ ಅಲ್ಲ. ನಾನು ಅಧ್ಯಕ್ಷ ಆಗಬೇಕು ಅಂತ ನನ್ನ ಹಿಂಬಾಲಕರು, ಪ್ರಮುಖರು ಇಂಗಿತ ವ್ಯಕ್ತಪಡಿಸಿದ್ದಾರೆ. ಇದು ಸಹಜ ಕೂಡ. ಸಂದರ್ಭ ಬಂದಾಗ ನೋಡೋಣ ಎಂದು ಹೇಳಿದರು.

ಬಜೆಟ್ ನಂತರ ಸಿಎಂ ಬದಲಾವಣೆ, ಸಚಿವ ಸಂಪುಟ ಪುನರ್ ರಚನೆ ವಿಚಾರವಾಗಿ ಪ್ರತಿಕ್ರಿಯಿಸಿ, ಇದು ನನ್ನ ವ್ಯಾಪ್ತಿಗೆ ಬರಲ್ಲ ಎಂದು ನಾನು ಹೇಳಿದ್ದೇನೆ. ನಾನು ಮಂತ್ರಿ ಮಂಡಲದಲ್ಲಿ ಒಬ್ಬ ಮಂತ್ರಿ ಅಷ್ಟೇ. ಆ ಬಗ್ಗೆ ಚರ್ಚೆ ಮಾಡುವ ಅಧಿಕಾರ ನಮಗಿಲ್ಲ. ಏನೇ ಇದ್ದರೂ ಈ ಬಗ್ಗೆ ವರಿಷ್ಠರೇ ಚರ್ಚೆ ಮಾಡಬೇಕು. ಈಗಾಗಲೇ ಸಚಿವರ ಕಾರ್ಯ ವೈಖರಿ ಬಗ್ಗೆ ವರದಿ ತೆಗೆದುಕೊಂಡಿದ್ದಾರೆ. ಯಾವ ಸಚಿವರನ್ನು ತೆಗೆದುಕೊಳ್ಳಬೇಕು, ಕೈ ಬಿಡಬೇಕು ಎಂದು ಹಿರಿಯ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಿದೆ ಎಂಬ ವರದಿಗಳ ಕುರಿತು ಮಾತನಾಡಿ, ಅವೆಲ್ಲವೂ ಕೇವಲ ವದಂತಿಗಳಷ್ಟೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT