ನಿಖಿಲ್ ಕುಮಾರಸ್ವಾಮಿ  
ರಾಜಕೀಯ

ಕಾಂಗ್ರೆಸ್ ಆಂತರಿಕ ಕಚ್ಚಾಟದಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ: JDS

ಕಾಂಗ್ರೆಸ್ ನಾಯಕರು ತಮ್ಮ ಆಂತರಿಕ ಜಗಳಗಳಲ್ಲಿ ನಿರತರಾಗಿದ್ದಾರೆ. ಆಡಳಿತದತ್ತ ಗಮನಹರಿಸುತ್ತಿಲ್ಲ.

ಬೆಂಗಳೂರು: ಕಾಂಗ್ರೆಸ್‌ನಲ್ಲಿನ ಆಂತರಿಕ ಭಿನ್ನಾಭಿಪ್ರಾಯಗಳಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬವಾಗಿದೆ. ರಾಜ್ಯದ ಆಡಳಿತಾರೂಢ ಪಕ್ಷದ ಸಚಿವರಲ್ಲಿ ಸಮನ್ವಯವಿಲ್ಲ ಎಂದು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಶನಿವಾರ ಹೇಳಿದರು.

ತುಮಕೂರಿನಲ್ಲಿ ಜೆಡಿಎಸ್ ನಾಯಕರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ನಾಯಕರು ತಮ್ಮ ಆಂತರಿಕ ಜಗಳಗಳಲ್ಲಿ ನಿರತರಾಗಿದ್ದಾರೆ. ಆಡಳಿತದತ್ತ ಗಮನಹರಿಸುತ್ತಿಲ್ಲ ಎಂದು ಕಿಡಿಕಾರಿದರು.

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದ್ದುಸ ತಳಮಟ್ಟದ ಎರಡೂ ಪಕ್ಷದ ಕಾರ್ಯಕರ್ತರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವ ಕುರಿತು ಎರಡೂ ಪಕ್ಷಗಳ ಹಿರಿಯ ನಾಯಕರು ನಿರ್ಧರಿಸುತ್ತಾರೆ ಎಂದು ಹೇಳಿದರು.

ಎಚ್ ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾದ ಮೇಲೆ ಕೆಲಸ ಮಾಡುತ್ತಿಲ್ಲ ಎಂಬ ಟೀಕೆಗಳಿಗೆ ಉತ್ತರಿಸಿ, ಕೇಂದ್ರ ಸಚಿವರಾಗಿ ತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ಹೊರತಾಗಿಯೂ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಪಕ್ಷದ ಕೆಲಸಕ್ಕೆ ಸಾಕಷ್ಟು ಸಮಯವನ್ನು ನೀಡುತ್ತಿದ್ದಾರೆ. ವಯಸ್ಸಿಗೆ ಮೀರಿ ಎಚ್ ಡಿ ಕುಮಾರಸ್ವಾಮಿ ಕೆಲಸ ಮಾಡುತ್ತಿದ್ದಾರೆ, ಹೀಗಾಗಿ ಜೆಡಿಎಸ್ ರಾಜ್ಯ ಅಧ್ಯಕ್ಷರ ಬದಲಾವಣೆಯ ಪ್ರಶ್ನೆ ಅಪ್ರಸ್ತುತ. ಸದ್ಯಕ್ಕೆ ಜೆಡಿಎಸ್ ಅಧ್ಯಕ್ಷರಾಗಿ ಎಚ್ ಡಿ ಕುಮಾರಸ್ವಾಮಿ ಅವರೇ ಮುಂದುವರಿಯುತ್ತಾರೆಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: Quad ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು Quad ಮಹತ್ವದ ತೀರ್ಮಾನ; ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

SCROLL FOR NEXT