ಡಾ. ಜಿ. ಪರಮೇಶ್ವರ್ 
ರಾಜಕೀಯ

ನೀವು ಹೇಳಿದರೆ ನಾಳೆಯೇ ರಾಜೀನಾಮೆ ಕೊಡಲು ಸಿದ್ಧ : ಗೃಹ ಸಚಿವ ಪರಮೇಶ್ವರ್

ಇತ್ತೀಚೆಗೆ ಕ್ಷೇತ್ರದ ಕಾರ್ಯಕರ್ತರೊಂದಿಗೆ ಬೆರೆಯಲು ಆಗುತ್ತಿಲ್ಲ. ನಿಮ್ಮ ಮನಸಿನ ಆಕಾಂಕ್ಷೆಯಂತೆ ಸ್ಪಂದಿಸಲು ಆಗುತ್ತಿಲ್ಲ. ನೀವು ಹೇಳಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಅಂತ ಹೇಳಿದ್ದಾರೆ.

ತುಮಕೂರು: ಸದ್ಯ ಆಡಳಿತಾರೂಢ ಕಾಂಗ್ರೆಸ್‌ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ಕೋಲಾಹಲ ಎಬ್ಬಿಸಿದೆ. ಈ ಚರ್ಚೆ ನಡುವೆಯೇ ಗೃಹ ಸಚಿವ ಜಿ. ಪರಮೇಶ್ವರ್​ ರಾಜೀನಾಮೆಯ ಮಾತನಾಡಿದ್ದಾರೆ. ಇದರಿಂದ ಕಾರ್ಯಕರ್ತರು ವಿಚಲಿತರಾಗಿದ್ದಾರೆ.

ತುಮಕೂರಿನ ಕೊರಟಗೆರೆಯ ರಾಜೀವ್‌ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಸಚಿವರು ರಾಜೀನಾಮೆಯ ಮಾತುಗಳನ್ನಾಡಿದ್ದಾರೆ. ಕಾರ್ಯಕರ್ತರ ಮನದಾಳಕ್ಕೆ ಸ್ಪಂದಿಸಲು ಆಗದ್ದಕ್ಕೆ ಬೇಸರ ಹೊರಹಾಕಿದ್ದಾರೆ. ಇತ್ತೀಚೆಗೆ ಕ್ಷೇತ್ರದ ಕಾರ್ಯಕರ್ತರೊಂದಿಗೆ ಬೆರೆಯಲು ಆಗುತ್ತಿಲ್ಲ. ನಿಮ್ಮ ಮನಸಿನ ಆಕಾಂಕ್ಷೆಯಂತೆ ಸ್ಪಂದಿಸಲು ಆಗುತ್ತಿಲ್ಲ. ನೀವು ಹೇಳಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಅಂತ ಹೇಳಿದ್ದಾರೆ.

ನಿಮಗೆಲ್ಲ ನಿರಾಸೆಯಾಗಿರಬಹುದು ನಿಮ್ಮ ಕೈಗೆ ಸಿಗೋದಿಲ್ಲ, ಪಂಚಾಯಿತಿಗೆ ಬರೋದಿಲ್ಲ, ನಮನ್ನ ಮಾತಾಡಿಸೋದಿಲ್ಲ. ಇದೆಲ್ಲಾ ನಮಗೂ ಅನಿಸುತ್ತೆ ನಿಮಗೂ ಅನಿಸುತ್ತೆ. ಆದರೆ ಸಮಯ ನನ್ನ ಕೈಯಲ್ಲಿ ಇಲ್ಲ.

ನೀವೆಲ್ಲಾ ದೊಡ್ಡ ಮನುಸ್ಸು ಮಾಡಿ ಒಂದೇ ಮಾತಲ್ಲಿ ಹೇಳಿಬಿಟ್ರೆ ನಾಳೇನೆ ರಾಜೀನಾಮೆ ಕೊಡುತ್ತೇನೆ. ಆಗ ನಾನು ನಿಮ್ಮ ಜತೆಯಲ್ಲಿ ಇರುತ್ತೇನೆ ಎಂದು ಹೇಳಿದ್ದಾರೆ. ಇದರಿಂದ ವಿಚಲಿತರಾದ ಕಾರ್ಯಕರ್ತರು ಹಾಗೂ ʻಕೈʼ ಮುಖಂಡರು ರಾಜೀನಾಮೆ ಕೊಡಬೇಡಿ ಎಂದು ಕೂಗಲು ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026 : ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಆಸ್ಪತ್ರೆಗೆ ಭೇಟಿ ನೀಡಿ, ಫ್ಲೈದುಬೈ ಹೀರೋ ಸ್ಮಿತ್ ಮಚ್ಚಾರ್ ಹಣೆಗೆ ಮುತ್ತಿಟ್ಟ ದುಬೈ ಕ್ರೌನ್ ಪ್ರಿನ್ಸ್! ಹೇಳಿದ್ದೇನು?

ವಿಂಡೀಸ್ ವಿರುದ್ಧದ ಪಂದ್ಯದಲ್ಲಿ 9ನೇ ಶತಕ ಸಿಡಿಸಿದ KL Rahul: 10,000 ಅಂತಾರಾಷ್ಟ್ರೀಯ ರನ್!

ಅಂತಿಮ ಹಂತದಲ್ಲಿ 21 ಚಿನ್ನದ ಪದಕಗಳು: 2026 ರ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಒಟ್ಟು 85 ಪದಕ!

Asian Games 2026: ಪಾಕಿಸ್ತಾನ ಬಗ್ಗು ಬಡಿದ ಭಾರತಕ್ಕೆ ಮತ್ತೊಂದು ಚಿನ್ನ: ಗೋಲ್ಡ್ ಗೆದ್ದ ಕುಸ್ತಿಪಟು ಅಮನ್!