ಗೃಹ ಸಚಿವ ಜಿ ಪರಮೇಶ್ವರ್ 
ರಾಜಕೀಯ

ಖಾಸಗಿ ಕೆಲಸ ನಿಮಿತ್ತ ದೆಹಲಿಗೆ ಹೋಗಿದ್ದೆ, ವಿಶೇಷ ಅರ್ಥ ಕಲ್ಪಿಸದಿರಿ: ಸಚಿವ ಪರಮೇಶ್ವರ್

ಇದೇ ವೇಳೆ ತಮ್ಮ ಬೆಂಬಲಿಗರು ತಾವು ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತಿದ್ದಾರೆಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದರು.

ಬೆಂಗಳೂರು: ಖಾಸಗಿ ಕೆಲಸಜ ನಿಮಿತ್ತ ದೆಹಲಿಗೆ ಹೋಗಿದ್ದೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಸೋಮವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದೆ. ಅಲ್ಲಿಗೆ ಹೋಗದೆ ಹೆಚ್ಚು ಕಡಿಮೆ ಒಂದು ವರ್ಷವಾಗಿತ್ತು, ದೆಹಲಿಯಲ್ಲಿ ತಮ್ಮ ಕಾಂಗ್ರೆಸ್ ಕೇಂದ್ರ ಕಚೇರಿ ಇರುವುದರಿಂದ (ಎಐಸಿಸಿ ಕೇಂದ್ರ ಕಚೇರಿ) ಕೇಂದ್ರ ಕಚೇರಿಗೂ ಭೇಟಿ ನೀಡುವುದು ವಾಡಿಕೆ, ಹೀಗಾಗಿ ದೆಹಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅವಶ್ಯಕತೆಯಿಲ್ಲವೆಂದು ಹೇಳಿದರು.

ಇದೇ ವೇಳೆ ತಮ್ಮ ಬೆಂಬಲಿಗರು ತಾವು ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತಿದ್ದಾರೆಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದರು.

ನಾನು ಅದರ ಬಗ್ಗೆ ಏನೂ ಮಾತನಾಡುವುದಿಲ್ಲ. ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ವಿಷಯಗಳ ಬಗ್ಗೆ ನಾನು ಬಹಿರಂಗವಾಗಿ ಮಾತನಾಡುವುದಿಲ್ಲ. ನಮ್ಮ ಪಕ್ಷದ ಸಾಮಾನ್ಯ ನಿಯಮವೆಂದರೆ ನಮ್ಮ ಭಾವನೆಗಳನ್ನು ಹೈಕಮಾಂಡ್‌ಗೆ ವ್ಯಕ್ತಪಡಿಸುವುದು. ಇದನ್ನು ಪಕ್ಷದ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ. ನಾನು ಸೇರಿದಂತೆ ಎಲ್ಲರೂ ಅದನ್ನೇ ಮಾಡುತ್ತೇವೆ ಎಂದು ಹೇಳಿದರು.

ಸಚಿವ ಸ್ಥಾನಕ್ಕೆ ರಾಜೀನಾಮೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಕೊರಟಗೆರೆಯಲ್ಲಿ ಕಾರ್ಯಕರ್ತರೊಂದಿಗೆ ಮಾತನಾಡುವಾಗ ಅವರ ಅನಿಸಿಕೆ ಆಧಾರದ ಮೇಲೆ ಮಾತನಾಡಿದ್ದೇನೆ. ಅದಕ್ಕೆ ಅಷ್ಟೊಂದು ಮಹತ್ವ ಕೊಡುವ ಅಗತ್ಯತೆ ಇಲ್ಲ. ಇದರಿಂದ ಯಾವ ಸಂಚಲನ ಮಾಡಬೇಕಾದ ಅಗತ್ಯವಿಲ್ಲ. ನನ್ನ ರಾಜಕೀಯದ ವಿಚಾರ ಕೊರಟಗೆರೆ ಜನತೆಗೆ ಬಿಟ್ಟಿರುವುದು. ಕೊರಟಗೆರೆ ಜನ ನನ್ನನ್ನು ಆರಿಸಿದ್ದಾರೆ. ಅವರ ಏನು ಆಪೇಕ್ಷೆ ಪಡುತ್ತಾರೆ, ಅದ‌ನ್ನು ಮಾತಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮಾತನಾಡಿ, ಪೊಲೀಸರು ಅಗತ್ಯ ಕ್ರಮ ಕೈಗೊಂಡಿದ್ದಾರೆಂದು ಹೇಳಿದರು.

ಮೈಸೂರು ಉದಯಗಿರಿ ಗಲಾಟೆಗೆ ಯಾರು ಕಾರಣಕರ್ತರಾಗಿದ್ದರು ಅವರನ್ನೆಲ್ಲ ಪೊಲೀಸರು ಬಂಧಿಸಿದ್ದಾರೆ. ತನಿಖೆ ಮುಂದುವರಿದಿದೆ. ಈ ಸಂದರ್ಭದಲ್ಲಿ ಬಿಜೆಪಿಯವರು ಘಟನೆಯನ್ನು ರಾಜಕೀಯ ಅಸ್ತ್ರವಾಗಿ ಉಪಯೋಗ ಮಾಡಿಕೊಂಡು ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪ ಮಾಡಿದರು.

ಬಿಜೆಪಿಯವರು ಮೈಸೂರಿನಲ್ಲಿ ಇಂದು ಪ್ರತಿಭಟನೆ ಮಾಡಲು ಅನುಮತಿ ಕೋರಿ ಪೊಲೀಸರಿಗೆ ಮನವಿ ಮಾಡಿದ್ದರು‌. ಪ್ರತಿಭಟನೆ‌ ನಡೆಸುವುದಕ್ಕೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ಈ ವಿಚಾರಚಾಗಿ ಅನುಮತಿ ಕೋರಿ ಹೈಕೋರ್ಟ್‌ಗೆ ಹೋಗಿದ್ದಾರೆ. ಕೋರ್ಟ್‌ನಲ್ಲಿ ಏನು ತೀರ್ಮಾನ ಬರುತ್ತದೆಯೇ ನೋಡಬೇಕು. ಮೈಸೂರು ಗಲಾಟೆ ವಿಚಾರದಲ್ಲಿ ಹೆಚ್ಚು ರಾಜಕೀಯ ಮಾಡುವ ಬದಲು, ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ನಮಗೆ ಅವಕಾಶ‌ ಮಾಡಿದರೆ ಒಳ್ಳೆಯದು. ಅದನ್ನು ಬಿಟ್ಟು ರಾಜಕೀಯ ಮಾಡಿದರೆ ಸರಿ ಹೋಗುವುದಿಲ್ಲ ಎಂದು ಎಚ್ಚರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT