ಸಚಿವ ಪ್ರಿಯಾಂಕ್ ಖರ್ಗೆ online desk
ರಾಜಕೀಯ

"ಪ್ರಿಯಾಂಕ್ ಖರ್ಗೆ ಕಲಬುರಗಿಯ ನಿಜಾಮ, ರಿಪಬ್ಲಿಕ್ ಆಫ್ ಕಲ್ಬುರ್ಗಿಯಲ್ಲಿ ಸುಪಾರಿ ಹಂತಕರ ಅಂಧಾ ದರ್ಬಾರ್"

ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣ ಪೋಸ್ಟ್ ವಾರ್ ಆರಂಭಿಸಿದ್ದು, ಸಚಿವ ಪ್ರಿಯಾಂಕ್ ಖರ್ಗೆಯನ್ನು ಕಲಬುರಗಿಯ ನಿಜಾಮ ಎಂದು ಹೇಳಿದೆ.

ಕಲಬುರಗಿ: ಬೀದರ್‌ನಲ್ಲಿ ಯುವ ಗುತ್ತಿಗೆದಾರ ಸಚೀನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದ ಸಂಬಂಧ ಬಿಜೆಪಿ-ಕಾಂಗ್ರೆಸ್ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿವೆ. ಈ ಮಧ್ಯೆ ಎರಡೂ ಪಕ್ಷಗಳ ಸೋಶಿಯಲ್ ಮೀಡಿಯಾ ಪೋಸ್ಟ್ ವಾರ್ ಜನರ ಗಮನ ಸೆಳೆಯುತ್ತಿವೆ.

ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣ ಪೋಸ್ಟ್ ವಾರ್ ಆರಂಭಿಸಿದ್ದು, ಸಚಿವ ಪ್ರಿಯಾಂಕ್ ಖರ್ಗೆಯನ್ನು ಕಲಬುರಗಿಯ ನಿಜಾಮ ಎಂದು ಹೇಳಿದೆ.

ಇಷ್ಟೇ ಅಲ್ಲದೇ, ಖರ್ಗೆ ಕುಟುಂಬದವರದ್ದು ಪ್ರಾಯೋಜಿತ ಸುಪಾರಿ ಎಂದೂ ಟೀಕಾ ಪ್ರಹಾರ ನಡೆಸಿರುವ ಬಿಜೆಪಿ "ವಿವಿಧ ರೀತಿಯಲ್ಲಿ ಗೂಂಡಾಗಿರಿಗೆ ಬೇಕಾದ ಸಾಮಗ್ರಿಗಳು ದೊರೆಯುತ್ತವೆ, ಸುಪಾರಿ ನೀಡುವವರು ನಮ್ಮನ್ನು ಸಂಪರ್ಕಿಸಿ" ಎಂದು ಬರೆದಿರುವ ಫಲಕದೊಂದಿಗೆ ಪ್ರಿಯಾಂಕ್ ಖರ್ಗೆಯ ವ್ಯಂಗ್ಯ ಚಿತ್ರ ರಚಿಸಿ ವ್ಯಂಗ್ಯವಾಡಿದೆ.

ಇದಕ್ಕೂ ಮೊದಲು ಖರ್ಗೆ ಪ್ರಾಯೋಜಿತ ಸುಪಾರಿ ಎಂಬ ಪೋಸ್ಟರ್‌ ಅಂಟಿಸಿದ್ದ ಬಿಜೆಪಿ ನಾಯಕರು, ಪ್ರಿಯಾಂಕ್ ಖರ್ಗೆ, ಕಾಂಗ್ರೆಸ್ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶವ್ಯಕ್ತಪಡಿಸಿದ್ದರು. ಈ ಘಟನೆಗಳ ಹಿನ್ನೆಲೆಯಲ್ಲಿ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಪ್ರಿಯಾಂಕ್ ಖರ್ಗೆ ಸರ್ಕಾರಿ ನಿವಾಸಕ್ಕೆ ‌ಪೊಲೀಸರು ಭದ್ರತೆ ಒದಗಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT